ಚಿಕ್ಕಬಳ್ಳಾಪುರ, (ಡಿಸೆಂಬರ್ 25): ಚಿತ್ರದುರ್ಗದಲ್ಲಿ ನಡೆದ ಭೀಕರ ದುರಂತದ ಮಾಸುವ ಮುನ್ನವೇ, ಚಿಕ್ಕಬಳ್ಳಾಪುರದಲ್ಲಿ (ಚಿಕ್ಕಬಳ್ಳಾಪುರ) ಹೃದಯವಿದ್ರಾವಕ ಅಪಘಾತ ಸಂಭವಿಸಿದೆ. ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮನೋಜ್, ನರಸಿಂಹಮೂರ್ತಿ ನಂದೀಶ್ ಹಾಗೂ ಅರುಣ್ ಮೃತ ಯುವಕರು. ಮೃತರು ಅಜ್ಜವಾರ ಗ್ರಾಮದ ಯುವಕರಾಗಿದ್ದರೆ, ಒಂದೇ ಬೈಕಿನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದರು.
ಮನೋಜ್, ನರಸಿಂಹಮೂರ್ತಿ ನಂದೀಶ್ ಹಾಗೂ ಅರುಣ್ ಮೃತ ಯುವಕರು. ಇನ್ನು ಈ ಮೇಲಿನ ನರಸಿಂಹಮೂರ್ತಿ ಹಾಗೂ ನಂದೀಶ್ ಅಣ್ಣತಮ್ಮಂದಿರು. ಚಿಕ್ಕಬಳ್ಳಾಪುರದಿಂದ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕರು, ಅಜ್ಜವಾರ ಕ್ರಾಸ್‌ನಲ್ಲಿ ತಿರುವು ಪಡೆಯಲು ಯತ್ನಿಸಿದ್ದಾರೆ. ಆದರೆ ವೇಗವಾಗಿ ಬರುತ್ತಿದ್ದ ಟಿಪ್ಪರ್ ಬೈಕ್‌ಗೆ ಗುದ್ದಿದೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲಿಯೇ ಪ್ರದರ್ಶನ ಮಾಡಿದ್ದಾರೆ.
ಇದನ್ನೂ ಓದಿ: Chitradurga Bus Accident: ಮದುವೆಗೂ ಮುನ್ನ ಮಸಣ ಸೇರಿದ ಯುವತಿ; ತಾಯಿ-ಮಗಳು ಅಗ್ನಿಗೆ ಆಹುತಿ
ಇನ್ನು ನರಸಿಂಹ ಕೇವಲ ಆರು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ವಿವಾಹವಾಗಿದ್ದಾಳೆ ಎಂದು ತಿಳಿದು ಬಂದಿದೆ. ಇನ್ನು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸೆ ಸೇರಿದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.