ಕಲಬುರಗಿ, ಫೆಬ್ರವರಿ 10: ಮದುವೆ ಸಮಾರಂಭದಲ್ಲಿ ಅಫಜಲ್ಪುರ ಕಾಂಗ್ರೆಸ್ ಮುಖಂಡ ಮತಿನ್ ಅಹ್ಮದ್ ಪಟೇಲ್ ಪಿಸ್ತೂಲ್ ಹಿಡಿದು ದುರಂಧರ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ಸಾಮಾಜಿಕ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಸಾರ್ವಜನಿಕ ಟೀಕೆಗೆ ಗುರಿಯಾಗಿದೆ. ಶಾಸಕ ಎಂ.ವೈ.ಪಾಟೀಲ್ ಅವರ ಬಲಗೈ ಬಂಟ ಎಂದು ಗುರುತಿಸಿಕೊಂಡಿರುವ ಮತಿ ಪಟೇಲ್ ಅವರ ಈ ಶೋ ಆಫ್ ನಡೆ ಕಾನೂನುಬಾಹಿರ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕವಾಗಿ ಶಸ್ತ್ರಾಸ್ತ್ರಗಳನ್ನು ಪ್ರದರ್ಶಿಸುವುದು ಅಪರಾಧ. ಅದರಲ್ಲೂ ಮದುವೆ ಸಮಾರಂಭದಂತಹ ಜನಸಂದಣಿಯ ಪ್ರದೇಶದಲ್ಲಿ ಪಿಸ್ತೂಲ್ ಹಿಡಿದು ಬಿಲ್ಡಪ್ ನೀಡಿರುವುದು ಗಂಭೀರ ವಿಚಾರ ಎಂದು ಪರಿಗಣಿಸಿ ಈ ಸಂಬಂಧ ಪೊಲೀಸ್ ಇಲಾಖೆ ತನಿಖೆ ಆರಂಭಿಸಿದೆ. ಮತಿನ್ ಪಟೇಲ್ ಬಳಸಿದ ಪಿಸ್ತೂಲ್ ಅಸಲಿಯೇ ಅಥವಾ ನಕಲಿಯೇ ಎಂಬ ಬಗ್ಗೆ ಹಾಗೂ ಅದಕ್ಕೆ ಪರವಾನಿಗೆ ಇದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.