
ತುಂಟಾಟ ಸಿನಿಮಾ ಬಳಿಕ ಕಾಲಿವುಡ್ಗೆ ಎಂಟ್ರಿಕೊಟ್ಟ ಛಾಯಾ, ಧನುಷ್ ಜೊತೆ ‘ತಿರುಡಾ ತಿರುಡಿ’ ಚಿತ್ರದಲ್ಲಿ ನಟಿಸಿದರು. ಈ ಸಿನಿಮಾ ಅವರಿಗೆ ದೊಡ್ಡ ಯಶಸ್ಸು ತಂದುಕೊಟ್ಟಿತು. ನಂತರ ಮಲಯಾಳಂ ಸಿನಿರಂಗಕ್ಕೂ ಕಾಲಿಟ್ಟರು. ಹೀಗೆ ನಟನೆಯಲ್ಲಿ ಮುಂದುವರೆದ ಛಾಯಾ ಸಿಂಗ್, ಬಂಗಾಳಿ, ಬೋಜಪುರಿ, ತೆಲುಗು ಮತ್ತು ಓರಿಯಾ ಚಿತ್ರಗಳಲ್ಲೂ ನಟಿಸಿದ್ದಾರೆ. ಜೊತೆಗೆ ಬಂಗಾಳಿ ಭಾಷೆಯಲ್ಲಿ ‘ಕಿ ಕೋರ್ ಬೋಝಭೋ ತೊಮಾಕೆ’ ಎಂಬ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಛಾಯಾ ಕೇವಲ ನಟಿಯಷ್ಟೇ ಅಲ್ಲ, ಅದ್ಭುತ ಡ್ಯಾನ್ಸರ್ ಕೂಡ ಆಗಿದ್ದಾರೆ. ಅವರ ನೃತ್ಯಗಳು ಸಿಕ್ಕಾಪಟ್ಟೆ ಫೇಮಸ್ ಆಗಿವೆ.