
ಹೆಣ್ಣು ಮಕ್ಕಳ ತಂದೆಯೆಂದರೆ (ತಂದೆ) ಪ್ರಪಂಚ. ಅದೇ ರೀತಿ ತಂದೆಗೂ ತಮ್ಮ ಮುದ್ದು ಮಗಳೆಂದರೆ ಅದೇನೋ ವಿಶೇಷ ಪ್ರೀತಿ ಹಾಗೂ ಕಾಳಜಿ. ತಂದೆ ಮಗಳ ಬಾಂಧವ್ಯ ಸಾರುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ ಇಲ್ಲೊಬ್ಬಳು ಮಗಳು ತನ್ನ ತಂದೆಗೆ ಎರಡನೇ ತಾಯಿಯಾಗಿದ್ದಾಳೆ. ತನ್ನ ತಂದೆಯನ್ನು ತೊಡೆ ಮೇಲೆ ಮಲಗಿಸಿಕೊಂಡಿದ್ದು, ತಂದೆ ತಲೆಯಿಟ್ಟು ನಿದ್ರಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
theiconictrolls ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಂದೆ ಮಗಳ ಬಾಂಧವ್ಯ ಸಾರುವ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಪುಟಾಣಿಯೊಂದು ಬೆಂಚಿನ ಮೇಲೆ ಕುಳಿತುಕೊಂಡಿದೆ. ಈ ಪುಟಾಣಿಯ ತೊಡೆ ಮೇಲೆ ತಂದೆಯೂ ತಲೆಯಿಟ್ಟು ಹಾಯಾಗಿ ನಿದ್ರಿಸುತ್ತಿರುವುದು ಕಂಡುಬರುತ್ತದೆ. ಪುಟಾಣಿ ಅಪ್ಪನ ಕೂದಲಿನ ಮೇಲೆ ಕೈಯಾಡಿಸುತ್ತಿದೆ.
ವೈರಲ್ ವಿಡಿಯೋ ಇಲ್ಲಿದೆ
Instagram ನಲ್ಲಿ ಈ ಪೋಸ್ಟ್ ಅನ್ನು ವೀಕ್ಷಿಸಿ
ಇದನ್ನೂ ಓದಿ: ನಡುರಸ್ತೆಯಲ್ಲೇ ಕೋಪಿಸಿಕೊಂಡ ಮಗಳನ್ನು ರಮಿಸಿ ಸಮಾಧಾನ ಪಡಿಸಿದ ತಂದೆ
ಈ ವಿಡಿಯೋ ಇಪ್ಪತ್ತಾರು ಸಾವಿರಕ್ಕೂ ಅಧಿಕ ವೀಕ್ಷಣೆಗಳು ಇವೆ. ಒಬ್ಬ ಬಳಕೆದಾರ, ಇದಕ್ಕಿಂತ ದೊಡ್ಡ ಉಡುಗೊರೆ ಏನಿದೆ. ಇತರರು, ಇದೇ ಕಾರಣಕ್ಕೆ ಪ್ರತಿಯೊಬ್ಬ ಪುರುಷನು ಮಗಳನ್ನು ಬಯಸೋದು ಎಂದು ಹೇಳಿದ್ದಾರೆ. ಮತ್ತೊಬ್ಬರು, ನನ್ನ ಮಗಳು ನನ್ನ ತಾಯಿಯಂತೆ ವರ್ತಿಸುತ್ತಾಳೆ ಎಂದು ಕಾಮೆಂಟ್ ಮಾಡಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ