ನಟ ಉಪೇಂದ್ರ ದಂಪತಿ ಮೊಬೈಲ್​ ಹ್ಯಾಕ್​ ಕೇಸ್​: ಆರೋಪಿ ಅರೆಸ್ಟ್​; ಶಾಕಿಂಗ್​ ವಿಚಾರ ಬಿಚ್ಚಿಟ್ಟ ಖಾಕಿ

ನಟ ಉಪೇಂದ್ರ ದಂಪತಿ ಮೊಬೈಲ್​ ಹ್ಯಾಕ್​ ಕೇಸ್​: ಆರೋಪಿ ಅರೆಸ್ಟ್​; ಶಾಕಿಂಗ್​ ವಿಚಾರ ಬಿಚ್ಚಿಟ್ಟ ಖಾಕಿ


ಬೆಂಗಳೂರು, ನವೆಂಬರ್ 12: ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಸಂಬಂಧ ಆರೋಪಿ ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬಾತನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ ಪೊಲೀಸರೇ ಈ ಸೈಬರ್ ಖದೀಮರ ಜಾಲ ನೋಡಿ ಶಾಕ್ ಆಗಿದ್ದಾರೆ. 20 ರಿಂದ 25 ವಯೋಮಾನದ ಯುವಕರು ಈ ದಂಧೆಯಲ್ಲಿ ನಿರತರಾಗಿದ್ದರೆ, 150 ಮಂದಿ ಯುವಕರು ಸೈಬರ್ ಅಪರಾಧದಲ್ಲೇ ತೊಡಗಿರುವ ಸಾರ್ವಜನಿಕ ವಿಷಯ ಈ ವೇಳೆ ಬೆಳಕಿಗೆ ಬಂದಿದೆ. ಸದ್ಯ ಆರೋಪಿ ವಿಕಾಸ್‌ನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಸೆ.15ರಂದು ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಆಗಿದ್ದಾರೆ. ಆನ್‌ಲೈನ್‌ನಲ್ಲಿ ಕೆಲವು ವಸ್ತುಗಳನ್ನು ಪ್ರಿಯಾಂಕಾ ಉಪೇಂದ್ರ ಬುಕ್ ಮಾಡಲಾಗಿತ್ತು. ಈ ವೇಳೆ ಮೊಬೈಲ್ ಗೆ ಲಿಂಕ್ ಬಂದಿದ್ದು, ಆ ಲಿಂಕ್ ಅನ್ನು ಪ್ರಿಯಾಂಕ ಕ್ಲಿಕ್ ಮಾಡಿದೆ. ಬಳಿಕ ನಟಿ ಪ್ರಿಯಾಂಕಾ ವಾಟ್ಸಾಪ್ ಹ್ಯಾಕ್ ಮಾಡಿದ್ದ ಖದೀಮ, ಅವರ ಸಂಪರ್ಕದಲ್ಲಿದ್ದವರಿಗೆ 55 ಸಾವಿರ ಹಣ ಕಳುಹಿಸುವಂತೆ ಮೆಸೇಜ್ ಮಾಡಿದ್ದಾರೆ. ಈ ವೇಳೆ ಆರೋಪಿ ಯಾರೆಂದು ತಿಳಿಯಲು ಯತ್ನಿಸಿರುವ ಪ್ರಿಯಾಂಕಾ, ಪತಿ ಉಪೇಂದ್ರ ಹಾಗೂ ನೇಜರ್ ನಂಬರ್ ಗೆ ಕರೆ ಮಾಡಲಾಗಿತ್ತು. ಬಳಿಕ ಮ್ಯಾಜರ್ ಹಾಗೂ ಉಪೇಂದ್ರ ಮೊಬೈಲ್ ಕೂಡ ಹ್ಯಾಕ್ ಆಗುತ್ತಿದೆ.

ಇದನ್ನೂ ಓದಿ: ಪ್ರಿಯಾಂಕಾ ಉಪೇಂದ್ರ ಮಾಡಿದ ಒಂದೇ ತಪ್ಪಿನಿಂದ ಆಯ್ತು ಮೊಬೈಲ್ ಹ್ಯಾಕ್

ಹಣ ಬೇಕು ಎಂದು ಪ್ರಿಯಾಂಕ ಅವರ ವಾಟ್ಸ್ಯಾಪ್ ನಿಂದ ಆರೋಪಿ ಹಲವರಿಗೆ ಮೆಸೇಜ್ ಮಾಡಿದ್ದು, ಈ ವೇಳೆ ಪ್ರಿಯಾಂಕಾ ಅವರಿಗೆ ಸಂದೇಶ ಕಳುಹಿಸಿದ್ದು ಎಂದು ಕೆಲವರು ಹಣ ಹಾಕಿದ್ದಾರೆ. ಉಪೇಂದ್ರ ಪುತ್ರ ಕೂಡ ತಾಯಿ ಅಕೌಂಟ್‌ಗೆ ಐವತ್ತು ಸಾವಿರ ಹಣಹಾಕಿದ್ದರು. ಇನ್ನು ಕೆಲವರು ಪ್ರಿಯಾಂಕಾ ಅವರ ಅನುಮಾನಕ್ಕೆ ಕರೆ ಮಾಡಿದರೆ ಕಾಲ್ ಕಟ್ ಆಗುತ್ತಿತ್ತು. ವಿಷಯ ಗೊತ್ತಾಗುತ್ತಿದ್ದಂತೆ ಸದಾಶಿವನಗರ ಠಾಣೆಗೆ ಈ ಬಗ್ಗೆ ಪ್ರಿಯಾಂಕಾ ದೂರು ನೀಡಿದ್ದರು. ಆದರೆ, ಅದಾಗಲೇ ಸೈಬರ್ ವಂಚಕನ ಅಕೌಂಟ್‌ಗೆ ಒಂದೂವರೆ ಲಕ್ಷ ರೂಪಾಯಿ ಹಣ ವರ್ಗಾವಣೆಯಾಗಿದೆ. ದೂರು ದಾಖಲಾಗಿದ್ದ ಆರೋಪಿ ಆರೋಪಿ ಪತ್ತೆಗೆ ಬಲೆ ಬೀಸಿದ್ದರು. ತನಿಖೆ ವೇಳೆ ಆರೋಪಿ ಬಿಹಾರದ ದಶರತಪುರದ ನಿವಾಸಿ ಗೊತ್ತಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *