ಒಬ್ಬ ವ್ಯಕ್ತಿ 5 ವರ್ಷ ಮೋಸ ಹೋಗಲು ಹೇಗೆ ಸಾಧ್ಯ? RCB ಆಟಗಾರನ ಮೇಲೆ ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್!

ಒಬ್ಬ ವ್ಯಕ್ತಿ 5 ವರ್ಷ ಮೋಸ ಹೋಗಲು ಹೇಗೆ ಸಾಧ್ಯ? RCB ಆಟಗಾರನ ಮೇಲೆ ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್!

ಪ್ರಯಾಗ್‌ರಾಜ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಯಶ್ ದಯಾಳ್‌ಗೆ ಅಲಹಾಬಾದ್ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಅವರ ಮೇಲೆ ಬಲವಂತದ ಕ್ರಮ ಬೇಡ ಎಂದು ಸೂಚಿಸಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ

ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎನ್ನುವ ಆರೋಪ ಎದುರಿಸುತ್ತಿರುವ ಕ್ರಿಕೆಟಿಗ ಯಶ್‌ ದಯಾಳ್‌ಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದ್ದು, ಅವರನ್ನು ಬಂಧಿಸಿದಂತೆ ಅಲಹಾಬಾದ್‌ ಹೈಕೋರ್ಟ್‌ ಪೊಲೀಸರಿಗೆ ಸೂಚಿಸಿದೆ.

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಪ್ರಶ್ನಿಸಿ ದಯಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮುಂದಿನ ವಿಚಾರಣೆ ತನಕ ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದಿದೆ.

ಜೂ.21ರಂದು ಮಹಿಳೆಯೊಬ್ಬರು ದಯಾಳ್‌ ತಮ್ಮನ್ನು ವಿವಾಹವಾಗುವುದಾಗಿ ನಂಬಿಸಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯವೆಸೆಗಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು.

ಈ ಸಂಬಂಧ ಜು.6ರಂದು ಬಿಎನ್‌ಎಸ್ ಸೆಕ್ಷನ್ 69 (ವಿವಾಹದ ಸುಳ್ಳು ಭರವಸೆ, ಮೋಸದ ವಿಧಾನಗಳಿಂದ ಲೈಂಗಿಕ ದೌರ್ಜನ್ಯ) ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಕಳೆದ ಜೂನ್ 21 ರಂದು ಮಹಿಳೆಯೊಬ್ಬರು ಐಜಿಆರ್‌ಎಸ್ (ಸಮಗ್ರ ದೂರು ಪರಿಹಾರ ವ್ಯವಸ್ಥೆ) ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ದೂರು ನೀಡಿದ್ದರು.

‘ಒಬ್ಬ ವ್ಯಕ್ತಿಯನ್ನು 1 ದಿನ, 2 ದಿನ ಅಥವಾ 3 ದಿನ ಮೋಸ ಮಾಡಬಹುದು. ಆದರೆ ದೂರುದಾರೆಯು ಕ್ರಿಕೆಟಿಗನ ಜೊತೆ 5 ವರ್ಷದಿಂದ ಸಂಬಂಧವಿಟ್ಟುಕೊಂಡಿದ್ದಾಗಿ ಹೇಳಿದ್ದಾರೆ. ಒಬ್ಬ ವ್ಯಕ್ತಿ 5 ವರ್ಷ ಮೋಸ ಹೋಗಲು ಹೇಗೆ ಸಾಧ್ಯ’ ಎಂದು ವಿಚಾರಣೆ ವೇಳೆ ನ್ಯಾಯಪೀಠ ಅಭಿಪ್ರಾಯಿಸಿದೆ.

Source link

Leave a Reply

Your email address will not be published. Required fields are marked *