ಏರ್ ಇಂಡಿಯಾ ಡ್ರೀಮ್‌ಲೈನರ್​ನಲ್ಲಿ ಮತ್ತೆ ಇಂಧನದ ಸ್ವಿಚ್ ಸಮಸ್ಯೆ; ಲಂಡನ್-ಬೆಂಗಳೂರು ಮಾರ್ಗದ ವಿಮಾನ ಹಾರಾಟ ಸ್ಥಗಿತ

ಏರ್ ಇಂಡಿಯಾ ಡ್ರೀಮ್‌ಲೈನರ್​ನಲ್ಲಿ ಮತ್ತೆ ಇಂಧನದ ಸ್ವಿಚ್ ಸಮಸ್ಯೆ; ಲಂಡನ್-ಬೆಂಗಳೂರು ಮಾರ್ಗದ ವಿಮಾನ ಹಾರಾಟ ಸ್ಥಗಿತ


ಬೆಂಗಳೂರು, ಫೆಬ್ರವರಿ 2: ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ಸಮಸ್ಯೆ ಪತ್ತೆಯಾದ ನಂತರ ಏರ್ ಇಂಡಿಯಾ (ಏರ್ ಇಂಡಿಯಾ) ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದ ಹಾರಾಟವನ್ನು ಇಂದು ಸ್ಥಗಿತಗೊಳಿಸಲಾಗಿದೆ. ಈ ವಿಮಾನ ಲಂಡನ್ ನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟಿತ್ತು. AI 132 ವಿಮಾನವು ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹಾರುತ್ತಿತ್ತು. ಈ ವೇಳೆ ಪೈಲಟ್ ವಿಮಾನದ ಕಾರ್ಯವಿಧಾನವನ್ನು ಪರಿಶೀಲಿಸುವಾಗ ಫ್ಯೂಯೆಲ್ ಕಂಟ್ರೋಲ್ ಸ್ವಿಚ್‌ನಲ್ಲಿ ಸಮಸ್ಯೆ ಕಂಡುಬಂದಿದೆ. ತಕ್ಷಣ ಅವರ ಏರ್ ಇಂಡಿಯಾ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದರು. ತಕ್ಷಣ ಎಚ್ಚೆತ್ತುಕೊಂಡು ಅಧಿಕಾರಿಗಳು ಆ ವಿಮಾನದ ಹಾರಾಟವನ್ನು ರದ್ದುಗೊಳಿಸಿದ್ದಾರೆ.

2025ರಲ್ಲಿ ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ಡ್ರೀಮ್ ಲೈನರ್ ವಿಮಾನದ ಅಪಘಾತ ನಿಮಗೆ ನೆನಪಿರಬಹುದು. ಆ ದುರಂತದಲ್ಲಿ 260 ಜನರು ಇದ್ದರು. ಆ ವಿಮಾನದಲ್ಲಿ ಕೂಡ ಫ್ಯೂಯೆಲ್ ಸ್ವಿಚ್ ಸಮಸ್ಯೆಯಿಂದಲೇ ಅಪಘಾತ ಸಂಭವಿಸಿದೆ ಎಂಬುದು ವರದಿಯಲ್ಲಿ ಬಹಿರಂಗವಾಗಿತ್ತು. ಹೀಗಾಗಿ, ಇದೀಗ ಮತ್ತೆ ಅದೇ ಮಾದರಿಯ ಏರ್ ಇಂಡಿಯಾ ಡ್ರೀಮ್ ಲೈನರ್ ಬೋಯಿಂಗ್ ವಿಮಾನದಲ್ಲಿ ಫ್ಯೂಯೆಲ್ ಸ್ವಿಚ್ ಸಮಸ್ಯೆ ಉಂಟಾಗಿದೆ ಇದನ್ನು ಪರಿಗಣಿಸಿದ ವಿಮಾನಯಾನ ಸಿಬ್ಬಂದಿ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಿದ್ದಾರೆ.

ಇದನ್ನೂ ಓದಿ: ಏರ್ ಇಂಡಿಯಾ, ಇಂಡಿಗೋ ವಿಮಾನಗಳಿಗೆ ಬಾಂಬ್ ಬೆದರಿಕೆ; 5 ವಿಮಾನ ನಿಲ್ದಾಣಗಳಲ್ಲಿ ಎಚ್ಚರಿಕೆ

ಈ ಬಗ್ಗೆ ಏರ್ ಇಂಡಿಯಾ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ನಮ್ಮ ಪೈಲಟ್‌ಗಳಲ್ಲಿ ಒಬ್ಬರು ಫ್ಯೂಯೆಲ್ ಕಂಟ್ರೋಲ್ ಸ್ವಿಚ್‌ನಲ್ಲಿ ಇರುವ ಸಮಸ್ಯೆಯ ಬಗ್ಗೆ ಮಾಹಿತಿ ನೀಡಿದ ತಕ್ಷಣ ಆ ವಿಮಾನದ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ. ಹೀಗಾಗಿ, ಈ ಬಗ್ಗೆ ಡಿಜಿಸಿಎಗೂ ಮಾಹಿತಿ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆದರೆ, ಸಂಪೂರ್ಣ ಪರಿಶೀಲನೆಯ ನಂತರ ಆ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ ಎಂದು ಏರ್ ಇಂಡಿಯಾ ಅಧಿಕಾರಿ. ಈ ಪರಿಸ್ಥಿತಿಯ ಬಗ್ಗೆ ನಾಗರಿಕ ವಿಮಾನಯಾನ ನಿಯಂತ್ರಕವಾದ ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ (DGCA) ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಯಲು ವಿಮಾನ ಇಂಡಿಯಾ ವಿಮಾನದಲ್ಲಿ ಬೆಂಕಿ; ಪ್ರಯಾಣಿಕರು ಸೇಫ್

“DGCA ನಿರ್ದೇಶನದ ನಂತರ ಏರ್ ಇಂಡಿಯಾ ತನ್ನ ಫ್ಲೀಟ್‌ನಲ್ಲಿರುವ ಎಲ್ಲಾ ಬೋಯಿಂಗ್ 787 ವಿಮಾನಗಳ ಇಂಧನ ನಿಯಂತ್ರಣ ಸ್ವಿಚ್‌ಗಳನ್ನು ಪರಿಶೀಲಿಸಿದೆ. ಅದರಲ್ಲಿ ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ. ಏರ್ ಇಂಡಿಯಾದಲ್ಲಿ ನಮ್ಮ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯು ಪ್ರಮುಖ ಆದ್ಯತೆಯಾಗಿದೆ” ಎಂದು ಏರ್ ಇಂಡಿಯಾ ಹೇಳಿದೆ.

ಈ ಜುಲೈ 2025 ಘಟನೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ಟೆಕ್ ಆಫ್ ಆದ ಸ್ವಲ್ಪ ಸಮಯದ ನಂತರ 241 ಪ್ರಯಾಣಿಕರು ಸೇರಿದಂತೆ 260 ಜನರನ್ನು ಬಲಿತೆಗೆದುಕೊಂಡಿತು ಏರ್ ಇಂಡಿಯಾ ಡ್ರೀಮ್ಲೈನರ್ ಅಪಘಾತದ ನೆನಪುಗಳನ್ನು ಮರಳಿ ತಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 9:23 pm, ಸೋಮ, 2 ಫೆಬ್ರವರಿ 26



Source link

Leave a Reply

Your email address will not be published. Required fields are marked *