ಚಿತ್ರದುರ್ಗ ಭೀಕರ ಬಸ್ ಅಪಘಾತ: ಬಸ್ ಚಾಲಕ, ನಿರ್ವಾಹಕ ಗ್ರೇಟ್ ಎಸ್ಕೇಪ್

ಚಿತ್ರದುರ್ಗ ಭೀಕರ ಬಸ್ ಅಪಘಾತ: ಬಸ್ ಚಾಲಕ, ನಿರ್ವಾಹಕ ಗ್ರೇಟ್ ಎಸ್ಕೇಪ್


ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕನಿಷ್ಠ 17 ಮಂದಿ ಸಜೀವದಹನವಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ ಎದುರಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಬೆಂಕಿ ಹೊತ್ತಿಕೊಂಡು ಭಸ್ಮವಾಗಿದೆ. ಬೆಂಕಿ ಹೊತ್ತಿಕೊಳ್ಳುವಂತೆಯೇ ಬಸ್‌ನ ಚಾಲಕ ಮತ್ತು ನಿರ್ವಾಹಕ ತಕ್ಷಣವೇ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಚಾಲಕ ಘಟನಾ ಸ್ಥಳದಲ್ಲಿಯೇ ಇದೆ. ಬಸ್‌ನಲ್ಲಿ 14 ಮಹಿಳೆಯರು ಮತ್ತು 15 ಪುರುಷರು. 21 ಮಂದಿಯನ್ನು ಹಿರಿಯೂರು ಮತ್ತು ತುಮಕೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನೆ ಕುರಿತು ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಪಘಾತದ ಕುರಿತು ಹೆಚ್ಚಿನ ಮಾಹಿತಿಗೆ: ಮತ್ತೊಂದು ಘನಘೋರ ದುರಂತ: ಚಿತ್ರದುರ್ಗ ರಸ್ತೆಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್, 17ಕ್ಕೂ ಹೆಚ್ಚು ಜನ ಸಜೀವ ದಹನ

ಚಿತ್ರದುರ್ಗ ಭೀಕರ ಬಸ್ ಅಪಘಾತ: ಪ್ರಯಾಣಿಕರಲ್ಲಿ ಗೋಕರ್ಣದವರೇ ಹೆಚ್ಚು

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *