ಕಾರವಾರ: ಉಂಡ‌ ಮನೆಗೆ ದ್ರೋಹ; ಮನೆ ಕೆಲಸದವನಿಂದಲೇ ಲಕ್ಷಾಂತರ ರೂಪಾಯಿ ಕದ್ದವನ ಬಂಧನ | Servant Arrested For Stealing Gold Cash Worth Rs16 Lakh From Owner House Sirsi

ಕಾರವಾರ: ಉಂಡ‌ ಮನೆಗೆ ದ್ರೋಹ; ಮನೆ ಕೆಲಸದವನಿಂದಲೇ ಲಕ್ಷಾಂತರ ರೂಪಾಯಿ ಕದ್ದವನ ಬಂಧನ | Servant Arrested For Stealing Gold Cash Worth Rs16 Lakh From Owner House Sirsi



ಕಾರವಾರ: ಉಂಡ‌ ಮನೆಗೆ ದ್ರೋಹ; ಮನೆ ಕೆಲಸದವನಿಂದಲೇ ಲಕ್ಷಾಂತರ ರೂಪಾಯಿ ಕದ್ದವನ ಬಂಧನ | Servant Arrested For Stealing Gold Cash Worth Rs16 Lakh From Owner House Sirsi

ಶಿರಸಿಯಲ್ಲಿ, ತನ್ನ ಮಾಲೀಕರ ಮನೆಯಿಂದಲೇ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ನಗದು ಕದ್ದಿದ್ದ ಮನೆಗೆಲಸದವನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ನಕಲಿ ಕೀ ಬಳಸಿ, ಮನೆಯವರು ಗೋವಾಕ್ಕೆ ತೆರಳಿದ್ದಾಗ ಈ ಕೃತ್ಯ ಎಸಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆತನನ್ನು ಪತ್ತೆಹಚ್ಚಲಾಗಿದೆ.

ಕಾರವಾರ, ಉತ್ತರಕನ್ನಡ (ಡಿ.12): ತಾನು ಕೆಲಸ ಮಾಡುತ್ತಿದ್ದ ಮಾಲೀಕರ ಮನೆಯಿಂದಲೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಶಿರಸಿ ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ಆರೆಂಟು ತಿಂಗಳುಗಳಿಂದ ಶಾಂತಾರಾಮ ಕಿಣಿ ಎಂಬುವವರ ಮನೆಯಲ್ಲಿ ಕೆಲಸಕ್ಕಿದ್ದ ಶಿರಸಿ, ರಾಮನಬೈಲು ನಿವಾಸಿ ಮಹೇಶ್ ಪರಸಪ್ಪ ಭೋವಿ (32) ಎಂಬಾತನೇ ಬಂಧಿತ ಆರೋಪಿ.

ನಂಬಿ ಕೆಲಸ ಕೊಟ್ಟ ಮನೆಗೇ ದ್ರೋಹ

ಶಿರಸಿ ಮಾರಿಕಾಂಬಾ ನಗರದಲ್ಲಿರುವ ಶಾಂತಾರಾಮ ಕಿಣಿ ಅವರ ಮನೆಯಲ್ಲಿ ಈ ಕಳ್ಳತನ ಕೃತ್ಯ ನಡೆದಿತ್ತು. ನಂಬಿಕೆ ಇಟ್ಟು ಕೆಲಸಕ್ಕೆ ಇಟ್ಟುಕೊಂಡಿದ್ದ ಮನೆ ಮಾಲೀಕ. ಆದರೆ ಆರೋಪಿ ಮಹೇಶ್, ಮನೆಯ ಒಂದು ಕೀಯನ್ನು ಕದ್ದು ಅದರ ನಕಲಿ ಕೀ (duplicate key) ಮಾಡಿಸಿಕೊಂಡು ಕಳ್ಳತನಕ್ಕೆ ಸಂಚು ರೂಪಿಸಿದ್ದ. ಕಳೆದ ಭಾನುವಾರ ಶಾಂತಾರಾಮ ಕಿಣಿ ಅವರ ಕುಟುಂಬ ಗೋವಾಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವನ್ನು ಬಳಸಿಕೊಂಡು ಆರೋಪಿ ಮಹೇಶ್ ಕಳ್ಳತನ ಮಾಡಿದ್ದಾನೆ. ಮನೆಯಲ್ಲಿದ್ದ ಸುಮಾರು 16 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 90 ಸಾವಿರ ರೂಪಾಯಿ ನಗದು ಕದ್ದು ಪರಾರಿಯಾಗಿದ್ದನು.

ಸಿಸಿಟಿವಿ ಆಧರಿಸಿ ಆರೋಪಿ ಸೆರೆ

ಘಟನೆ ನಡೆದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಮನೆಯ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಮನೆ ಕೆಲಸದವನೇ ಕೃತ್ಯ ನಡೆಸಿರುವುದು ಗೊತ್ತಾಗಿದೆ.ಬಳಿಕ ಆರೋಪಿಯ ಚಲನವಲನಗಳ ಆಧಾರದ ಮೇಲೆ ಆರೋಪಿಯನ್ನ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಂಧಿತನಿಂದ 60 ಗ್ರಾಂ ಬಂಗಾರ ಹಾಗೂ 70 ಸಾವಿರ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಶಿರಸಿ ನಗರ ಠಾಣೆಯ ಪಿ.ಎಸ್.ಐ. ನಾರಾಯಣ ರಾಥೋಡ ಮತ್ತು ಸಿಬ್ಬಂದಿ ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣದ ಕುರಿತು ಪೊಲೀಸ್ ತನಿಖೆ ಮುಂದುವರಿದಿದೆ.



Source link

Leave a Reply

Your email address will not be published. Required fields are marked *