ನೈಜೀರಿಯಾ, ಡಿಸೆಂಬರ್ 26: ನೈಜೀರಿಯಾದಲ್ಲಿ ಕ್ರಿಶ್ಚಿಯನ್ನರನ್ನು ಕೊಲ್ಲುವುದನ್ನು ನಿಲ್ಲಿಸುವಂತೆ ಐಸಿಸ್ಗೆ ಎಚ್ಚರಿಕೆ ನೀಡಿದ್ದಾರೆ ಟ್ರಂಪ್, ಕ್ರಿಸ್ಮಸ್ ಹಬ್ಬದ ದಿನವೇ ಐಸಿಸ್ ನೆಲೆಗಳ ಮೇಲೆ ಮಾರಕ ದಾಳಿಯ ಸ್ಥಳ. ನೈಜೀರಿಯಾ ಅಧಿಕಾರಿಗಳ ಕೋರಿಕೆಯ ಮೇರೆಗೆ ದಾಳಿಯಲ್ಲಿ ಹಲವು ಐಸಿಸ್ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಇಲಾಖೆ ತಿಳಿಸಿದೆ. ಕ್ರೈಸ್ತರ ಹತ್ಯೆಯನ್ನು ನಿಲ್ಲಿಸದಿದ್ದರೆ, ನರಕದಂಥಾ ಶಿಕ್ಷೆ ಇಲ್ಲೇ ಕಾಣುವಿರಿ ಎಂದು ಎಚ್ಚರಿಕೆ ನೀಡಲಾಗಿದೆ. ನಮ್ಮ ಸೇನೆಗೆ ದೇವರ ಆಶೀರ್ವಾದ ಸದಾ ಇರಲಿ, ಮೃತ ಭಯೋತ್ಪಾದಕರು ಸೇರಿದಂತೆ ಎಲ್ಲರಿಗೂ ಕ್ರಿಸ್ಮಸ್ ಹಬ್ಬದ ಶುಭಾಶಯಗಳು, ಕ್ರಿಶ್ಚಿಯನ್ನರ ಮೇಲೆ ದಾಳಿ ನಡೆಯುತ್ತಿದೆ, ಉಗ್ರರು ಇನ್ನೂ ಕೆಟ್ಟ ಸಾವನ್ನು ಕಾಣುತ್ತಾರೆ ಎಂದು ಟ್ರಂಪ್ ಹೇಳಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ