
<p>Korba Iron bridge, water pipeline theft ಸ್ಥಳೀಯಾಡಳಿತವು 20-30 ಟನ್ ತೂಗುವ ಗಟ್ಟಿಮುಟ್ಟಾದ ಕಬ್ಬಿಣದ ಸೇತುವೆಯನ್ನು ಕಟ್ಟಿಸಿತ್ತು. ಶುಕ್ರವಾರ ರಾತ್ರಿವರೆಗೂ ಜನರು ಇದರ ಮೇಲೆ ಓಡಾಡಿದ್ದಾರೆ.</p><img><p>ಕೋರ್ಬಾ: ವಾಹನ, ಆಭರಣ ಕಳ್ಳತನ ಸಾಮಾನ್ಯ. ಆದರೆ ಛತ್ತೀಸ್‌ಗಢದಲ್ಲಿ ಕಳ್ಳರು ಒಂದು ಹೆಜ್ಜೆ ಮುಂದಕ್ಕೆ ಹೋಗಿ 40 ವರ್ಷ ಹಳೆಯ ಕಬ್ಬಿಣದ ಸೇತುವೆಯನ್ನೇ ಕದ್ದೊಯ್ದಿದ್ದಾರೆ. ಕೋರ್ಬಾ ಜಿಲ್ಲೆಯಲ್ಲಿ ಈ ಐನಾತಿ ಕಳ್ಳತನ ನಡೆದಿದೆ.</p><img><p>40 ವರ್ಷಗಳ ಹಿಂದೆ ಜನರು ಸುಲಲಿತವಾಗಿ ಕಾಲುವೆ ದಾಟುವ ಸಲುವಾಗಿ ಸ್ಥಳೀಯಾಡಳಿತವು 20-30 ಟನ್ ತೂಗುವ ಗಟ್ಟಿಮುಟ್ಟಾದ ಕಬ್ಬಿಣದ ಸೇತುವೆಯನ್ನು ಕಟ್ಟಿಸಿತ್ತು. ಶುಕ್ರವಾರ ರಾತ್ರಿವರೆಗೂ ಜನರು ಇದರ ಮೇಲೆ ಓಡಾಡಿದ್ದಾರೆ.</p><img><p>ಮುಂಜಾನೆ ನೋಡಿದರೆ, ಸೇತುವೆಯೇ ಇಲ್ಲ. ಇದರೊಂದಿಗೆ ನೀರಿನ ಪೈಪ್‌ಲೈನ್‌ಗೆ ಬಳಸಿದ್ದ ಕಬ್ಬಿಣವೂ ಕಾಣೆ. ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಕಳ್ಳರು ಗ್ಯಾಸ್ ಕಟರ್ ಬಳಸಿ ಸೇತುವೆಯನ್ನು ತುಂಡರಿಸಿದ್ದು ಈ ವೇಳೆ ಗೊತ್ತಾಗಿದೆ. ಎಲ್ಲ ಗುಜರಿ ಅಂಗಡಿಗಳಿಗೂ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಆದರೆ ಈವರೆಗೆ ಕಳ್ಳರ ಗುರುತು ಪತ್ತೆಯಾಗಿಲ್ಲ.</p>
Source link
10 ವರ್ಷ ಹಳೆಯದಾದ 30 ಟನ್ ತೂಕವಿರುವ ಕಬ್ಬಿಣದ ಸೇತುವೆಯೇ ರಾತ್ರೋರಾತ್ರಿ ಕಳ್ಳತನ