ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ? ತಜ್ಞ ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ ನೋಡಿ

ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ? ತಜ್ಞ ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ ನೋಡಿ


ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ ಅನೇಕ ಮಂದಿ ಆಗಮಿಸಿದ್ದು, ಹಲವು ಮಂದಿ ಸುತ್ತು ಕರಕಲಾಗಿದ್ದಾರೆ. ಅವರ ಮೃತದೇಹಗಳ ಗುರುತು ಪತ್ತೆ ಮಾಡುವುದು ಸವಾಲಾಗಿದೆ. ಪ್ರಸ್ತುತ, ನಾಲ್ಕು ಮೃತದೇಹಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ, ಅವು ಹೆಚ್ಚು ಸುಟ್ಟುಹೋಗಿರುವ ಕಾರಣ ನೇರವಾಗಿ ಗುರುತಿಸಲು ಸಾಧ್ಯವಾಗುತ್ತಿಲ್ಲ.

ಮೃತದೇಹಗಳ ಪತ್ತೆ ಕಾರ್ಯದ ಬಗ್ಗೆ ಚಿತ್ರದುರ್ಗದ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ರವೀಂದ್ರ ಅವರು ಮಾಹಿತಿ ನೀಡಿದ್ದಾರೆ. ಮೃತದೇಹಗಳ ಗುರುತು ಪತ್ತೆಗೆ ಮುಂದಾಗಬೇಕಿದ್ದು, ಒಂದು ವೇಳೆ ಗುರುತು ಇದ್ದಲ್ಲಿ ಡಿಎನ್‌ಎ ಪರೀಕ್ಷೆ ಅನಿವಾರ್ಯವಾಗಿದೆ. ಡಿಎನ್‌ಎ ಪರೀಕ್ಷೆಗಾಗಿ ಮೋಲಾರ್ ಟೂತ್ ಮತ್ತು ಎದೆಯ ಸ್ಟರ್ನಮ್ ಮೂಳೆಯ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಪ್ರಕ್ರಿಯೆ ಸುಮಾರು ಮೂರು ದಿನಗಳನ್ನು ತೆಗೆದುಕೊಳ್ಳುತ್ತದೆ. ಅಲ್ಲಿಯವರೆಗೂ ಮೃತದೇಹಗಳನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಸಂರಕ್ಷಿಸಲಾಗಿದೆ. ವಿಧಿವಿಜ್ಞಾನಾದ ಡಾ. ವೇಣು ಮತ್ತು ಡಾ. ಅಜಯ್ ಅವರು ಈ ಗುರುತು ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಈ ವಿಧಾನದ ಮೂಲಕ ಮೃತದೇಹಗಳ ಗುರುತು ದೃಢೀಕರಣಕ್ಕೆ ಹಸ್ತಾಂತರಿಸುವ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಡಾ. ರವೀಂದ್ರ. ಅವರ ಮಾತಿನ ವಿಡಿಯೋ ಇಲ್ಲಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *