ಬೆಂಗಳೂರು, ಅಕ್ಟೋಬರ್ 27: ಆಂಧ್ರ ಪ್ರದೇಶದ ಕರ್ನೂಲ್ನಲ್ಲಿ ಖಾಸಗಿ ಬಸ್ ದುರಂತದಲ್ಲಿ 20 ಜನರು ಸಜೀವ ದಹನಗೊಂಡಿದ್ದು, ಚಿಕಿತ್ಸೆ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಈ ಘೋರ ದುರಂತದ ಬೆನ್ನಲ್ಲೇ ಕರ್ನಾಟಕ (ಕರ್ನಾಟಕ) ಸಾರಿಗೆ ಇಲಾಖೆ ಕೂಡ ಎಚ್ಚೆತ್ತುಕೊಂಡಿದೆ. ರಾಜ್ಯದ 4 ಸಾರಿಗೆ ನಿಗಮಗಳ ಎಂಡಿಗಳಿಗೆ ಸಚಿವ ರಾಮಲಿಂಗಾರೆಡ್ಡಿ (ರಾಮಲಿಂಗಾ ರೆಡ್ಡಿ) ಪತ್ರ ಬರೆದಿದ್ದು, ಖಡಕ್ ಸೂಚನೆ ಕೊಟ್ಟಿದ್ದಾರೆ. ಬಸ್ಗಳ ಸುರಕ್ಷತಾ ಕ್ರಮಗಳ ಕುರಿತು ಪರಿಶೀಲನೆಗೆ ಸೂಚನೆ ನೀಡಲಾಗಿದೆ.
ರಾಮಲಿಂಗಾ ರೆಡ್ಡಿ ಸಾರಿಗೆ ನಿಗಮಗಳ ಎಂಡಿಗಳಿಗೆ ಕೊಟ್ಟ ಸೂಚನೆ ಏನಿದೆ?
- ಬಸ್ಸಿನ ಸುರಕ್ಷತಾ ಕ್ರಮಗಳ ಕುರಿತು ಪರಿಶೀಲಿಸಬೇಕು.
- ಬಸ್ಸುಗಳಲ್ಲಿ ಬೇಗನೆ ಉರಿಯುವ ಸಾಧ್ಯತೆಯುಳ್ಳ ಅಥವಾ ಇತರ ಸ್ಫೋಟಕ ವಸ್ತುವನ್ನು ಸಾಗಿಸಬಾರದು.
- ಎಸಿ ಬಸ್ಗಳಲ್ಲಿ ತುರ್ತು ಸಂದರ್ಭದಲ್ಲಿ ಕಿಟಕಿ ಒಡೆಯಲು ಸುತ್ತಿಗೆಗಳು ಕಡ್ಡಾಯವಾಗಬೇಕು.
- ಲಗೇಜ್ ಸಾಗಿಸುವ ಜಾಗದಲ್ಲಿ ಯಾರೇ ಆಗಲಿ ಮಲಗಲು ಅವಕಾಶ ನೀಡಬಾರದು.
- ಬಸ್ಗಳ ನವೀಕರಣದ ಬಗ್ಗೆ ಪರಿಶೀಲನೆ ನಡೆಸಬೇಕು.
ಕೆಎಸ್ಆರ್ ಟಿಸಿ, ಬಿಎಂಟಿಸಿ, ವಯವ್ಯ ಕರ್ನಾಟಕ ಸಾರಿಗೆ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಎಂಡಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದು, ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನ್ಯೂನತೆ ಕಂಡು ಬಂದರೆ ಸಂಬಂಧಪಟ್ಟವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಹಲವು ಡಕೋಟಾ ಬಸ್ಗಳಿವೆ. ಸಾರಿಗೆ ಸಚಿವರ ಖಡಕ್ ಎಚ್ಚರಿಕೆ ಬಳಿಕವಾದರೂ, ರಾಜ್ಯ ಸಾರಿಗೆ ಬಸ್ ಅವಘಡಗಳು, ದುರಂತಗಳು ಕಡಿಮೆಯಾಗಲಿವೆಯೇ ಕಾದುನೋಡಬೇಕಿದೆ.
ಅಕ್ಟೋಬರ್ 24 ರ ಶುಕ್ರವಾರ ಮುಂಜಾನೆ ಆಂಧ್ರ ಪ್ರದೇಶದ ಕರ್ನೂಲ್ ಬಳಿ ರಾಷ್ಟ್ರೀಯ ಹೆದ್ದಾರಿ-44 ರಲ್ಲಿ ವಿ. ಕಾವೇರಿ ಟ್ರಾವೆಲ್ಸ್ಗೆ ಸೇರಿದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಬೈಕ್ಗೆ ಗುದ್ದಿ ಅಪಘಾತಕ್ಕೀಡಾಗಿ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ. ಇಬ್ಬರು ಚಾಲಕರು ಸೇರಿದಂತೆ 27 ಜನರು ದುರಂತದಿಂದ ಬಚಾವಾಗಿದ್ದರು.
ಇದನ್ನೂ ಓದಿ: ಕರ್ನೂಲ್ನಲ್ಲಿ ಬೆಂಕಿಗಾಹುತಿಯಾದ ಬಸ್ಗೆ ಅತಿವೇಗ, ಅಪಾಯಕಾರಿ ಚಾಲನೆಗಾಗಿ ಬಿದ್ದ 23 ಸಾವಿರ ರೂ. ದಂಡ
ಆಂಧ್ರ ಪ್ರದೇಶದಲ್ಲಿ ಸಂಭವಿಸಿದ ಬಸ್ ದುರಂತದ ನಂತರ ಕರ್ನಾಟಕ ಸಾರಿಗೆ ಬಸ್ಸುಗಳ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಹಲವು ಡಕೋಟಾ ಬಸ್ಸುಗಳು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಹೀಗಾಗಿ ತಕ್ಷಣವೇ ಸುರಕ್ಷತಾ ಕ್ರಮಗಳ ಪರಿಶೀಲನೆಗೆ ಸಾರಿಗೆ ಸಚಿವರು ಸೂಚಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ