
ನವದೆಹಲಿ ಮತ್ತು ರಾಷ್ಟ್ರ ರಾಜಧಾನಿ ವಲಯದಲ್ಲಿ ಗುರುವಾರ ಬೆಳಿಗ್ಗೆ 4.1 ತೀವ್ರತೆಯ ಭೂಕಂಪ ಸಂಭವಿಸಿದೆ. ಕರ್ನಾಟಕ ಭವನ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭೂಕಂಪದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.
ನವದೆಹಲಿ (ಜು.10): ರಾಷ್ಟ್ರ ರಾಜಧಾನಿ ನವದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವಲಯದಲ್ಲಿ ಗುರುವಾರ ಬೆಳಗ್ಗೆ ಭೂಕಂಪದ ಅನುಭವ ಆಗಿದೆ. ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆ ದಾಖಲಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಕರ್ನಾಟಕ ಭವನದಲ್ಲೂ ಭೂಕಂಪನದ ಅನುಭವವಾಗಿದೆ ಎಂದು ತಿಳಿಸಿದ್ದಾರೆ. ದೆಹಲಿಯ ಪ್ರಖ್ಯಾತ ಲೂಟೆನ್ಸ್ ವಲಯದಲ್ಲೂ ಭೂಕಂಪದ ಅನುಭವಾಗಿದೆ ಎಂದು ಜನರು ತಿಳಿಸಿದ್ದಾರೆ. ಮನೆಗಳಲ್ಲಿ ಪಾತ್ರೆಗಳು, ಫ್ಯಾನ್ ಗಳು ಅಲ್ಲಾಡಿದ ದೃಶ್ಯಗಳು ವಿಡಿಯೋದಲ್ಲಿ ದಾಖಲಾಗಿದೆ. ಇನ್ನು ಬೆರಿ ಪ್ರದೇಶದಲ್ಲೂ ಭೂಮಿ ಅಲ್ಲಾಡಿದ ಅನುಭವ ಎದುರಿಸಿದ್ದೇವೆ ಎಂದು ಜನ ತಿಳಿಸಿದ್ದಾರೆ.