ಶಿವಮೊಗ್ಗ, ಜನವರಿ 22: ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕ ಹೊಸನಗರ ತಾಲೂಕಿನ ಬೇಸಿಗೆ ಗ್ರಾಮ ವ್ಯಾಪ್ತಿಯ ವಸವೆ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ದಬ್ಬಾಳಿಕೆ ನಡೆಸಿದ ಆರೋಪ ಕೇಳಿಬಂದಿದೆ. ರಸ್ತೆ ಕಾಮಗಾರಿ ವಿಚಾರವಾಗಿ ಗ್ರಾಮಸ್ಥನೊಂದಿಗೆ ವಾಗ್ವಾದಕ್ಕಿಳಿದ ಸದಸ್ಯ ಧರ್ಮಪ್ಪ, ಅಚ್ಯ ಶಬ್ದಗಳಿಂದ ನಿಂದನೆ ನಡೆಸಿದ್ದು, ಘಟನೆ ಗ್ರಾಮಕ್ಕೆ ಆಕ್ರೋಶ ವ್ಯಕ್ತವಾಗಿದೆ. ಸ್ಥಳೀಯ ನಿವಾಸಿ ರಮೇಶ್ ಅವರಿಗೆ ಧರ್ಮಪ್ಪ ಅಸಭ್ಯ ಹಾಗೂ ಅವಾಚ್ಯ ಪದಗಳನ್ನು ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಅದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ಅಷ್ಟೇ ಅಲ್ಲದೆ, ಕೋಪದ ಅತಿರೇಕದಲ್ಲಿ ಪಾದರಕ್ಷೆಯಿಂದ ಹೊಡೆಯಲು ಮುಂದಾದ ಘಟನೆಯೂ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಹಾಗೂ ಮೈಸೂರಿನಲ್ಲಿ ನಡೆದ ಇಂತಹ ಘಟನೆಗಳ ಬಳಿಕ, ಇದೀಗ ಶಿವಮೊಗ್ಗದಲ್ಲಿಯೂ ಕಾರ್ಯಕರ್ತರ ಪುಂಡಾಟ ಮರುಕಳಿಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ‘ಕಾನೂನಿನ ಭಯವೇ ಇಲ್ಲದಂತೆ ವರ್ತಿಸುವ ಇಂಥ ಕೆಲ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ