Karnataka Budget 2026–27: ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ | Karnataka Budget 2026 27 For The First Time Live Budget Streaming At All Bus Stations

Karnataka Budget 2026–27: ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ | Karnataka Budget 2026 27 For The First Time Live Budget Streaming At All Bus Stations



Karnataka Budget 2026–27: ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ | Karnataka Budget 2026 27 For The First Time Live Budget Streaming At All Bus Stations

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2026-27ನೇ ಸಾಲಿನ ರಾಜ್ಯ ಬಜೆಟ್ ಅನ್ನು ಇದೇ ಮೊದಲ ಬಾರಿಗೆ ರಾಜ್ಯದ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾರ್ಚ್ 6 ರಿಂದ 230 ಬಸ್ ನಿಲ್ದಾಣಗಳಲ್ಲಿನ ಎಲ್‌ಇಡಿ ಪರದೆಗಳ ವ್ಯವಸ್ಥೆ ಮಾಡಿದೆ.

ಬೆಂಗಳೂರು, (ಮಾ. 5) ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ರಂದು (ಶುಕ್ರವಾರ) ವಿಧಾನಸೌಧದಲ್ಲಿ ಮಂಡಿಸಲಿರುವ 2026–27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್ ನಿಲ್ದಾಣಗಳಲ್ಲಿರುವ ಎಲ್‌ಇಡಿ ಮತ್ತು ಟಿವಿ ಪರದೆಗಳ ಮೂಲಕ ಮೊತ್ತ ಮೊದಲ ಬಾರಿಗೆ ನೇರ ಪ್ರಸಾರ ಮಾಡುತ್ತಿದೆ.

ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸುತ್ತಿದ್ದಾರೆ. ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್, ಐಪಿಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್)ಯು ಬೆಂಗಳೂರು ಮೂಲದ ವೃತ್ತಿ ಮೀಡಿಯಾ ಸಲ್ಯೂಷನ್ಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಿರುವ ಡಿಜಿಟಲ್ ಡಿಸ್ಪ್ಲೇ (ಎಲ್‌ಇಡಿ) ಮತ್ತು ಟಿವಿ ಪರದೆಗಳ ಮೂಲಕ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ಮಾರ್ಚ್ 6 ರಂದು ಬೆಳಿಗ್ಗೆ 10.15 ಗಂಟೆಯಿಂದ ಪ್ರಸಾರ ಮಾಡಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ನಂತರ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯನ್ನೂ ಇದೇ ಪರದೆಗಳ ಮೂಲಕ ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ನೇರವಾಗಿ ಪ್ರಸಾರ ಮಾಡಲಾಗುತ್ತದೆ. ಇದರ ಮೂಲಕ ಸಾರ್ವಜನಿಕರು ಬಸ್ ನಿಲ್ದಾಣಗಳಲ್ಲಿಯೇ ಈ ಮಹತ್ವದ ಕಾರ್ಯಕ್ರಮವನ್ನು ವೀಕ್ಷಿಸುವ ಅವಕಾಶವನ್ನು ಪಡೆಯಲಿದ್ದಾರೆ.

ರಾಜ್ಯದಲ್ಲಿಯೇ ಮೊದಲ ಬಾರಿಗೆ ಬಸ್ ನಿಲ್ದಾಣಗಳ ಮೂಲಕ ಜನಸಾಮಾನ್ಯರಿಗೆ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ತಲುಪಿಸುವ ಪ್ರಯತ್ನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೈಗೊಂಡಿದೆ. ಸಾರ್ವಜನಿಕರು ಈ ನೇರ ಪ್ರಸಾರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಆಯುಕ್ತರು ಮನವಿ ಮಾಡಿದ್ದಾರೆ.



Source link

Leave a Reply

Your email address will not be published. Required fields are marked *