ಮುಂಬೈ: ಮುಂಬರುವ ಅಂಡರ್-19 ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ಯುವ ತಂಡವನ್ನು ಪ್ರಕಟಿಸಲಾಗಿದೆ. ಈ ಕುರಿತಾದ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.

ಮುಂದಿನ ವರ್ಷ ಜ.15ರಿಂದ ಫೆ.6ರ ವರೆಗೂ ಜಿಂಬಾಬ್ವೆ ಹಾಗೂ ನಮೀಬಿಯಾದಲ್ಲಿ ನಡೆಯಲಿರುವ ಅಂಡರ್-19 ಏಕದಿನ ವಿಶ್ವಕಪ್ಗೆ ಶನಿವಾರ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿತು.

ಆಯುಷ್ ಮ್ಹಾತ್ರೆ ಭಾರತ ಅಂಡರ್-19 ತಂಡವನ್ನು ಮುನ್ನಡೆಸಲಿದ್ದಾರೆ. ಈ ಹಿಂದೆ ಅಂಡರ್-19 ಏಷ್ಯಾಕಪ್ ಟೂರ್ನಿಯಲ್ಲೂ ಆಯುಷ್ ಮ್ಹಾತ್ರೆಯೇ ಭಾರತ ತಂಡವನ್ನು ಮುನ್ನಡೆಸಿದ್ದರು.

ಈ ಬಾರಿಯ ಅಂಡರ್-19 ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಕರ್ನಾಟಕದ ಆಟಗಾರರಿಲ್ಲ.

ಇದಕ್ಕೂ ಮುನ್ನ ದ.ಆಫ್ರಿಕಾ ವಿರುದ್ಧ ಭಾರತ ತಂಡ 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿಗೆ ಮ್ಹಾತ್ರೆ ಹಾಗೂ ಉಪನಾಯಕ ವಿಹಾನ್ ಮಲ್ಹೋತ್ರಾ ಗೈರಾಗಲಿದ್ದಾರೆ.

ಅವರಿಬ್ಬರ ಅನುಪಸ್ಥಿತಿಯಲ್ಲಿ ದಕ್ಷಿಣ ಆಫ್ರಿಕಾ ಎದುರಿನ ಟಿ20 ಸರಣಿಯಲ್ಲಿ ಭಾರತ ತಂಡವನ್ನು ವೈಭವ್ ಸೂರ್ಯವಂಶಿ ಮುನ್ನಡೆಸಲಿದ್ದಾರೆ.

ಭಾರತ ತಂಡವು ಜನವರಿ 15ರಂದು ಮೊದಲ ಪಂದ್ಯದಲ್ಲಿ ಯುಎಸ್ಎ ಎದುರು ಕಣಕ್ಕಿಳಿಯಲಿದೆ. ಇದಾದ ಬಳಿಕ ಗ್ರೂಪ್ ಹಂತದಲ್ಲಿ ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್ ತಂಡದ ಸವಾಲನ್ನು ಎದುರಿಸಲಿದೆ.

ಐಸಿಸಿ ಅಂಡರ್-19 ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ಐದು ಬಾರಿ ಚಾಂಪಿಯನ್ ಆಗುವ ಮೂಲಕ ಈ ಟೂರ್ನಿಯ ಇತಿಹಾಸದಲ್ಲಿ ಅತಿಹೆಚ್ಚು ಯಶಸ್ವಿ ತಂಡವಾಗಿ ಭಾರತ ಗುರುತಿಸಿಕೊಂಡಿದೆ.

ಆಯುಷ್ ಮ್ಹಾತ್ರೆ (ನಾಯಕ), ವಿಹಾನ್ ಮಲ್ಹೋತ್ರಾ (ಉಪನಾಯಕ), ವೈಭವ್ ಸೂರ್ಯವಂಶಿ, ಆ್ಯರೋನ್ ಜಾರ್ಜ್, ವೇದಾಂತ್ ತ್ರಿವೇದಿ, ಅಭಿಗ್ಯಾನ್ ಕುಂದು, ಹರ್ವನ್ಶ್ ಸಿಂಗ್, ಆರ್.ಎಸ್.ಅಂಬರೀಶ್, ಕನಿಶ್ಕ್ ಚೌಹಾಣ್, ಖಿಲಾನ್ ಪಟೇಲ್, ಮೊಹಮದ್ ಎನಾನ್, ಹೆನಿಲ್ ಪಟೇಲ್, ದೀಪೇಶ್, ಕಿಶನ್ ಸಿಂಗ್, ಉದ್ಧವ್ ಮೋಹನ್.

Source link
ಅಂಡರ್-19 ಏಕದಿನ ವಿಶ್ವಕಪ್ ಟೂರ್ನಿಗೆ ಬಲಿಷ್ಠ ಭಾರತ ಕ್ರಿಕೆಟ್ ತಂಡ ಪ್ರಕಟ!