ಬೆಂಗಳೂರು, ಡಿಸೆಂಬರ್ 10: ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ (ಐಪಿಎಸ್ ಅಲೋಕ್ ಕುಮಾರ್) ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಇಲಾಖಾ ತನಿಖೆಯನ್ನು ಇತ್ತೀಚೆಗೆ ರದ್ದುಗೊಳಿಸಿತು. ಈಲ್ಲೇ ಇದಿಗ ಅಲೋಕ್ ಕುಮಾರ್ ಅವರಿಗೆ ಎಡಿಜಿಪಿಯಿಂದ ಡಿಜಿಪಿಯಾಗಿ ಭಡ್ತಿ ನೀಡಿದ ರಾಜ್ಯ ಸರ್ಕಾರ, ಕಾರಾಗೃಹ ಇಲಾಖೆಗೆ ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಆ ಮೂಲಕ 8 ತಿಂಗಳ ಹೋರಾಟಕ್ಕೆ ಜಯ ಸಿಕ್ಕಿದೆ.
ಅಲೋಕ್ ಕುಮಾರ್ಗೆ ಕಾರಾಗೃಹ ಇಲಾಖೆ ಡಿಜಿಪಿಯಾಗಿ ವರ್ಗಾವಣೆ ಹಿನ್ನಲೆ ಪೊಲೀಸ್ ತರಬೇತಿ ಇಲಾಖೆ ಎಡಿಜಿಪಿಯಾಗಿ ಬಿ.ದಯಾನಂದ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ: ಐಪಿಎಸ್ ಅಲೋಕ್ ಕುಮಾರ್ಗೆ ಮುಂಬಡ್ತಿ ನೀಡದೇ 6 ವರ್ಷದ ಹಳೆ ಕೇಸ್ ಕೆದಕಿದ ಸರ್ಕಾರಕ್ಕೆ ಶಾಕ್
2019 ರಲ್ಲಿ ನಡೆದಿದ್ದ ಫೋನ್ ಟ್ಯಾಪಿಂಗ್ ಹಗರಣದ ಪ್ರಕರಣದಲ್ಲಿ ಅಲೋಕ್ ಕುಮಾರ್ ಸೇರಿದಂತೆ ಕೆಲ ಅಧಿಕಾರಿಗಳ ವಿರುದ್ಧ ರಾಜ್ಯ ಇಲಾಖಾ ತನಿಖೆಗೆ ಸರ್ಕಾರ ಆದೇಶ ಹೊರಡಿಸಿದೆ. ಈ ವೇಳೆ ಅಲೋಕ್ ಕುಮಾರ್ ನಗರ ಪೊಲೀಸ್ ಆಯುಕ್ತ. ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಿತ್ತು. ಆದರೆ 2025 ಮೇ ತಿಂಗಳಿನಲ್ಲಿ ಇಲಾಖಾ ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅಲೋಕ್ ಕುಮಾರ್ ಅವರು ಇತ್ತೀಚೆಗೆ ಕೇಂದ್ರ ಆಡಳಿತ ನ್ಯಾಯಮಂಡಳಿ ಮೊರೆ ಹೋಗಿದ್ದರು. ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ವಾದಿಸಿದ್ದರು.
ಅಲೋಕ್ ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯ ಇಬ್ಬರು ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ನೀಡಿದ್ದರು. ಹೀಗಾಗಿ ವಿಚಾರಣೆ ಸಿಎಟಿ ಮುಖ್ಯಸ್ಥ ನ್ಯಾಯಮೂರ್ತಿ ರಣಜೀತ್ ಬಳಿಗೆ ಹೋಗಿತ್ತು. ಈ ವೇಳೆ ವಾದ ಪ್ರತಿವಾದದ ನಂತರ ಅಕ್ಟೋಬರ್ 14 ರಂದು ತನಿಖೆಯನ್ನು ರದ್ದುಗೊಳಿಸಿ ಮಹತ್ವದ ತೀರ್ಪು ನೀಡಲಾಯಿತು. ಜೊತೆಗೆ ತಡೆಹಿಡಿಯಲಾಗಿದ್ದ ಬಡ್ತಿ ಮತ್ತು ಸೌಲಭ್ಯಗಳನ್ನು ನೀಡುವಂತೆ ಸೂಚಿಸಲಾಗಿದೆ. ಆ ಮೂಲಕ ಅಲೋಕ್ ಕುಮಾರ್ ಅವರು ಗೆದ್ದು ಬೀಗಿದ್ದರು.
ಇದನ್ನೂ ಓದಿ: ಎಡಿಜಿಪಿ ಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಇತ್ತ ಸರ್ಕಾರ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಆದರೆ ಸಿಎಟಿ ಆದೇಶಕ್ಕೆ ಸಂಪೂರ್ಣ ತಡೆ ನೀಡಲು ನಿರಾಕರಿಸಲಾಗಿದೆ. ಹೀಗಾಗಿ ಇದೀಗ ಅಲೋಕ್ ಕುಮಾರ್ ಅವರಿಗೆ ಭಡ್ತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ವರದಿ: ಪ್ರದೀಪ್ ಚಿಕ್ಕಾಟೆ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 8:20 pm, ಬುಧವಾರ, 10 ಡಿಸೆಂಬರ್ 25