ಬೆಂಗಳೂರು, ಫೆಬ್ರವರಿ 23: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಕೇಸ್ ನಲ್ಲಿ ತೀವ್ರ ಹೋರಾಟ ನಡೆಸುತ್ತಿದ್ದ ಹೋರಾಟ ಸ್ನೇಹಮಯಿ ಕೃಷ್ಣ ಅವರಿಗೆ 2 ದಿನ ಹಿಂದಷ್ಟೇ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ನಂತರ ಬಿಡುಗಡೆ ಮಾಡಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್ ಅವರ ಆಡಿಯೋ ಬಹಿರಂಗ ವಿಚಾರವಾಗಿ ಈ ಕ್ರಮ ಜಾರಿಯಲ್ಲಿದೆ. ಇದೀಗ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಪವಿತ್ರಾ ಎಂಬ ಮಹಿಳೆ ನೀಡಿದ ದೂರಿನ ಜೊತೆಗೆ ಹೊಸ ಎಫ್‌ಐಆರ್ ದಾಖಲಿಸಲಾಗಿದೆ.
ಪವಿತ್ರಾ ಅವರ ಪತಿ ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣದ ಮರುತನಿಖೆಗೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ, ಮೈಯ್ಯರಪ್ಪ ವಿರುದ್ಧ ನೀಡಿದ್ದನ್ನು ಹಿಂಪಡೆಯುವಂತೆ ಪವಿತ್ರಾ ಅವರಿಗೆ ತಾಕೀತು ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಜೊತೆಗೆ, ಸ್ನೇಹಮಯಿ ಕೃಷ್ಣ ಅವರು 2025ರ ಡಿಸೆಂಬರ್ 5 ರಂದು ಪವಿತ್ರಾ ಅವರ ಮನೆಗೆ ಪತ್ರ ಬರೆದಿದ್ದರು. ಈ ಪತ್ರದ ಮೂಲಕ ಒತ್ತಡ ಹೇರುವುದರಿಂದ ತಮ್ಮ ನೆಮ್ಮದಿ ಹಾಳಾಗಿದೆ ಎಂದು ಪವಿತ್ರಾ ದೂರು ನೀಡಲಾಗಿದೆ.
ಈ ಹಿಂದೆ ಬಸವೇಶ್ವರ ಪೊಲೀಸರು ಈ ಸಂಬಂಧ ಎನ್‌ಸಿಆರ್ ದಾಖಲಿಸಿದ್ದರು. ಇದೀಗ ನ್ಯಾಯಾಲಯದ ಅನುಮತಿಯ ಸ್ನೇಹಮಯಿ ಕೃಷ್ಣ ಮತ್ತು ಮೈಲಾರಪ್ಪ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪವಿತ್ರಾ ನೀಡಿದ ದೂರಿನ ಎರಡು ತಿಂಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ