ಬೆಂಗಳೂರು, ಡಿಸೆಂಬರ್ 28: ಕರ್ನಾಟಕದಲ್ಲಿ ಕುರ್ಚಿ ಕದನ ಮುಂದುವರೆದಿದ್ದು, ಮುಖ್ಯಮಂತ್ರಿ ಪಟ್ಟಕ್ಕಾಗಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನಡುವೆ ಹಗ್ಗ ಜಗ್ಗಾಟ ನಡೆಯುತ್ತಿದೆ. ಈ ವಿಚಾರವಾಗಿ ಹೈಕಮಾಂಡ್ ನಿರ್ಧಾರದ ನಿರೀಕ್ಷೆಯಿತ್ತು. ಆದರೆ ಮುಖ್ಯಮಂತ್ರಿ ಪಟ್ಟ ಗುದ್ದಾಟಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದ್ದು, ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿರುವುದು ಇದಕ್ಕೆ ಕಾರಣ. ವಿಪಕ್ಷ ನಾಯಕ ಜನವರಿ 8ರಂದು ದೆಹಲಿಗೆ ಮರಳಲಿದೆ, ಅವರ ವಾಪಸಾತಿಯ ನಂತರವೇ ಹೈಕಮಾಂಡ್ ನಾಯಕರ ಜೊತೆಗೆ ಪ್ರತ್ಯೇಕ ಸಭೆ ನಡೆಯುವ ನಿರೀಕ್ಷೆಯಿದೆ.
ಇತ್ತ ಕೈ ಶಾಸಕರು ಮಂತ್ರಿ ಪಟ್ಟಕ್ಕೆ ನಾ ಮುಂದು ತಾ ಮುಂದು ಎಂದು ಮುಗಿಬೀಳುತ್ತಿದ್ದಾರೆ. ಆದರೆ ಇದರ ನಿರ್ಧಾರ ರಾಹುಲ ಗಾಂಧಿ ಬಂದ ಬಳಿಕವೇ. ಸಿದ್ದರಾಮಯ್ಯ ಅವರು ಇತ್ತೀಚೆಗೆ ದೆಹಲಿಗೆ ತೆರಳಿ CWC ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ರಾಜ್ಯದ ಅಧಿಕಾರ ಹಂಚಿಕೆ ಕುರಿತು ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಅವರಿಗೆ ಅವಕಾಶ ಸಿಕ್ಕಿಲ್ಲ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.