
ಬೆಂಗಳೂರು, ಏಪ್ರಿಲ್ 09: ಮದುವೆಗೆ ಯುವತಿ ಒಪ್ಪದಿದ್ದಕ್ಕೆ ಮನನೊಂದು ಯುವಕ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ (ಆತ್ಮಹತ್ಯೆ) ಶರಣಾಗಿರುವಂತಹ ಘಟನೆ ಬೆಂಗಳೂರಿನ ಯಲಹಂಕ ನ್ಯೂಟೌನ್ ಠಾಣಾ ಸಂಭವಿಸಿದೆ. ಅಭಿಷೇಕ್(23) ಮೃತ ಯುವಕ. ಇತ್ತೀಚೆಗಷ್ಟೇ ಅಭಿಷೇಕ್ ಖಾಸಗಿ ಕಾಲೇಜಿನಲ್ಲಿ ಬಿಕಾಂ ಮುಗಿಸಿದ್ದ. ಸದ್ಯ ಘಟನಾ ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಡೆದಿದ್ದೇನು?
ಅಭಿಷೇಕ್ ಖಾಸಗಿ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದ ಯುವತಿಯ ಜೊತೆ ಪ್ರೀತಿ ಮಾಡಿದ. ಕಳೆದ ಆರೇಳು ವರ್ಷದಿಂದ ಇಬ್ಬರು ಪ್ರೀತಿ ಮಾಡುತ್ತಿದ್ದರು. ಇಬ್ಬರ ಪ್ರೀತಿ ವಿಷಯ ಯುವತಿಯ ಮನೆಗೆ ಗೊತ್ತಾಗಿತ್ತು. ಇತ್ತ ಯುವತಿಯ ಒಪ್ಪಿಗೆ ಅಭಿಷೇಕ್ ಜತೆ ಮದುವೆಗೆ ನಿರಾಕರಿಸಿದ್ದಾರೆ. ಹೀಗಾಗಿ ಯುವತಿ ಅಭಿಷೇಕ್‌ನನ್ನು ಅವೈಡ್ ಮಾಡಲು ಶುರು ಮಾಡಿದ್ದಾಳೆ. ಇದರಿಂದ ಮನನೊಂದು ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನೇಣುಬಿಗಿದ ಸ್ಥಿತಿಯಲ್ಲಿ 6ನೇ ತರಗತಿ ವಿದ್ಯಾರ್ಥಿನಿ ಶವ ಪತ್ತೆ
ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ 6ನೇ ತರಗತಿ ವಿದ್ಯಾರ್ಥಿನಿ ಶವ ಪತ್ತೆ ಆಗಿರುವಂತಹ ಘಟನೆ ಶಿವಮೊಗ್ಗದ ಬೊಮ್ಮನಕಟ್ಟೆ ಪ್ರದೇಶದ ಬ್ಲಾಕ್‌ನಲ್ಲಿ ನಡೆದಿದೆ. ಜೀವಿತಾ(12) ಮೃತ ವಿದ್ಯಾರ್ಥಿನಿ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಜಾತ್ರೆ ನೋಡಲು ಹೋಗಿ ಹಸೆಮಣೆ ಏರಬೇಕಿದ್ದವನ ದುರಂತ ಅಂತ್ಯ: ಪಲ್ಲಕ್ಕಿ ಹೊತ್ತ ಚಾಲಕ ಹರಿದು ಸಾವು
ಬೊಮ್ಮನಕಟ್ಟೆಯ ಶಾಲೆಯಲ್ಲಿ ಜೀವಿತಾ 6ನೇ ತರಗತಿ ಓದುತ್ತಿದ್ದಳು. ರಜೆ ಇದ್ದ ಕಾರಣ ಮನೆಯಲ್ಲೇ ಇದ್ದಳು. ಆದರೆ ಏಕಾಏಕಿ ದುರ್ಘಟನೆ ಸಂಭವಿಸಿದೆ. ಸದ್ಯ ಬಾಲಕಿ ಜೀವಿತಾ ಸಾವಿನ ಬಗ್ಗೆ ಹಲವಾರು ಅನುಮಾನಗಳು ಹುಟ್ಟಿಕೊಂಡಿವೆ. ಸಂಪೂರ್ಣ ತನಿಖೆಯಿಂದಲೇ ನಿಜಾಂಶ ಬಹಿರಂಗವಾಗಬೇಕಿದೆ. ಬಾಲಕಿ ತಾಯಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಾರೆ.
ಮನೆಯಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ
ಮನೆಯಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ಮನೋರೋಗದಿಂದ ಬಳಲುತ್ತಿದ್ದ ತಮಿಳುನಾಡು ಮೂಲದ ವಿಜಿ(57) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಲಿಕ್ ಮಾಡಿ.