Headlines

ಬೆಂಗಳೂರಿನ ರಿಯಲ್ ಎಸ್ಟೇಟ್ ಏಜೆಂಟ್ ಕಿಡ್ನ್ಯಾಪ್! ಪೊಲೀಸರ 7 ವಿಶೇಷ ತಂಡಗಳಿಂದ ಆರೋಪಿಗಳಿಗೆ ಬಲೆ

ಬೆಂಗಳೂರಿನ ರಿಯಲ್ ಎಸ್ಟೇಟ್ ಏಜೆಂಟ್ ಕಿಡ್ನ್ಯಾಪ್! ಪೊಲೀಸರ 7 ವಿಶೇಷ ತಂಡಗಳಿಂದ ಆರೋಪಿಗಳಿಗೆ ಬಲೆ


ಬೆಂಗಳೂರಿನ ರಿಯಲ್ ಎಸ್ಟೇಟ್ ಏಜೆಂಟ್ ಕಿಡ್ನ್ಯಾಪ್! ಪೊಲೀಸರ 7 ವಿಶೇಷ ತಂಡಗಳಿಂದ ಆರೋಪಿಗಳಿಗೆ ಬಲೆ

ಆನೇಕಲ್, ಮಾರ್ಚ್ 09: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಕರ್ಪೂರು ಗೇಟ್ ಬಳಿ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಕಿಡ್ನ್ಯಾಪ್ (ಅಪಹರಣ) ಆಗಿದ್ದು, ಪ್ರಕರಣ ಸಂಬಂಧ ವಿಶೇಷ ತಂಡಗಳನ್ನು ರಚಿಸಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಹೊನ್ನಕಳಸಾಪುರ ಗ್ರಾಮದ ನಿವಾಸಿ ಗೋಪಾಲ್ ಅಲಿಯಾಸ್ ಗೋಪಿ ಎಂಬ ರಿಯಲ್ ಎಸ್ಟೇಟ್ ಏಜೆಂಟ್ ಅವರನ್ನು ಮಾರ್ಚ್ 8 ರಂದು ಸಂಜೆ 7.30 ರ ಸುಮಾರಿಗೆ ಕಿಡ್ನ್ಯಾಪ್ ಮಾಡಲಾಗಿದೆ.

ಗೋಪಾಲ್ ಕಾರಿಗೆ ಡಿಕ್ಕಿ ಹೊಡೆದ ಕಿಡಿಗೇಡಿಗಳು

ಗೋಪಾಲ್ ರಿಯಲ್ ಎಸ್ಟೇಟ್ ಮತ್ತು ಹಣಕಾಸು ವ್ಯವಹಾರ ನಡೆಸುತ್ತಿದ್ದರು. ಕರ್ಪೂರು ಗೇಟ್ ಬಳಿ ಗೋಪಾಲ್ ಹಾಗೂ ಸತೀಶ್ ಇದ್ದ ಕಾರಿಗೆ ವಾಹನದಿಂದ ಡಿಕ್ಕಿ ಹೊಡೆದ ಕಿಡಿಗೇಡಿಗಳು ಸ್ಪ್ರೇ ಹಾಕಿ ದಾಳಿ ನಡೆಸಿ ಅವರನ್ನು ಅಪಹರಿಸಿ ಸ್ಥಳೀಯ ಕುಟುಂಬಸ್ಥರು ಆರೋಪಿಗಳಾಗಿದ್ದಾರೆ.

ಕುಟುಂಬಸ್ಥರ ಶಂಕೆ ಅರ್ಜಿ ಜಿಗಣಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೋಹನ್ ಬಾಬು, ಹರೀಶ್ ಹಾಗೂ ಕಿರಣ್ ಎಂಬುವವರನ್ನು ಗೋಪಾಲ್ ಪತ್ನಿಯ ಆರೋಪದ ಮೇಲೆ ಪೊಲೀಸರು ಕಸ್ಟಡಿಗೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಅಪಹರಣಗೊಂಡ ಗೋಪಾಲ್ ಪತ್ತೆಗಾಗಿ ಆನೇಕಲ್ ಉಪವಿಭಾಗದ ಡಿಎಸ್ಪಿ ಮೋಹನ್ ಕುಮಾರ್ ನೇತೃತ್ವದಲ್ಲಿ ಇಂದು (ಮಾ.09) ಬೆಳಗಿನ ಜಾವ 9 ಇನ್ಸ್‌ಪೆಕ್ಟರ್‌ಗಳ ಸಹಭಾಗಿತ್ವದಲ್ಲಿ 7 ವಿಶೇಷ ತಂಡಗಳನ್ನು ರಚಿಸಲಾಗಿದೆ. ತಂಡವು ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ಇದನ್ನೂ ಓದಿ ರಾಜ್ಯದಲ್ಲಿ ಮೂರು ಪ್ರತ್ಯೇಕ ರಸ್ತೆ ಅಪಘಾತಗಳು; ವ್ಯಕ್ತಿ ಸಾವು, ಮೂವರಿಗೆ ಗಂಭೀರ ಗಾಯ

ಇಂದು ಬೆಳಗ್ಗೆ 7 ವಿಶೇಷ ತಂಡಗಳ ರಚನೆ

ಘಟನೆ ಬೆಂಗಳೂರು ಗ್ರಾಮಾಂತರ ಎಸ್‌ಪಿ ಚಂದ್ರಕಾಂತ್ ಅವರು ಆನೇಕಲ್ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಎಸ್‌ಪಿ ವೆಂಕಟೇಶ್ ಪ್ರಸನ್ನ ಅವರು ಸ್ಥಳದಲ್ಲೇ ಮೊಕ್ಕಾಂ ಹೂಡಿ ತನಿಖೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಅಪಹರಣಗೊಂಡ ಗೋಪಾಲರನ್ನು ಶೀಘ್ರ ಪತ್ತೆ ಹಚ್ಚಲು ಎಲ್ಲಾ ದಿಕ್ಕುಗಳಲ್ಲಿ ತನಿಖೆ ನಡೆಯುತ್ತಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *