Andhra Bus Accident: ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್, 9 ಪ್ರಯಾಣಿಕರು ಸಾವು, ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು

Andhra Bus Accident: ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್, 9 ಪ್ರಯಾಣಿಕರು ಸಾವು, ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು


ಅಲ್ಲೂರು, ಡಿಸೆಂಬರ್ 12: ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿನಲ್ಲಿ ನಡೆದಿದೆ. 12ಕ್ಕೂ ಅಧಿಕ ಮಂದಿ ಗಂಭೀರವಾಗಿದ್ದಾರೆ. ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ , ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಟ್ಟೆಯ ರಾಶಿಯಂತೆ ಬಿದ್ದಿವೆ. ಬೆಳಗಿನ ಜಾವ 5.30ರ ಸಮಯದಲ್ಲಿ, ತುಳಸಿಪಕಲು ಗ್ರಾಮದ ಬಳಿ ನಡೆದಿದೆ. ಜಿಲ್ಲಾಧಿಕಾರಿಗಳ ಪ್ರಕಾರ, ಬಸ್ಸಿನಲ್ಲಿ 35 ಪ್ರಯಾಣಿಕರು, ಇಬ್ಬರು ಚಾಲಕರು ಮತ್ತು ಒಬ್ಬ ಕ್ಲೀನರ್ ಇದ್ದಾರೆ. ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ, ಏಳು ಮಂದಿಯನ್ನು ಸ್ಥಳದಿಂದ 15 ಕಿ.ಮೀ ದೂರದಲ್ಲಿರುವ ಸಿಎಚ್‌ಸಿ ಚಿಂತೂರಿಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಮಾಹಿತಿ ಶೀಘ್ರ ಅಪ್ಡೇಟ್ ಆಗಲಿದೆ



Source link

Leave a Reply

Your email address will not be published. Required fields are marked *