ಐಟಿ ದಾಳಿಗೆ ಬೆದರಿ ಗುಂಡು ಹಾರಿಸಿ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮ**ತ್ಯೆ ಯತ್ನ | Confident Group Chairman Cj Roy Attempts Self Harm Following It Raid Bengaluru

ಐಟಿ ದಾಳಿಗೆ ಬೆದರಿ ಗುಂಡು ಹಾರಿಸಿ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮ**ತ್ಯೆ ಯತ್ನ ಘಟನೆ ನಡೆದಿದೆ. ಬಿಗ್ ಬಾಸ್ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ನಗದು ಬಹುಮಾನ ನೀಡುತ್ತಿದ್ದ ಸಿಜೆ ರಾಯ್ ಪರಿಸ್ಥಿತಿ ಗಂಬೀರ.

ಬೆಂಗಳೂರು (ಜ.30) ಬೆಂಗಳೂರಿನ ಉದ್ಯಮಿ, ದೇಶ ವಿದೇಶಗಳಲ್ಲಿ ಕಾನ್ಫಿಡೆಂಟ್ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿರುವ ಉದ್ಯಮಿ ಸಿಜೆ ರಾಯ್ ಆತ್ಮ**ತ್ಯೆಗೆ ಯತ್ನಿಸಿದ್ದಾರೆ. ಕಾನ್ಫಿಡೆಂಟ್ ಗ್ರೂಪ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಐಟಿ ದಾಳಿಗೆ ಬೆದರಿದ ಉದ್ಯಮ ಸಿಜೆ ರಾಯ್, ತಮ್ಮಲ್ಲಿದ್ದ ರಿವಾಲ್ವರ್ ಮೂಲಕ ತಲೆಗೆ ಗುಂಡು ಹಾರಿಸಿಕೊಂಡು ಆತ್ಮ**ತ್ಯೆಗೆ ಯತ್ನಿಸಿದ್ದಾರೆ.

ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಲ್ಯಾಂಡ್ ಫರ್ಡ್ ರಸ್ತೆಯಲ್ಲಿ ಘಟನ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಸೆಜೆ ರಾಯ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂದು ಕಾನ್ಫಿಡೆಂಟ್ ಗ್ರೂಪ್ ಕಚೇರಿಗಳ ಮೇಲೆ ಐಟಿ ದಾಳಿ ನಡೆದಿತ್ತು. ಈ ದಾಳಿಗೆ ಬೆದರಿ ಈ ಪ್ರಯತ್ನ ಮಾಡದ್ದಾರೆ ಅನ್ನೋ ಅನುಮಾನಗಳು ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಅತೀ ದೊಡ್ಡ ಉದ್ಯಮ ಸಾಮ್ರಾಜ್ಯ ಕಟ್ಟಿದ ಸೆಜೆ ರಾಯ್, ದೇಶದ ಹಲವು ರಾಜ್ಯಗಲ್ಲಿ ರಿಯಲ್ ಎಸ್ಟೇಟ್ ಸೇರಿದಂತೆ ಹಲವು ಉದ್ಯಮ ನಡೆಸುತ್ತಿದ್ದಾರೆ. ದುಬೈ ಸೇರಿದಂತೆ ವಿದೇಶಗಳಲ್ಲೂ ಉದ್ಯಮ ನಡೆಸುತ್ತಿದ್ದಾರೆ. ಹಲವು ಸಾಮಾಜಿಕ ಕಾರ್ಯಗಳಲ್ಲೂ ಸಿಜೆ ರಾಯ್ ಗುರುತಿಸಿಕೊಂಡಿದ್ದಾರೆ. 

Source link

Leave a Reply

Your email address will not be published. Required fields are marked *