ರಾಜೀವ್​​ ಗೌಡ ಪರ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಪತ್ರ: ಆ್ಯಸಿಡ್​​ ಎರಚುವುದಾಗಿ ಬೆದರಿಕೆ

ರಾಜೀವ್​​ ಗೌಡ ಪರ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಪತ್ರ: ಆ್ಯಸಿಡ್​​ ಎರಚುವುದಾಗಿ ಬೆದರಿಕೆ


ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತ

ಚಿಕ್ಕಬಳ್ಳಾಪುರ, ಜನವರಿ 22: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಬಂಧನ ಇನ್ನೂ ಆಗಿಲ್ಲ. ತಲೆ ಮರೆಸಿಕೊಂಡಿರುವ ಆರೋಪಿಗಾಗಿ ತಂಡಗಳನ್ನು ಪತ್ತೆ ಹಚ್ಚುತ್ತಲೇ ಇದ್ದಾರೆ. ಹೀಗಿದ್ದರೂ ಈ ನಡುವೆ ಪುಂಡಾಟ ಮಾತ್ರ ಮುಂದುವರಿದಿದೆ. ಶಿಡ್ಲಘಟ್ಟ ಪೌರಾಯುಕ್ತಕ್ಕೆ ಮತ್ತೆ ಬೆದರಿಕೆ ಹಾಕಿರುವುದಾಗಿ ಆರೋಪಿ ರಾಜೀವ್ ಗೌಡ ಪರ ಪತ್ರ ಬರೆದು ಎಚ್ಚರಿಕೆ ನೀಡಿರುವ ಬಗ್ಗೆ ಪೌರಾಯುಕ್ತೆ ಮಾಹಿತಿ ನೀಡಿದ್ದಾರೆ. ಜೊತೆಗೆ ಬೆದರಿಕೆ ಪತ್ರವನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಕಾಂಗ್ರೆಸ್ ಮುಖಂಡರಿಂದಲೇ ಆಕ್ರೋಶ

ಪೌರಾಯುಕ್ತೆಗೆ ನಿಂದಿಸಿ, ಬೆದರಿಕೆ ಹಾಕಿರುವ ಪ್ರಕರಣದ ವಿಚಾರವಾಗಿ ರಾಜೀವ್ ಗೌಡನನ್ನು ಇನ್ನೂ ಬಂಧಿಸಿದ ಬಗ್ಗೆ ಸ್ವಪಕ್ಷ ಕಾಂಗ್ರೆಸ್ ನಲ್ಲಿ ಆಕ್ರೋಶ ಭುಗಿಲೆದ್ದಿದೆ. ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಷ್ಟವಾಗುತ್ತಿದ್ದು, ಶೀಘ್ರ ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.

ಇದನ್ನೂ ಓದಿ: ನಿಯಂತ್ರಣವಿಲ್ಲದ ನಾಲಿಗೆಯೇ ಎಲ್ಲವನ್ನೂ ಹಾಳುಮಾಡಬಲ್ಲದು; ರಾಜೀವ್ ಗೌಡಗೆ ಕೋರ್ಟ್ ತರಾಟೆ

ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

ಪೌರಾಯುಕ್ತೆಗೆ ಬೆದರಿಕೆ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಆರೋಪಿ ರಾಜೀವ್ ಗೌಡ ಸಲ್ಲಿಸಿರುವ ಅರ್ಜಿ ವಿಚಾರಣೆ ಚಿಕ್ಕಬಳ್ಳಾಪುರ ಜಿಲ್ಲಾ 2ನೇ ಹೆಚ್ಚುವರಿ ನ್ಯಾಯಾಲಯ ಮತ್ತು ಸೆಷನ್ಸ್‌ನಲ್ಲಿ ಇಂದು ಮತ್ತೆ ಪ್ರಕರಣ ದಾಖಲಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ರಾಜೀವ್ ಗೌಡ ಪರ ವಕೀಲ ಶಿವಶಂಕರರೆಡ್ಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಮಧ್ಯಂತರ ನಿರೀಕ್ಷಣಾ ಜಾಮೀನು ನಿರಾಕರಿಸಿದ್ದ ಕೋರ್ಟ್, ವಿಚಾರಣೆಯನ್ನ ಜನವರಿ 22ಕ್ಕೆ ಅಂದರೆ ಇಂದಿಗೆ ಮುಂದೂಡಲಾಗಿತ್ತು.

ಅಮಾನತಿಗೆ ಶಿಫಾರಸು

ಪಕ್ಷದ ಮುಖಂಡನ ವರ್ತನೆ ಆಡಳಿತರೂಢ ಕಾಂಗ್ರೆಸ್‌ಗೆ ಮುಜುಗರ ತಂದ ಹಿನ್ನೆಲೆ, ಆರೋಪಿ ರಾಜೀವ್‌ಗೌಡಗೆ ಕೆಪಿಸಿಸಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಆದರೆ ಅದಕ್ಕೆ ನಾಪತ್ತೆಯಾಗಿರುವ ರಾಜೀವ್ ಗೌಡ ಉತ್ತರಿಸಿದ ಕಾರಣ ಆತನನ್ನು ಪಕ್ಷದಿಂದ ಅಮಾನತುಗೊಳಿಸುವಂತೆ ಕಾರ್ಯಾಧ್ಯಕ್ಷ ಚಂದ್ರಶೇಖರ್ ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷರಿಗೆ ಶಿಫಾರಸು ಮಾಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *