Headlines

ಕೇರಳ ಕ್ರೀಡಾ ಹಾಸ್ಟೆಲ್‌ನಲ್ಲಿ ಇಬ್ಬರು ಹುಡುಗಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ | Two Female Athletes Found Dead In Kollam Sports Authority Of India Hostel

ಕೇರಳ ಕ್ರೀಡಾ ಹಾಸ್ಟೆಲ್‌ನಲ್ಲಿ ಇಬ್ಬರು ಹುಡುಗಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ | Two Female Athletes Found Dead In Kollam Sports Authority Of India Hostel



ಕೇರಳ ಕ್ರೀಡಾ ಹಾಸ್ಟೆಲ್‌ನಲ್ಲಿ ಇಬ್ಬರು ಹುಡುಗಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ | Two Female Athletes Found Dead In Kollam Sports Authority Of India Hostel

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರದ (SAI) ಹಾಸ್ಟೆಲ್‌ನಲ್ಲಿ ಇಬ್ಬರು ಯುವ ಕ್ರೀಡಾಪಟುಗಳಾದ ಸಾಂಡ್ರಾ ಮತ್ತು ವೈಷ್ಣವಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಘಟನೆಯು ಅನುಮಾನಾಸ್ಪದವಾಗಿದ್ದು, ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ.

ಕೇರಳದ ಕೊಲ್ಲಂನಲ್ಲಿರುವ ಸ್ಪೋರ್ಟ್ ಹಾಸ್ಟೆಲ್ಲೊಂದರಲ್ಲಿ ಇಬ್ಬರು ಹುಡುಗಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಅವರ ಸಾವಿನ ಬಗ್ಗೆ ಈಗ ಅನುಮಾನ ಮೂಡಿದೆ. ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರದ (SAI) ಹಾಸ್ಟೆಲ್‌ನಲ್ಲಿ ಈ ಇಬ್ಬರು ಹುಡುಗಿಯರು ವಾಸಿಸುತ್ತಿದ್ದರು. ಆದರೆ ಈ ಇಬ್ಬರು ಹುಡುಗಿಯರು ಗುರುವಾರ ಬೆಳಗ್ಗೆ ಕೋಣೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವಿದ್ಯಾರ್ಥಿನಿಯರನ್ನು ಕೋಝಿಕ್ಕೋಡ್ ಜಿಲ್ಲೆಯ 17 ವರ್ಷದ ಸಾಂಡ್ರಾ ಹಾಗೂ ತಿರುವನಂತಪುರಂ ಜಿಲ್ಲೆಯ 15 ವರ್ಷದ ವೈಷ್ಣವಿ ಎಂದು ಗುರುತಿಸಲಾಗಿದೆ. ಮೃತ ಸಾಂಡ್ರಾ ಅಥ್ಲೆಟಿಕ್ಸ್ ತರಬೇತಿ ಪಡೆಯುತ್ತಿದ್ದು, ಪ್ಲಸ್‌ ಟು(ದ್ವಿತೀಯ ಪಿಯುಸಿ) ವಿದ್ಯಾರ್ಥಿನಿಯಾಗಿದ್ದಾರೆ. ಹಾಗೆಯೇ ಶವವಾಗಿ ಪತ್ತೆಯಾಗಿರುವ ಮತ್ತೊರ್ವ ವಿದ್ಯಾರ್ಥಿನಿ ವೈಷ್ಣವಿ 10 ನೇ ತರಗತಿಯಲ್ಲಿ ಓದುತ್ತಿದ್ದು, ಕಬಡ್ಡಿ ಆಟಗಾರ್ತಿಯಾಗಿದ್ದರು.

ದಿನವೂ ಬೆಳಗಿನ ಜಾವ ನಡೆಯುವ ಕ್ರೀಡಾ ತರಬೇತಿ ಸಮಯಕ್ಕೆ ಹುಡುಗಿಯರು ಅಲ್ಲಿ ಬಾರದೇ ಹೋದಾಗ ಅಧಿಕಾರಿಗಳು ಹೋಗಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಘಟನೆ ಬೆಳಕಿಗೆ ಬಂದಿದೆ. ಅವರು ವಾಸವಿದ್ದ ಕೋಣೆಯ ಬಾಗಿಲನ್ನು ಪದೇ ಪದೇ ತಟ್ಟಿದರೂ ಉತ್ತರ ಬಾರದೇ ಹೋದಾಗ ಹಾಸ್ಟೆಲ್ ಅಧಿಕಾರಿಗಳು ಬಾಗಿಲು ಒಡೆದು ನೋಡಿದಾಗ ಇಬ್ಬರೂ ಹುಡುಗಿಯರು ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ.

ಮೃತ ವೈಷ್ಣವಿ ಬೇರ ಕೋಣೆಯಲ್ಲಿ ವಾಸಿಸುತ್ತಿದ್ದರು ಆದರೆ ಬುಧವಾರ ರಾತ್ರಿ ಘಟನೆ ನಡೆದ ದಿನ ಅವರು ಸಾಂಡ್ರಾ ಅವರ ಕೋಣೆಯಲ್ಲಿ ಉಳಿದಿದ್ದರು. ಬೆಳಗ್ಗೆ ಇತರ ಹಾಸ್ಟೆಲ್ ವಾಸಿಗಳು ಇಬ್ಬರನ್ನೂ ನೋಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೊಲ್ಲಂ ಪೂರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಾವಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ ಮತ್ತು ಕೋಣೆಯಲ್ಲಿ ಯಾವುದೇ ಟಿಪ್ಪಣಿ ಕಂಡು ಬಂದಿಲ್ಲ ಎಂದು ಎಎಚ್‌ಒ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಹ ತರಬೇತಿದಾರರು, ತರಬೇತುದಾರರು ಮತ್ತು ಕುಟುಂಬ ಸದಸ್ಯರಿಂದ ಹೇಳಿಕೆಗಳನ್ನು ದಾಖಲಿಸಲಾಗುವುದು. ಮರಣೋತ್ತರ ಪರೀಕ್ಷೆಗಳ ನಂತರ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ವಿಶೇಷ ಮನವಿ:

ಆತ್ಮ8ತ್ಯೆ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಿ… ಆತ್ಮ8ತ್ಯೆ ಮಾಡಿಕೊಂಡ ನಂತ್ರ ಮುಂದೇನು? ಸಮಸ್ಯೆಗೆ ಪರಿಹಾರ ಸಿಗುತ್ತಾ? ಇಲ್ಲ, ಕಷ್ಟಗಳಿದ್ದರೆ ಆತ್ಮೀಯರಿಗೆ ಹೇಳಿಕೊಳ್ಳಿ, ಏನೇ ಕಷ್ಟಗಳಿದ್ದರೂ ಆ ಸಮಯ ಕಳೆದು ಹೋಗುತ್ತದೆ ಎಂಬುದು ನೆನಪಿರಲಿ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ ‘ಆತ್ಮ8ತ್ಯೆ’ ಯೋಚನೆಗಳನ್ನು ಹೊಂದಿದ್ದರೆ, ನಿಮಗಾಗಿ ನೆರವು ಲಭ್ಯವಿದೆ. ಜಗತ್ತಿನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವವರು ನೀವು ಒಬ್ಬರು ಮಾತ್ರವಲ್ಲ ಎಂಬುದನ್ನು ದಯವಿಟ್ಟು ತಿಳಿದುಕೊಳ್ಳಿ. ಕೆಲವೊಮ್ಮೆ ಜೀವನ ಬಹಳ ಬೇಡವೆಂದೇ ಅನಿಸುತ್ತಿರಬಹುದು, ಆದರೆ ನೆರವು ಯಾವಾಗಲೂ ಲಭ್ಯವಿರುತ್ತದೆ. ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ತಮ್ಮವರ ಅಥ್ವಾ ಯಾರಾದರ ಜೊತೆ ಮಾತನಾಡುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಖಂಡಿತಾ ಸಿಗುತ್ತೆ. ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಲು ಅಥವಾ ಸಹಾಯವಾಣಿಗೆ ಕರೆ ಮಾಡಿ:

Sahai Helpline – 080 2549 7777



Source link

Leave a Reply

Your email address will not be published. Required fields are marked *