ಅನ್ಯಕೋಮಿನ ಯುವಕನನ್ನ ಪ್ರೀತಿಸುತ್ತಿದ್ದ ಯುವತಿ ಆತ್ಮಹತ್ಯೆ, ಲವ್ ಜಿಹಾದ್ ಆರೋಪ

ಅನ್ಯಕೋಮಿನ ಯುವಕನನ್ನ ಪ್ರೀತಿಸುತ್ತಿದ್ದ ಯುವತಿ ಆತ್ಮಹತ್ಯೆ, ಲವ್ ಜಿಹಾದ್ ಆರೋಪ


ಬಾಗಲಕೋಟೆ, (ಏಪ್ರಿಲ್ 15): ಅನ್ಯಕೋಮಿನ ಯುವಕನನ್ನ ಪ್ರೀತಿಸುತ್ತಿದ್ದ (ಪ್ರೀತಿ) ಯುವತಿ ಆತ್ಮಹತ್ಯೆಗೆ(ಆತ್ಮಹತ್ಯೆ) ಮಾಡಿಕೊಂಡಿರುವ ಘಟನೆ ಬಾಗಲಕೋಟೆ ನಗರದ (ಬಾಗಲಕೋಟೆ) ಸೆಕ್ಟರ್ ನಂಬರ್ 48ರ ಮನೆಯಲ್ಲಿ ನಡೆದಿದೆ. ಟೈರ್ ಅಂಗಡಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಭೂಮಿಕಾ ತಿಪ್ಪಣ್ಣವರ್ (19) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನದಾಫ್ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದು ಯುವತಿ ಆರೋಪಿಯಾಗುತ್ತಿದ್ದಾರೆ. ಇನ್ನೊಂದೆಡೆ ಇದೊಂದು ಪಕ್ಕಾ ಲವ್ ಜಿಹಾದ್ ಎಂದು ಹಿಂದೂಪರ ಸಂಘಟನೆಗಳ ಆರೋಪವಾಗಿದೆ. ಹೀಗಾಗಿ ಈ ಪ್ರಕರಣ ತೀವ್ರ ಸ್ವರೂಪ ಪಡೆದಿದೆ.

ತಾಯರ್‌ ಅಂಗಡಿಗೆ ಕೆಲಸಕ್ಕೆ ಹೋಗುತ್ತಿದ್ದ ಭೂಮಿಕಾ ಮತ್ತು ಟಾಂಟಾಂ ಚಾಲಕ ಡೋಂಗ್ರಿಸಾಬ್ ನದಾಫ್‌ ಮಧ್ಯೆ ಕಳೆದ 2 ವರ್ಷಗಳಿಂದ ಪ್ರೀತಿಯಿತ್ತು. ಆದರೆ, ಅದೇನಾಯ್ತೋ ಏನೋ (ಏಪ್ರಿಲ್ 15) ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಶರಣಾಗಿರುವ ಭೂಮಿಕಾ ಹಿಜಾಬ್‌ನಲ್ಲಿ ಕಾಣಿಸಿಕೊಂಡಿದ್ದ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ವಿಷಯ ತಿಳಿಯದಂತೆ ಘಟನಾ ಸ್ಥಳಕ್ಕೆ ಎಸ್ಪಿ ಸಿದ್ಧಾರ್ಥ್ ಗೋಯಲ್ ಭೇಟಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಬಾಗಲಕೋಟೆ ನವನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಪ್ರೇಮ ಸಂಬಂಧವೋ? ಲವ್ ಜಿಹಾದೋ?: ಅಸಲಿಗೆ ಹುಬ್ಬಳ್ಳಿಗೆ, ಧಾರವಾಡದಲ್ಲಿ ಆಗ್ತಿರೋದೇನು?

ನದಾಫ್ ಕಿರುಕಳದಿಂದಲೇ ಆತ್ಮಹತ್ಯೆ

ಇನ್ನು ಆತ್ಮಹತ್ಯೆಗೆ ಶರಣಾಗಿರುವ ಭೂಮಿಕಾ ಅತ್ತೆ ಲಕ್ಷ್ಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಆತ ನಿತ್ಯ ಟಂಟಂ ತಂದು ನಮ್ಮ ಮನೆ ಮುಂದೆ ನಿಲ್ಲಿಸುತ್ತಿದ್ದ. ಆಕೆಗೆ ಕರೆ ಮಾಡಿ, ಮೆಸ್ಸೇಜ್ ಮಾಡಿ ಮಾತನಾಡುವಂತೆ ಪೀಡಿಸುತ್ತಿದ್ದ. ತನ್ನೊಂದಿಗೆ ಬರುವಂತೆ ಹೇಳುತ್ತಿದ್ದ. ರಾತ್ರಿ 12 ರಿಂದ 1 ಗಂಟೆಯವರೆಗೆ ಫೋನಿನಲ್ಲೇ ಮಾತನಾಡುತ್ತಾರೆ. ಮದುವೆ ಬೇಡ ಆದರೆ ತನ್ನೊಂದಿಗೆ ಇರು ಅಂತ ಕಿರುಕುಳ ಕೊಡುತ್ತಿದ್ದ. ಅವನ ಕಿರುಕಳದಿಂದಲೇ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದಕ್ಕೆ ನ್ಯಾಯ ಸಿಗಬೇಕು ಎಂದು ಹೇಳಿದ್ದಾರೆ.

ಇದೊಂದು ಪಕ್ಕಾ ಲವ್ ಜಿಹಾದ್

ಈ ಪ್ರಕರಣ ಸಂಬಂಧ ಹಿಂದೂ ಜಾಗರಣ ವೇದಿಕೆ ಮುಖಂಡ ಕುಮಾರಸ್ವಾಮಿ ಹಿರೇಮಠ ಮಾತನಾಡಿ, ಇದೊಂದು ಪಕ್ಕಾ ಲವ್ ಜಿಹಾದ್ ಪ್ರಕರಣ. ನವನಗರದಲ್ಲಿ ಮುಸ್ಲಿಂ ಕಿಡಿಗೇಡಿಗಳು ಇದನ್ನೇ ದಂಧೆ ಮಾಡಿಕೊಂಡಿದ್ದಾರೆ. 46 ಗ್ಯಾಂಗ್ ಅಂತ ಮಾಡಿಕೊಂಡು ಗದ್ದಲ ಗಲಾಟೆ ಮಾಡುತ್ತಾರೆ. ಕಳೆದ ನಾಲ್ಕೈದು ವರ್ಷದಿಂದ ಯುವತಿ ಜೊತೆ ಡೋಂಗ್ರಿಸಾಬ್ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಳು. ರಸ್ತೆಯ ಮಧ್ಯೆ ಅಡ್ಡ ಹಾಕಿ ಕಾಡುತ್ತಿದೆ. ಮುಸ್ಲಿಂ ಧರ್ಮಕ್ಕೆ ಮತಾಂತರವಾಗು ಎಂದು ಪ್ರಚೋದನೆ ಮಾಡುತ್ತಿದ್ದನಂತೆ. ರಂಜಾನ್ ವೇಳೆ ಹಿಜಾಬ್ ಬುರ್ಖಾ ಹಾಕಿ ಕರೆದುಕೊಂಡು ಹೋಗುತ್ತಿದ್ದರು. ಇದನ್ನೆಲ್ಲಾ ನೋಡಿದ್ರೆ ಇದೊಂದು ಪಕ್ಕಾ ಲವ್ ಜಿಹಾದ್ ಪ್ರಕರಣ ಎನಿಸುತ್ತೆ. ಯುವತಿ ಡೆತ್ ನೋಟು ಬರೆದಿದ್ದಾಳೆ ಅನ್ನೋ ಮಾಹಿತಿ ಇದೆ. ಅದನ್ನು ತೆಗೆದಿರಿಸಿದ್ದಾರೆ ಎಂಬ ಸಂಶಯ ಇದೆ. ನಾಳೆ (ಏಪ್ರಿಲ್ 16) ಹಿಂದೂ ಘಟನೆಗಳೆಲ್ಲ ಸೇರಿ ಮುಂದಿನ ಹೋರಾಟದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಒಟ್ಟಿನಲ್ಲಿ ಭೂಮಿಕಾ ಆತ್ಮಹತ್ಯೆ ಹಿಂದೆ ಹಲವು ಆರೋಪಗಳು ಕೇಳಿಬರುತ್ತಿವೆ, ಈ ಪ್ರಕರಣ ಮುಂದಿನ ದಿನಗಳಲ್ಲಿ ಹಂತಕ್ಕೆ ಹೋಗಿ ನಿಲ್ಲುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *