Mysuru Dasara 2025 ಉದ್ಘಾಟಿಸಲಿದ್ದಾರೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್; ಸಿಎಂ ಸಿದ್ದರಾಮಯ್ಯ! | Booker Winner Bhanu Mushtaq Inaugurate Mysuru Dasara 2025 Siddaramaiah Info Sat

2025ರ ಮೈಸೂರು ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಉದ್ಘಾಟಿಸಲಿದ್ದಾರೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ 11 ದಿನಗಳ ಕಾಲ ನಡೆಯಲಿರುವ ಈ ಮಹೋತ್ಸವದಲ್ಲಿ ಏರ್ ಶೋ ಸಹ ನಡೆಯಲಿದೆ.

ಬೆಂಗಳೂರು (ಆ.22): ಈ ಬಾರಿ ಮೈಸೂರು ದಸರಾ ಮಹೋತ್ಸವವನ್ನು (Mysuru Dasara 2025) ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿಯ ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತರನ್ನು ಆಹ್ವಾನಿಸಿರುವುದು ಸಂತಸ ತಂದಿದೆ ಎಂದು ತಿಳಿಸಿದರು. ‘ಹೃದಯ ದೀಪ’ ಎಂಬ ಕೃತಿಗೆ ಬೂಕರ್ ಪ್ರಶಸ್ತಿ ಲಭಿಸಿರುವುದು ಕರ್ನಾಟಕಕ್ಕೆ ಬಹಳ ಹೆಮ್ಮೆಯ ವಿಷಯವಾಗಿದೆ. ಬಾನು ಮುಷ್ತಾಕ್ ಅವರು ರೈತ ಮತ್ತು ಕನ್ನಡ ಚಳವಳಿಗಳ ಹಿನ್ನೆಲೆಯಿಂದ ಬಂದವರಾಗಿದ್ದು, ಅವರ ಸಾಧನೆಗೆ ಗೌರವ ಸಲ್ಲಿಸುವ ಸಲುವಾಗಿ ಅವರನ್ನು ಉದ್ಘಾಟನೆಗೆ ಆಹ್ವಾನಿಸಲಾಗಿದೆ ಎಂದು ಸಿಎಂ ವಿವರಿಸಿದರು. ದಸರಾ ಉದ್ಘಾಟನೆಗೆ ಒಬ್ಬ ಮಹಿಳಾ ಸಾಧಕಿಯನ್ನು ಆಹ್ವಾನಿಸಿರುವುದು ರಾಜ್ಯಕ್ಕೆ ಒಂದು ಗೌರವವಾಗಿದೆ ಎಂದು ಹೇಳಿದರು.

11 ದಿನಗಳ ದಸರಾ ಮಹೋತ್ಸವ:

ಈ ಬಾರಿ ದಸರಾ ಮಹೋತ್ಸವವು ಒಟ್ಟು 11 ದಿನಗಳ ಕಾಲ ನಡೆಯಲಿದ್ದು, ಸೆಪ್ಟೆಂಬರ್ 22ರಂದು ಆರಂಭಗೊಂಡು ಅಕ್ಟೋಬರ್ 2ರ ವಿಜಯ ದಶಮಿಯೊಂದಿಗೆ ಮುಕ್ತಾಯಗೊಳ್ಳಲಿದೆ. ಬಾನು ಮುಷ್ತಾಕ್ ಅವರಿಗೆ ಗೌರವಪೂರ್ವಕವಾಗಿ ಜಿಲ್ಲಾಡಳಿತದ ವತಿಯಿಂದ ಔಪಚಾರಿಕ ಆಹ್ವಾನ ನೀಡಲಾಗುವುದು. ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಏರ್ ಶೋ ನಡೆಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ಅನುಮತಿ ಪಡೆಯಲಾಗಿದೆ. ಏರ್ ಶೋಗೆ ಅನುಮತಿ ದೊರೆತಿದ್ದು, ರಾಜನಾಥ್ ಸಿಂಗ್ ಅವರಿಗೂ ದಸರಾಗೆ ಬರುವಂತೆ ಆಹ್ವಾನಿಸಲಾಗಿದೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು. ಈ ಬಾರಿ ಮೈಸೂರು ದಸರಾ ವಿಜೃಂಭಣೆಯಿಂದ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Source link

Leave a Reply

Your email address will not be published. Required fields are marked *