ಕಲಬುರಗಿ, (ಅಕ್ಟೋಬರ್ 17): ಕಲಬುರಗಿ, (ಅಕ್ಟೋಬರ್ 17): ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣ (ಆಳಂದ ಮತ ಕಳ್ಳತನ ಪ್ರಕರಣ) ಎಸ್‌ಐಟಿ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ಇಂದು (ಅಕ್ಟೋಬರ್ 17) ಆಳಂದ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ (ಸುಭಾಷ್ ಗುತ್ತೇದಾರ್) ಮನೆ ಸೇರಿದಂತೆ ಮೂರು ಕಡೆ ದಾಳಿ ಮಾಡಿದೆ. ಎಸ್‌ಐಟಿ ಎಸ್‌ಪಿ ಶುಭಾನ್ವಿತಾ ನೇತೃತ್ವದ ತಂಡ ಕಲಬುರಗಿಯ ಗುಬ್ಬಿ ಕಾಲೋನಿಯಲ್ಲಿರುವ ಸುಭಾಷ್ ಗುತ್ತೇದಾರ್ ಮನೆ ಹಾಗೂ ಎಸ್‌ಐ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.