ಡಿಕೆಶಿ ಎಷ್ಟೇ ಯತ್ನಿಸಿದರೂ ನಾನು ಸಿದ್ದು ಪರ – ನನ್ನ ನಿಲುವಿನಲ್ಲಿ ಯಾವ ಬದಲಾವಣೆ ಇಲ್ಲ: ರಾಜಣ್ಣ | No Matter How Much Dk Shivakumar Tries I Am With Siddaramaiah Rajanna

‘ನಾನು ಈಗಲೂ ಸಿದ್ದರಾಮಯ್ಯ ಅವರ ಪರ. ಡಿ.ಕೆ.ಶಿವಕುಮಾರ್‌ ಅವರು ಎಷ್ಟೇ ಪ್ರಯತ್ನ ಮಾಡಿದರೂ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಮಾಜಿ ಸಚಿವ ಕೆ.ಎನ್‌.ರಾಜಣ್ಣ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು : ‘ನಾನು ಈಗಲೂ ಸಿದ್ದರಾಮಯ್ಯ ಅವರ ಪರ. ಡಿ.ಕೆ.ಶಿವಕುಮಾರ್‌ ಅವರು ಎಷ್ಟೇ ಪ್ರಯತ್ನ ಮಾಡಿದರೂ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಮಾಜಿ ಸಚಿವ ಕೆ.ಎನ್‌.ರಾಜಣ್ಣ ಸ್ಪಷ್ಟಪಡಿಸಿದ್ದಾರೆ.

‘ಶಿವಕುಮಾರ್‌ ಅವರು ನನ್ನನ್ನು ಹುಡುಕಿಕೊಂಡು ಬಂದಿರಲಿಲ್ಲ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಭೇಟಿ ಕುರಿತು ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಶಿವಕುಮಾರ್‌ ಅವರು ನನ್ನನ್ನು ಹುಡುಕಿಕೊಂಡು ಬಂದಿರಲಿಲ್ಲ. ಅವರು ಪಕ್ಷದ ಅಧ್ಯಕ್ಷರು. ಅವರು ಯಾರನ್ನಾದರೂ ಕರೆದು ಮಾತನಾಡಬಹುದು, ಚರ್ಚಿಸಬಹುದು. ಅದರಲ್ಲಿ ಯಾವುದೇ ರಾಜಕಾರಣ ಇಲ್ಲ. ಪಕ್ಷ ಸಂಘಟನೆ ಬಗ್ಗೆ ಹೇಳಿದರು. ಆಯ್ತಪ್ಪಾ ಮಾಡೋಣ ಎಂದಿದ್ದೇನೆ ಅಷ್ಟೇ’ ಎಂದು ಹೇಳಿದರು.

ಈಗಲೂ ನಾನು ಸಿದ್ದರಾಮಯ್ಯ ಅವರ ಪರ

ಮುಖ್ಯಮಂತ್ರಿ ಹಾದಿ ಸುಗಮ ಮಾಡಿಕೊಳ್ಳುವ ಪ್ರಯತ್ನವೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾಜಣ್ಣ, ಈಗಲೂ ನಾನು ಸಿದ್ದರಾಮಯ್ಯ ಅವರ ಪರ. ಅವರು (ಡಿ.ಕೆ. ಶಿವಕುಮಾರ್) ಏನೇ ಪ್ರಯತ್ನ ಮಾಡಿದರೂ ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ. ನಾನು ಈ ಕುರಿತು ಹಿಂದೆ ನೀಡಿರುವ ಎಲ್ಲಾ ಹೇಳಿಕೆಗಳಿಗೂ ಈಗಲೂ ಬದ್ಧನಿದ್ದೇನೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದರು.

ಇನ್ನು ಮುಖ್ಯಮಂತ್ರಿ ಗಾದಿ ವಿಚಾರದಲ್ಲಿ ಹೈಕಮಾಂಡ್‌ ನಿರ್ಧಾರವೇ ಅಂತಿಮ. ಸಿದ್ದರಾಮಯ್ಯ ಅವರು ಇದನ್ನು ಪದೇ ಪದೇ ಹೇಳುತ್ತಿದ್ದಾರೆ. ಹೈಕಮಾಂಡ್‌ ಹೇಳಿದಂತೆ ನಾನು ಕೇಳುತ್ತೇನೆ ಎಂದಿದ್ದಾರೆ. ಹೀಗಾಗಿ ಇದರಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ರಾಜಣ್ಣ ಹೇಳಿದರು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಡಿನ್ನರ್‌ ಸಭೆ ನಡೆಸಿದ ಬಗ್ಗೆ ಪ್ರತಿಕ್ರಿಯಿಸಿ, ಕೇವಲ ಸತೀಶ್ ಜಾರಕಿಹೊಳಿ ಅವರು ಮಾತ್ರವಲ್ಲ, ಬೆಳಗಾವಿಯಲ್ಲಿ ಎಲ್ಲರೂ ಊಟಕ್ಕೆ ಕರೆದಿದ್ದಾರೆ, ಹೋಗಿದ್ದಾರೆ. ಅದರಲ್ಲಿ ರಾಜಕೀಯ ಏನಿಲ್ಲ. ಸೌಜನ್ಯದ ಭೇಟಿಯಷ್ಟೇ ಎಂದರು.

Source link

Leave a Reply

Your email address will not be published. Required fields are marked *