Headlines

‘ಎಐ’ ಹುಲಿ ಹಾವಳಿಗೆ ಜನ ಹೈರಾಣ: ಕಿಡಿಗೇಡಿಗಳಿಗೆ ಅರಣ್ಯ ಇಲಾಖೆ ಖಡಕ್​ ವಾರ್ನಿಂಗ್​

‘ಎಐ’ ಹುಲಿ ಹಾವಳಿಗೆ ಜನ ಹೈರಾಣ: ಕಿಡಿಗೇಡಿಗಳಿಗೆ ಅರಣ್ಯ ಇಲಾಖೆ ಖಡಕ್​ ವಾರ್ನಿಂಗ್​


ಚಾಮರಾಜನಗರ, ನವೆಂಬರ್ 13: ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಪ್ರಾಣಿಗಳ ಹಾವಳಿ ಮಿತಿ ಮೀರಿದೆ. ಹೊಲಗಳಿಗೆ ಹೋಗುವ ರೈತರು, ಮೇಯಲು ಹೋಗಿರುವ ಜಾನುವಾರುಗಳ ಮೇಲೆ ಮನಸೋ ಇಚ್ಛೆ ದಾಳಿ ನಡೆಸುತ್ತಿದ್ದಾರೆ. ಸೇರಿದಂತೆ ಹುಲಿ ದಾಳಿ ಮೇಲಿಂದ ಮೇಲೆ ನಡೆಯುತ್ತಿರೋದು ಜನರ ಆತಂಕಕ್ಕೆ. ಈ ನಡುವೆ ಹುಲಿ ಪ್ರತ್ಯಕ್ಷ ಎಂಬ ವಿಡಿಯೋಗಳು ವೈರಲ್ ಆಗುತ್ತಿರುವುದು ಸಾರ್ವಜನಿಕರ ನಿದ್ದೆಗೆಡಿಸಿದೆ. ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಹೀಗಾಗಿ ಹುಲಿಯ ಶೋಧಕ್ಕಿಳಿದ ಅರಣ್ಯ ಇಲಾಖೆ ಶಾಕಿಂಗ್ ಮಾಹಿತಿ ಪತ್ತೆ ಹಚ್ಚಿದ್ದು, ಶೇರ್ ಮಾಡಿರುವ ವಿಡಿಯೋಗಳು ಎಐ ನಿರ್ಮಿತ ಎಂಬುದು ಗೊತ್ತಾಗಿದೆ.

ಕಾನೂನು ಕ್ರಮದ ಎಚ್ಚರಿಕೆ

ಐಗಳ ಮೂಲಕ ಹುಲಿಯ ವಿಡಿಯೋ ನಿರ್ಮಿಸಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಸಮರಕ್ಕಿಳಿದಿರುವ ಅರಣ್ಯ ಇಲಾಖೆ, ಅಂತವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ರವಾನಿಸಿದೆ. ಹುಲಿ ಬಂತೆಂದು ಸುಳ್ಳು ಫೋಟೋ ಹಂಚುವುದರಿಂದ ಜನ ಸಾಮಾನ್ಯರಲ್ಲಿ ಭಯ ಸೃಷ್ಟಿಯಾಗುತ್ತಿದೆ. ಅಲ್ಲದೆ ಇಲಾಖೆಯ ಸಿಬ್ಬಂದಿ ಕಾರ್ಯನಿರ್ವಹಣೆಗೂ ಇದರಿಂದ ಸಮಸ್ಯೆಯಾಗುತ್ತಿದೆ.

ಇದನ್ನೂ ಓದಿ: ಹುಲಿ ದಾಳಿ ಭೀತಿ, ಬಂಡೀಪುರ- ನಾಗರಹೊಳೆ ಸಫಾರಿಗೆ ತಾತ್ಕಾಲಿಕ ನಿಷೇಧ

ಭಯಭೀತರಾಗಿರುವ ಕಾಡಂಚಿನ ಗ್ರಾಮಗಳ ಜನರು

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಪಡಗೂರು ಕಲ್ಲಹಳ್ಳಿಯಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸುತ್ತಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಇತ್ತೀಚೆಗಷ್ಟೇ ಬರೋಬ್ಬರಿ 4 ಹುಲಿಗಳನ್ನು ಸೆರೆ ಹಿಡಿದಿದ್ದರು. ಸಾಕಾನೆ ಸಹಾಯದಿಂದ ಮೂರು ಹುಲಿಗಳ ಜೊತೆಗೆ ತಾಯಿ ಹುಲಿ ಸೆರೆಯಾಗಿತ್ತು. ಅದಾದ ಬಳಿಕವೂ ಚಾಮರಾಜನಗರ ಜಿಲ್ಲೆಯಲ್ಲಿ ಹುಲಿ ಓಡಾಟ ಮುಂದುವರಿದಿದ್ದು, ಮಂಚಹಳ್ಳಿ ಗ್ರಾಮದಲ್ಲಿ ಶಿವಣ್ಣ ಎಂಬುವವರಿಗೆ ಸೇರಿದ 2 ಹಸುಗಳ ಮೇಲೆ ವ್ಯಾಘ್ರ ದಾಳಿ ನಡೆಸಿತ್ತು. ಜಮೀನಿನಲ್ಲಿ ಹಸುಗಳ ಮೇಲೆ ಹುಲಿ ದಾಳಿ ನಡೆಸಿದ್ದು, ಘಟನಾ ಸ್ಥಳಕ್ಕೆ ಬಂಡೀಪುರ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದರು. ಆತಂಕಗೊಂಡಿರುವ ಮಂಚಹಳ್ಳಿಯ ನಿವಾಸಿಗಳು, ಜಮೀನುಗಳಿಗೆ ತೆರಳಲು ಹೆದರುತ್ತಿದ್ದಾರೆ. ಕಾಡಂಚಿನ ಯಾವುದೇ ಗ್ರಾಮ ಸ್ಥಿತಿಯೂ ಹೀಗೇ ಇದೆ. ಇಂತಹ ಸಂದರ್ಭದಲ್ಲಿ ಹುಲಿ ಬಂತೆಂದು ಎಐ ವಿಡಿಯೋ, ಫೋಟೋ ಕೆಲ ಕಿಡಿಗೇಡಿಗಳು ಹರಿಬಿಡುತ್ತಿರುವುದು, ಇಂತವರ ವಿರುದ್ಧ ಅರಣ್ಯ ಇಲಾಖೆ ಗರಂ ಆಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 12:01 pm, ಗುರುವಾರ, 13 ನವೆಂಬರ್ 25



Source link

Leave a Reply

Your email address will not be published. Required fields are marked *