Headlines

ರೋಗಿಗಳ ರಕ್ಷಣೆಗೆ ಇರುವ ಆ್ಯಂಬುಲೆನ್ಸ್​ನಲ್ಲಿ ಜನರ ಸಾಗಾಟ! ಕುರಿಗಳಂತೆ ಜನ ತುಂಬಿ ಕರೆದೊಯ್ಯುತ್ತಿರುವ ವಿಡಿಯೋ ವೈರಲ್

ರೋಗಿಗಳ ರಕ್ಷಣೆಗೆ ಇರುವ ಆ್ಯಂಬುಲೆನ್ಸ್​ನಲ್ಲಿ ಜನರ ಸಾಗಾಟ! ಕುರಿಗಳಂತೆ ಜನ ತುಂಬಿ ಕರೆದೊಯ್ಯುತ್ತಿರುವ ವಿಡಿಯೋ ವೈರಲ್


ಮಕ್ಕಳ ರಕ್ಷಣೆಗೆ ಇರುವ ಆಯಂಬುಲೆನ್ಸ್ ನಲ್ಲಿ ಜನರ ಸಾಗಾಟ! ಕುರಿಗಳಂತೆ ಜನ ತುಂಬುತ್ತಿರುವ ವಿಡಿಯೋ ವೈರಲ್

ಗದಗ, ಮಾರ್ಚ್ 9: ರೋಗಿಗಳ ತುರ್ತು ಚಿಕಿತ್ಸೆಗೆ ಬಳಸಬೇಕಾದ ಆಯಂಬುಲೆನ್ಸ್ ವಾಹನವನ್ನು ಜನರ ಸಾಗಾಟಕ್ಕೆ ಬಳಸಲಾಗಿದೆ ಎಂಬ ಆರೋಪ ಗದಗದಲ್ಲಿ ಕೇಳಿಬಂದಿದೆ. ಗದಗದ ಜಿಮ್ಸ್ (GIMS) ಆಸ್ಪತ್ರೆಯ ಆಯಂಬುಲೆನ್ಸ್‌ನಲ್ಲಿ ಜನರು ಕುರಿಗಳಂತೆ ತುಂಬಿಕೊಂಡು ಸಾಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಆಯಂಬುಲೆನ್ಸ್ ಬಂದು ನಿಲ್ಲಲು ಅದಕ್ಕೆ ಮುಗಿಬಿದ್ದು ಹತ್ತುವ ದೃಶ್ಯಗಳು ಕಂಡುಬಂದಿವೆ. ಮಕ್ಕಳ ರಕ್ಷಣೆಗೆ ಇರಬೇಕಾದ ಆಯಂಬುಲೆನ್ಸ್‌ನಲ್ಲಿ ಸಾಮಾನ್ಯ ಜನರು ಸಾಗಾಟ ಮಾಡುತ್ತಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

ಸ್ಥಳೀಯರ ಪ್ರಕಾರ, ಗದಗ ಜಿಮ್ಸ್ ಆಸ್ಪತ್ರೆಯಿಂದ ಗದಗ ನಗರಕ್ಕೆ ಬಸ್ ಸೌಲಭ್ಯದ ಕೊರತೆಯಿಂದ ಕೆಲವು ಆಯಂಬುಲೆನ್ಸ್‌ನ ಪ್ರಯಾಣಕ್ಕಾಗಿ ಬಳಸುವ ಸಾಧ್ಯತೆಯಿದೆ. ಆದರೆ, ರೋಗಿಗಳಿಗೆ ಇತರರನ್ನು ಆಯಂಬುಲೆನ್ಸ್ನಲ್ಲಿ ಸಾಗಾಟ ಮಾಡುವುದು ನಿಯಮ ಉಲ್ಲಂಘನೆಯಾಗಿದೆ. ಇನ್ನೊಂದೆಡೆ, ಚಾಲಕ ಅಥವಾ ಸಿಬ್ಬಂದಿಯಿಂದ ಆಯಂಬುಲೆನ್ಸ್ ದುರುಪಯೋಗವಾಗಿರಬಹುದೆಂಬ ಆರೋಪವೂ ಕೇಳಿಬಂದಿದೆ. ಈ ರೀತಿಯ ಘಟನೆಗಳಿಂದ ರೋಗಿಗಳಿಗೆ ಸೋಂಕು ಉಂಟಾಗುತ್ತದೆ, ಸಾರ್ವಜನಿಕರಿಗೆ ಅಪಾಯ ಉಂಟಾಗುವ ಸಾಧ್ಯತೆಯಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *