ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ

ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ  ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ


ರಾಯಚೂರು, ಡಿಸೆಂಬರ್ 28: ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದಲ್ಲಿ ಕರೀಂ ಸಾಬ್ ಕುಟುಂಬ ಕೋಮು ಸೌಹಾರ್ದತೆಗೆ ಮಾದರಿಯಾಗಿದೆ. ಈ ಮುಸ್ಲಿಂ ಕುಟುಂಬ ಕಳೆದ ನಾಲ್ಕು ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಪ್ರಸಾದದ ವ್ಯವಸ್ಥೆ ಮಾಡುವುದು, ಮಾಲಾಧಾರಿಗಳ ವಿಧಿವಿಧಾನ ಮತ್ತು ಸಂಪ್ರದಾಯದಂತೆ ಭೋಜನವನ್ನು ಸಿದ್ಧಪಡಿಸಲಾಗುತ್ತಿದೆ. ಕರೀಂ ಸಾಬ್ ಕುಟುಂಬವು ಯಾವುದೇ ಧರ್ಮದ ಕಾರ್ಯಕ್ರಮವಿರಲಿ, ಅದು ಉತ್ಸಾಹದಿಂದ ಕೂಡಿರುತ್ತದೆ. ಸುಮಾರು 35ಕ್ಕೂ ಹೆಚ್ಚು ಮಾಲಾಧಾರಿಗಳು ಈ ಭೋಜನ ವ್ಯವಸ್ಥೆಯಲ್ಲಿ ಪಾಲ್ಗೊಂಡಿದ್ದು, ಇವರ ಸೇವೆಗೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *