ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್​​ನಿಂದ ಅರೆಬೆತ್ತಲೆ ಪ್ರತಿಭಟನೆ; ಬಂಧಿತ 4 ಆರೋಪಿಗಳು 5 ದಿನ ಪೊಲೀಸ್ ವಶಕ್ಕೆ

ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್​​ನಿಂದ ಅರೆಬೆತ್ತಲೆ ಪ್ರತಿಭಟನೆ; ಬಂಧಿತ 4 ಆರೋಪಿಗಳು 5 ದಿನ ಪೊಲೀಸ್ ವಶಕ್ಕೆ


ನವದೆಹಲಿ, ಫೆಬ್ರವರಿ 21: ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆ (AI ಇಂಪ್ಯಾಕ್ಟ್ ಶೃಂಗಸಭೆ) ಸಭಾಂಗಣದೊಳಗೆ ಶರ್ಟ್ ಬಿಚ್ಚಿ, ಮೋದಿ-ಟ್ರಂಪ್ ಫೋಟೋ ಇದ್ದ ಟಿ-ಶರ್ಟ್ ಹಿಡಿದುಕೊಂಡು, ಅಮೆರಿಕದ ಜೊತೆ ವ್ಯಾಪಾರ ಒಪ್ಪಂದದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯರ್ತರನ್ನು ಬಂಧಿಸಲಾಯಿತು. ಬಂಧಿತರಲ್ಲಿ ನಾಲ್ವರನ್ನು ಇಂದು ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ. ಆ ನಾಲ್ವರನ್ನೂ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ನೇಪಾಳದ ಜೆನ್‌ಝಡ್ ಪ್ರತಿಭಟನೆಯಿಂದ ಪ್ರೇರಿತರಾದ ಕಾಂಗ್ರೆಸ್ ಕಾರ್ಯಕರ್ತರು ಐ ಶೃಂಗಸಭೆಯಲ್ಲಿ ಗಲಭೆ ಸೃಷ್ಟಿಸಲು ಪಿತೂರಿ ನಡೆಸಿದ್ದರು ಎಂದು ಪೊಲೀಸ್ ತನಿಖೆ ವೇಳೆ ಬಯಲಾಗಿದೆ. “ಪ್ರಧಾನಿ ಮೋದಿ ರಾಜಿ ಮಾಡಿಕೊಂಡಿದ್ದಾರೆ” ಎಂಬ ಸ್ಲೋಗನ್ ಹೊಂದಿರುವ ಟಿ-ಶರ್ಟ್‌ಗಳನ್ನು ಹೈಯಲ್ಲಿ ಹಿಡಿದು ಬೀಸುವ ಮೂಲಕ ಯುವ ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆ ನಡೆಸಿದರು, ಅಲ್ಲಿ ಸೇರಿದ್ದ ಸಾವಿರಾರು ಜನರ ಗಮನ ಸೆಳೆದರು. ಜಾಗತಿಕ ನಾಯಕರು ಭಾಗವಹಿಸಿದ್ದ ಈ ಶೃಂಗಸಭೆಯಲ್ಲಿ ಈ ರೀತಿಯ ಅಸಭ್ಯ ವರ್ತನೆಯಿಂದ ಕೇಂದ್ರ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿತ್ತು.

ಇದನ್ನೂ ಓದಿ: ಐ ಶೃಂಗಸಭೆಯಲ್ಲಿ ಶರ್ಟ್ ತೆಗೆದು ಘೋಷಣೆ ಕೂಗಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಈ ಕಾಂಗ್ರೆಸ್ ಪ್ರತಿಭಟನಾಕಾರರು ನೇಪಾಳದ ಜೆನ್‌ಝಡ್ ಪ್ರತಿಭಟನೆಯಿಂದ ಪ್ರೇರಿತರಾಗಿದ್ದಾರೆ. ಶೃಂಗಸಭೆಯಲ್ಲಿ ಅದೇ ರೀತಿಯ ಚಳವಳಿಯನ್ನು ನಡೆಸಲು ಬಯಸಿದ್ದರು. ಹೀಗಾಗಿ, ಬಂಧಿತ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು 5 ದಿನಗಳ ಕಸ್ಟಡಿಗೆ ನೀಡುವಂತೆ ದೆಹಲಿ ನ್ಯಾಯಾಲಯದ ಮುಂದೆ ಕೋರಿದ್ದರು. ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ತಲೆತಗ್ಗಿಸುವಂತೆ ಸಂಚು ರೂಪಿಸಲಾಗುತ್ತಿದೆ ಎಂದು ನ್ಯಾಯಾಲಯ ಪಟಿಯಾಲ ನ್ಯಾಯಾಲಯಕ್ಕೆ ತಿಳಿಸಿದ್ದರು. ಇದಾದ ಬಳಿಕ ನ್ಯಾಯಾಲಯವು ಆರೋಪಿಗಳನ್ನು 5 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.

“ಪ್ರತಿಭಟನೆ ಶಾಂತಿಯುತವಾಗಿತ್ತು. ಯಾವುದೇ ವೀಡಿಯೊಗಳಲ್ಲಿ ಹಿಂಸಾಚಾರ ಕಂಡುಬಂದಿಲ್ಲ. ಅವರೆಲ್ಲರೂ ಪದವೀಧರರು, ಸುಶಿಕ್ಷಿತರು. ರಾಜಕೀಯ ಪ್ರೇರಣೆಯಿಂದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಆರೋಪಿ ಪರ ವಕೀಲರು ವಾದ ಮಂಡಿಸಿದ್ದರು.

ಇದನ್ನೂ ಓದಿ: ದೆಹಲಿಯ ಎಐ ಶೃಂಗಸಭೆಯಲ್ಲಿ ಹೈಡ್ರಾಮಾ; ಶರ್ಟ್ ಬಿಚ್ಚಿ ಮೋದಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ

“ಆರೋಪಿಗಳು ರಾಷ್ಟ್ರವಿರೋಧಿ ಘೋಷಣೆಗಳನ್ನು ಕೂಗಿದರು. ಪ್ರಧಾನಿ ವಿರುದ್ಧ ಸಂದೇಶಗಳನ್ನು ಹೊಂದಿರುವ ಟಿ-ಶರ್ಟ್ಗಳನ್ನು ಧರಿಸಿದ್ದರು” ಎಂದು ಸರ್ಕಾರಿ ವಕೀಲರು ವಾದಿಸಿದರು.

ಭಾರತ್ ಮಂಟಪದಲ್ಲಿ ಎಐ ಶೃಂಗಸಭೆಯ ಸಂದರ್ಭದಲ್ಲಿ ನಡೆದ ಪ್ರತಿಭಟನೆಗೆ ಬಂಧಿಸಲ್ಪಟ್ಟ ನಾಲ್ವರು ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಇಂದು ಬೆಳಿಗ್ಗೆ ಪಟಿಯಾಲ ಹೌಸ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಬಂಧಿತ ವ್ಯಕ್ತಿಗಳನ್ನು ಕೃಷ್ಣ ಹರಿ, ಕುಂದನ್ ಯಾದವ್, ಅಜಯ್ ಕುಮಾರ್ ಮತ್ತು ನರಸಿಂಹ ಯಾದವ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 3:22 pm, ಶನಿ, 21 ಫೆಬ್ರವರಿ 26





Source link

Leave a Reply

Your email address will not be published. Required fields are marked *