ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ: ಹೊಸ ಯೋಜನೆಗಳ ಬಗ್ಗೆ ಮಾಹಿತಿ ನೀಡಿದ ಎಡಿಜಿಪಿ ಅಲೋಕ್ ಕುಮಾರ್

ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ: ಹೊಸ ಯೋಜನೆಗಳ ಬಗ್ಗೆ ಮಾಹಿತಿ ನೀಡಿದ ಎಡಿಜಿಪಿ ಅಲೋಕ್ ಕುಮಾರ್


ಬೆಂಗಳೂರು, ಡಿಸೆಂಬರ್ 17: ರಾಜ್ಯದ ಕಾರಾಗೃಹಗಳಲ್ಲಿ ಭದ್ರತೆಯನ್ನು ಹೆಚ್ಚಿಸಲು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ. ಜೈಲುಗಳಲ್ಲಿ ನಡೆಯುವ ಮೊಬೈಲ್ ಬಳಕೆ, ಮಾದಕ ವಸ್ತುಗಳ ಸಾಗಣೆ ಮತ್ತು ಇತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಈ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸಲಿದೆ. ಇತ್ತೀಚೆಗೆ ಜೈಲುಗಳು ಹೋಮ್ ಸ್ಟೇ ಅಥವಾ ರೆಸಾರ್ಟ್ಗಳಂತಿವೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಸಿಬ್ಬಂದಿಯ ಬೇಜವಾಬ್ದಾರಿತನ ಮತ್ತು ಲೋಪಗಳನ್ನು ತಪ್ಪಿಸುವ ತಂತ್ರಜ್ಞಾನದ ಸಹಾಯ ಪಡೆಯುವುದು ಅವಶ್ಯಕ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ. ಐ ಆಧಾರಿತ ಭದ್ರತಾ ವ್ಯವಸ್ಥೆಯು ನಿಷೇಧಿತ ವಸ್ತುಗಳನ್ನು ಸುಲಭವಾಗಿ ಪತ್ತೆಹಚ್ಚಲು ಸಹಾಯ ಮಾಡುತ್ತದೆ.

‘ಟಿವಿ9’ ಜತೆ ಮಾತನಾಡಿದ ಅಲೋಕ್ ಕುಮಾರ್, ಜೈಲುಗಳಿಗೆ ಗಾಂಜಾ ಮತ್ತು ಮೊಬೈಲ್ ಸಾಗಣೆಯಂತಹ ಅಕ್ರಮ ಚಟುವಟಿಕೆಗಳು ಸಂಪೂರ್ಣ ಜಾಲವನ್ನು ಭೇದಿಸುವುದು ಅವರ ಮುಖ್ಯ ಗುರಿಯಾಗಿದೆ. ಸರ್ಕಾರ ಮತ್ತು ಸಾರ್ವಜನಿಕರು ತಮ್ಮ ಮೇಲೆ ಇಟ್ಟಿರುವ ಭರವಸೆಯನ್ನು ಉಳಿಸಿಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *