
ಬೆಂಗಳೂರು, ಏಪ್ರಿಲ್ 02: ವೇಗವಾಗಿ ಬಂದ ಆಂಧ್ರ ಸಾರಿಗೆ ಬಸ್ (ಬಸ್) ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನ (ಬೆಂಗಳೂರು) ಶಿವಾನಂದ ಸರ್ಕಲ್ ಬಳಿ ಇಂದು ಮುಂಜಾನೆ ನಡೆದಿದೆ. ಅಧೋನಿಯಿಂದ ಅನಂತಪುರದ ಮೂಲಕ ಬೆಂಗಳೂರಿಗೆ ಬರ್ತಿದ್ದ ಬಸ್ ಡಿವೈಡರ್ಗೆ ಡಿಕ್ಕಿಯಾದ ರಭಸಕ್ಕೆ ಮುಂಭಾಗದ ಚಕ್ರ ಮತ್ತು ಇಂಜಿನ್ ಕಿತ್ತು ಬಂದಿದೆ. ಬಸ್ನಲ್ಲಿರುವ ಪ್ರಯಾಣಿಕರೆಲ್ಲವೂ ಸುರಕ್ಷಿತವಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಹೈಗ್ರೌಂಡ್ಸ್ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.