ಆಲಿಗಡ್ ಮುಸ್ಲಿಂ ಯೂನಿವರ್ಸಿಟಿ ಕ್ಯಾಂಪಸ್​ನಲ್ಲೇ ಬೋಧಕ ರಾವ್ ದಾನಿಶ್ ಅಲಿ ಹತ್ಯೆ

ಆಲಿಗಡ್ ಮುಸ್ಲಿಂ ಯೂನಿವರ್ಸಿಟಿ ಕ್ಯಾಂಪಸ್​ನಲ್ಲೇ ಬೋಧಕ ರಾವ್ ದಾನಿಶ್ ಅಲಿ ಹತ್ಯೆ


ಘಟನೆ ನಡೆದ ಯೂನಿವರ್ಸಿಟಿ ಕ್ಯಾಂಟೀನ್ ಸ್ಥಳ

ಕಾನಪುರ, ಡಿಸೆಂಬರ್ 9: ಆಲಿಗಡ್ ಮುಸ್ಲಿಂ ಯೂನಿವರ್ಸಿಟಿಯ (ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ) ಬೋಧಕರೊಬ್ಬರನ್ನು ಕ್ಯಾಂಪಸ್ ನಲ್ಲೇ ಹತ್ಯೆ ಮಾಡಿದ ಘಟನೆ ನಡೆದಿದೆ. ವಿಶ್ವವಿದ್ಯಾಲಯದ ಎಬಿಕೆ ಸ್ಕೂಲ್‌ನಲ್ಲಿ ಬೋಧಕರಾಗಿರುವ ರಾವ್ ಡ್ಯಾನಿಸ್ ಅಲಿಯನ್ನು ಗುಂಡಿಟ್ಟು ಸಾಯಿಸಲಾಗಿದೆ. ಆಲಿಗಡದಲ್ಲಿರುವ ಯೂನಿವರ್ಸಿಟಿ ಕ್ಯಾಂಪಸ್ನ ಮೌಲಾನ ಆಜಾದ್ ಲೈಬ್ರರಿ ಪ್ರದೇಶದಲ್ಲಿ ಬುಧವಾರ ರಾತ್ರಿ 9 ಗಂಟೆಗೆ ಈ ಘಟನೆ ನಡೆದಿದೆ.

ಈ ಹತ್ಯೆಗೈದ ಹಂತಕರು ಯಾರೆಂದು ಗೊತ್ತಾಗಿಲ್ಲ. ದಾನಿಶ್ ಅಲಿ ಅವರು ತಮ್ಮ ಇಬ್ಬರು ಸಹೋದ್ಯೋಗಿಗಳೊಂದಿಗೆ ಮೌಲಾನ ಆಜಾದ್ ಲೈಬ್ರರಿ ಸಮೀಪದ ಕ್ಯಾಂಟೀನ್‌ಗೆ ವಾಕಿಂಗ್‌ಗೆ ಹೋಗಿದ್ದರು. ಆಗ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ, ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಘಟನೆಯ ನಂತರ ಮತ್ತೊಂದು ಭಯಾನಕ ಅಪಘಾತ: ಎರಡು ಕಾರಿಗೆ ಡಿಕ್ಕಿ ಹೊಡೆದ ಸರ್ಕಾರಿ ಬಸ್ಸು, 7 ಮಂದಿ ಸಾವು

ತಕ್ಷಣ ಸ್ಥಳಕ್ಕೆ ಬಂದು, ರಾವ್ ಅಲಿಯನ್ನು ಜವಾಹರಲಾಲ್ ನೆಹರೂ ಮೆಡಿಕಲ್ ಕಾಲೇಜಿಗೆ ಕರೆದೊಯ್ದಿದ್ದಾರೆ. ಆದರೆ, ಗಂಭೀರವಾಗಿ ಪರಿಣಾಮ ಅವರ ಪ್ರಾಣ ಉಳಿಯಲಿಲ್ಲ. ಇಬ್ಬರು ಅಪರಿಚಿತ ವ್ಯಕ್ತಿಗಳು ಈ ಹತ್ಯೆಗೈದಿರುವುದನ್ನು ಖಚಿತಪಡಿಸಿದ್ದಾರೆ.

ಅಲಿಗಡ್ ಪೊಲೀಸರ ಟ್ವೀಟ್

ಯಾವ ಕಾರಣಕ್ಕೆ ಈ ಕೊಲೆ ನಡೆದಿದೆ ಎಂಬುದು ಗೊತ್ತಾಗಿಲ್ಲ. ಸದ್ಯ ತನಿಖೆ ನಡೆಸುತ್ತಿದ್ದಾರೆ. ಸುತ್ತಮುತ್ತಲಿನ ಸ್ಥಳದ ಸಿಸಿಟಿವಿ ಫೂಟೇಜ್ ಅನ್ನು ಪರಿಶೀಲಿಸಲಾಗುತ್ತಿದೆ, ಹಂತಕರನ್ನು ಪತ್ತೆ ಮಾಡುವ ಪ್ರಯತ್ನ ನಡೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ





Source link

Leave a Reply

Your email address will not be published. Required fields are marked *