ಅನೈತಿಕ ಸಂಬಂಧ ಗುಟ್ಟು ರಟ್ಟು: ಒಂದೇ ಅವಾಜ್​​​ಗೆ ಯುವಕ ದುರಂತ ಸಾವು, ಆಗಿದ್ದೇನು?

ಅನೈತಿಕ ಸಂಬಂಧ ಗುಟ್ಟು ರಟ್ಟು: ಒಂದೇ ಅವಾಜ್​​​ಗೆ ಯುವಕ ದುರಂತ ಸಾವು, ಆಗಿದ್ದೇನು?


ತುಮಕೂರು (ಫೆಬ್ರವರಿ .24): ವ್ಯಕ್ತಿಯೋರ್ವನ ಅಕ್ರಮ ಸಂಬಂಧದ (ವಿವಾಹೇತರ ಸಂಬಂಧ) ವಿಚಾರವನ್ನು ಆತನ ಹೆಂಡತಿಗೆ ತಿಳಿಸಿ ನ್ಯಾಯ ಕೊಡಿಸಲು ಹೋದ ಯುವಕನೊಬ್ಬ ದುರಂತ ಸಾವು ಕಂಡಿರುವ ದಾರುಣ ಘಟನೆ ತುಮಕೂರು (ತುಮಕೂರು) ತಾಲೂಕಿನ ರಾಮೇನಹಳ್ಳಿಯಲ್ಲಿ ನಡೆದಿದೆ. ಹೌದು…ಚೇತನ್ ಎಂಬ ಯುವಕ ನಾಗರಾಜ್ ಎಂಬಾತನ ಮಹಿಳೆಯೊಂದಿಗಿನ ಅಕ್ರಮ ಸಂಬಂಧವನ್ನು ಆತನ ಹೆಂಡ್ತಿಗೆ ತಿಳಿಸಿದ್ದು, ಈ ವಿಚಾರವಾಗಿ ನಾಗರಾಜ್, ಚೇತನ್ ಜತೆ ಗಲಾಟೆ ಮಾಡಿದ್ದಾನೆ. ಬೆದರಿಕೆ ಸಹ ಹಾಕಿದ್ದ. ಇದರಿಂದ ಮನನೊಂದ ಚೇತನ್, ತನ್ನ ಮೊಬೈಲ್‌ನಲ್ಲಿ ಸೆಲ್ಫಿ ವಿಡಿಯೋ ರೆಕಾರ್ಡ್ ಮಾಡಿ ತನ್ನ ಸಾವಿಗೆ ನಾಗರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಅಕ್ರಮ ಸಂಬಂಧದ ಬಗ್ಗೆ ಆತನ ಪತ್ನಿ ಸುಮಾಗೆ ಮಾಹಿತಿ ನೀಡಿದ್ದಾಳೆ. ಕಟ್ಟೆ ನಾಗರಾಜು ಮತ್ತೋರ್ವ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿಚಾರವನ್ನು ಚೇತನ್, ಸುಮಾಗೆ ತಿಳಿಸಿದ್ದಾರೆ, ದಂಪತಿಗಳ ನಡುವೆ ಮನೆಯಲ್ಲಿ ದೊಡ್ಡ ಗಲಾಟೆ ನಡೆದಿತ್ತು. ಈ ವೇಳೆ ಸುಮಾ, ಚೇತನ್ ತನಗೆ ಈ ವಿಚಾರ ತಿಳಿಸಿದ್ದಾಗಿ ಗಂಡನಿಗೆ ಹೇಳಿದ್ದಾಳೆ. ಇದರಿಂದ ಆಕ್ರೋಶಗೊಂಡ ನಾಗರಾಜ್, ಚೇತನ್ ಮೇಲೆ ಜಗಳ ಮಾಡಿದ್ದಾನೆ. ಪ್ರಾಣ ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆದರೆ, ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತನ್ನ ಮೊಬೈಲ್‌ನಲ್ಲಿ ಸೆಲ್ಫಿ ವಿಡಿಯೋ ಮಾಡಿರುವ ಚೇತನ್, ತನ್ನ ಸಾವಿಗೆ ಕಟ್ಟೆ ನಾಗರಾಜು ಎಂದು ಹೇಳಿದ್ದಾನೆ.

ಇದನ್ನೂ ಓದಿ: ಸಾಕು ಮಗ-ತಂಗಿಯಿಂದಲೇ ಮಹಿಳೆಯ ಹತ್ಯೆ: ವ್ಯಕ್ತಿಯಿಂದ ಬಯಲಾಯ್ತು ಕೊಲೆ ರಹಸ್ಯ

ಮೊದಲು ಹೆಬ್ಬೂರು ಪೊಲೀಸರು ಆತ್ಮಹತ್ಯೆ ಎಂದು ದೂರು ದಾಖಲಿಸಿದ್ದಾರೆ. ಆದರೆ, ಚೇತನ್ ಮೊಬೈಲ್ ನಲ್ಲಿದ್ದ ವಿಡಿಯೋ ನೋಡಿದ ತಂದೆ ಕೂಡಲೇ ಹೆಬ್ಬೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಎಫ್ ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ಚೇತನ್ ವಿಡಿಯೋದಲ್ಲಿ ಹೇಳಿದ್ದ ನಾಗರಾಜನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *