Headlines

ವಿವಾದದ ಬೆನ್ನಲ್ಲೇ ಭೂಕಾಂತ್​​ಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ

ವಿವಾದದ ಬೆನ್ನಲ್ಲೇ ಭೂಕಾಂತ್​​ಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ


ಭೂಕಾಂತ್ ಅವರಿಗೆ ನೀಡಲಾಗಿದ್ದ ಸಚಿವ ಸಂಪುಟದ ಸ್ಥಾನಮಾನ ಹಿಂಪಡೆದ ಸರ್ಕಾರಚಿತ್ರ ಕ್ರೆಡಿಟ್ ಮೂಲ: ಟಿವಿ9 ಕನ್ನಡ

ಬೆಂಗಳೂರು, ಫೆಬ್ರವರಿ 11: ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷ ಸ್ಥಾನ ಒಟ್ಟು 54 ಮಂದಿಗೆ ಸಚಿವಮಾನ ನೀಡಿ ರಾಜ್ಯ ಸರ್ಕಾರ ವಿಧಿಸಿತ್ತು. ಆ ಮೇಲಿನ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ನಿಯಮಿತ ಅಧ್ಯಕ್ಷರಾದ ಭೂಕಾಂತ್ ಅವರಿಗೂ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದರ ವಿರುದ್ಧ ಕಾಂಗ್ರೆಸ್ ಪಾಳಯದಿಂದ ಭಾರೀ ಆಕ್ಷೇಪ ಕೇಳಿಬಂದಿತ್ತು. ಬಿಜೆಪಿ ನಾಯಕನಿಗೆ ಕಾಂಗ್ರೆಸ್ ಸರ್ಕಾರದಿಂದ ಈ ಸ್ಥಾನಮಾನ ನೀಡಿದ್ದು ಎಷ್ಟು ಸರಿ ಎಂಬ ವಿರೋಧ ಕೇಳಿಬಂದ ಬೆನ್ನಲ್ಲೇ ಭೂಕಾಂತ್ ಅವರಿಗೆ ಸಚಿವ ಸಂಪುಟದ ಸ್ಥಾನಮಾನವನ್ನು ಸರ್ಕಾರವೀಗ ಹಿಂಪಡೆದಿದೆ. ಕಾರ್ಯಕರ್ತರ ಅಸಮಾಧಾನದ ಬೆನ್ನಲ್ಲೇ ಈ ತೀರ್ಮಾನ ಮಾಡಲಾಗಿದೆ.

ಭೂಕಾಂತ್ ಅವರ ಪತ್ನಿ ಕೂಡ ಬಿಜೆಪಿಯಿಂದ ಜಿಲ್ಲಾ ಪಂಚಾಯತಿ ಸದಸ್ಯೆಯಾಗಿದ್ದರು. ಹೀಗಿರುವಾಗ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿರುವ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇಲ್ಲಿಯವರೆಗೂ ಪ್ರಮುಖ ನಿಗಮಗಳ ಅಧ್ಯಕ್ಷರಾಗಿರುವ ಶಾಸಕರಿಗಷ್ಟೇ ಈ ಸ್ಥಾನಮಾನವನ್ನು ಎಲ್ಲ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಿಗೂ ಅನ್ವಯಿಸುವಂತೆ ವಿಸ್ತರಿಸಿ ಸರ್ಕಾರ ನಿಗದಿಪಡಿಸಿದೆ. ಆದರೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಮುಖಂಡನಿಗೆ ಈ ಸ್ಥಾನಮಾನ ನೀಡಿದ್ದು ಯಾಕೆ ಎಂದು ಪ್ರಶ್ನಿಸಲಾಗಿದೆ.

ಇದನ್ನೂ ಓದಿ: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಬಿಜೆಪಿ ಮುಖಂಡನಿಗೆ ರಾಜ್ಯ ಸಚಿವ ಸ್ಥಾನಮಾನ!; ‘ಕೈ’ ಕಾರ್ಯಕರ್ತರು ಕಿಡಿ

ಕಿಡಿ ಕಾರಿದ್ದ ಡಿ.ಕೆ. ಸುರೇಶ್

ಕಾರ್ಯಕರ್ತರು ಸರ್ಕಾರದ ವಿರುದ್ಧ ಮಾಜಿ ಸಂಸದ, ಡಿಸಿಎಂ ಡಿಕೆಶಿ ಸಹೋದರ ಡಿ.ಕೆ. ಸುರೇಶ್ ಕೂಡ ಲೇವಡಿ ಮಾಡಿದ್ರು. ನಮ್ಮದು ಸರ್ವಧರ್ಮ ಪಾಲಿಸಿ, ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲರೂ ನಮ್ಮ ಪಕ್ಷದಲ್ಲೇ ಇದ್ದಾರೆ. ಹೀಗಾಗಿ ಎಲ್ಲ ವಿಚಾರದಲ್ಲೂ ಹೊರಗಿನಿಂದ ಬಂದ ಅತಿಥಿಗಳಿಗೆ ಮೊದಲ ಆದ್ಯತೆ ನೀಡಿ, ಕಾಂಗ್ರೆಸ್ ಕಾರ್ಯಕರ್ತರಿಗೆ ಎರಡನೇ ಆದ್ಯತೆ ನೀಡುತ್ತೇವೆ ಎಂದು ಪರೋಕ್ಷವಾಗಿ ತಿವಿದಿದ್ದರು.

ವರದಿ: ಈರಣ್ಣ ಬಸವ, ಟಿವಿ9 ಕನ್ನಡ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 3:01 pm, ಬುಧವಾರ, 11 ಫೆಬ್ರವರಿ 26



Source link

Leave a Reply

Your email address will not be published. Required fields are marked *