
ಮಂಡ್ಯ, (ಮಾರ್ಚ್ 09): ಕೌಟುಂಬಿಕ ಕಲಹಕ್ಕೆ 2 ವರ್ಷದ ನಂತರ ಕತ್ತು ಹಿಸುಕಿ, ಬಳಿಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. (ಆತ್ಮಹತ್ಯೆ) ಶರಣಾಗಿದ್ದಾರೆ. ಆದರೆ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಪವಾಡದಂತೆ ಬದುಕುಳಿದಿದ್ದು, ಈಗ ತಂದೆ ತಾಯಿ ಇಲ್ಲದೇ ಅನಾಥವಾಗಿದೆ. ಈ ಹೃದಯ ವಿದ್ರಾವಕ ಘಟನೆ ಮಂಡ್ಯದ (ಮಂಡ್ಯ) ಕೆ.ಆರ್.ಪೇಟೆ (ಕೆ.ಆರ್.ಪೇಟೆ) ಪಟ್ಟಣದಲ್ಲಿ ನಡೆದಿದೆ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ದಂಪತಿ.
ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಕಳೆದ ಮೂರು ವರ್ಷದ ಹಿಂದೆ ವಿವಾಹವಾಗಿದ್ದರು. ಈ ದಂಪತಿಗೆ ಎರಡು ವರ್ಷದ ಮಗುವಿನೊಂದಿಗೆ ಮಂಡ್ಯದ ಕೆ.ಆರ್.ಪೇಟೆಯ ಜಯನಗರ ಬಡಾವಣೆಯ ಮನೆಯೊಂದರಲ್ಲಿ ವಾಸವಾಗಿದ್ದರು. ಆದರೆ, ಗಂಡ ಹೆಂಡತಿ ನಡುವೆ ಅದೇನಾಗಿತ್ತೋ ಏನೋ ದಂಪತಿ ಇಂದು (ಮಾರ್ಚ್ 09) ಬೆಳಿಗ್ಗೆ ನೇಣಿಗೆ ಶರಣಾಗಿದ್ದಾರೆ. ಆದರೆ, ದಂಪತಿ ಸಾಯುವ ತಮ್ಮ ಎರಡು ವರ್ಷದ ಸಮಾರಂಭದಲ್ಲಿ ಸಹ ಕೊಲ್ಲಲು ತೀರ್ಮಾನಿಸಿದ್ದು, ಅದರಂತೆ ನಡೆಯುವ ಮುನ್ನ ಕತ್ತು ಹಿಸುಕಿದ್ದಾರೆ. ಇದರಿಂದ ಮಗು ಅಸ್ವಸ್ಥಗೊಂಡು ಬಿದ್ದಿದೆ. ಬಳಿಕ ಮಗು ಸಾವನ್ನಪ್ಪಿದೆ ಎಂದು ತಿಳಿದು ದಂಪತಿ ನೇಣಿಗೆ ಕೊರಳೊಡ್ಡಿದ್ದಾರೆ. ಶರಣಾಗಿದ್ದಾರೆ. ನಂತರ ಮಗು ಉಸಿರಾಡಿದ್ದು, ಪವಾಡದ ತೀರಿಯಲ್ಲಿ ಬದುಕುಳಿದಿದೆ. ಆದರೆ, ತಂದೆ ತಾಯಿ ಇಲ್ಲದೇ ಅನಾಥವಾಗಿದೆ.
ಇದನ್ನೂ ಓದಿ: ಸ್ನೇಹಿತೆಯ ಲವ್ನಲ್ಲಿ ಮಧ್ಯಸ್ಥಿಕೆ: ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ
ದಂಪತಿ ಸಾವಿನಿಂದ ಎರಡು ಕಡೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇನ್ನು ಬದುಕುಳಿದ ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆ.ಆರ್.ಪೇಟೆ ಟೌನ್ ಠಾಣಾ ಘಟನೆ ನಡೆದಿದ್ದು, ದಂಪತಿಯ ಕೆಟ್ಟ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಕೌಂಟುಂಬಿಕ ಕಲಹದಿಂದ ಬೇಸತ್ತು ಈ ಪ್ರಪಂಚವನ್ನೇ ಬಿಟ್ಟು ಹೋಗಿದ್ದಾರೆ ಎಂದು ಹೇಳಿದರೆ, ಪೊಲೀಸರ ತನಿಖೆಯಲ್ಲಿ ಸತ್ಯಾಸತ್ಯತೆ ಹೊರಬರಲಿದೆ.