Headlines

ದ್ವಿತೀಯ ಪಿಯು ಪರೀಕ್ಷೆ ಬರೆಯೋ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ತೋರಿಸಿದ್ರೆ KSRTC ಮತ್ತು BMTCಯಲ್ಲಿ ಉಚಿತ ಪ್ರಯಾಣ | Puc Exam 2025 Free Bus Travel For Students From Feb 28 To March 17 By Ksrtc And Bmtc

ದ್ವಿತೀಯ ಪಿಯು ಪರೀಕ್ಷೆ ಬರೆಯೋ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ತೋರಿಸಿದ್ರೆ KSRTC ಮತ್ತು BMTCಯಲ್ಲಿ ಉಚಿತ ಪ್ರಯಾಣ | Puc Exam 2025 Free Bus Travel For Students From Feb 28 To March 17 By Ksrtc And Bmtc



ದ್ವಿತೀಯ ಪಿಯು ಪರೀಕ್ಷೆ ಬರೆಯೋ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ತೋರಿಸಿದ್ರೆ KSRTC ಮತ್ತು BMTCಯಲ್ಲಿ ಉಚಿತ ಪ್ರಯಾಣ | Puc Exam 2025 Free Bus Travel For Students From Feb 28 To March 17 By Ksrtc And Bmtc

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಹಿನ್ನೆಲೆಯಲ್ಲಿ, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಘೋಷಿಸಿವೆ. ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ, ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ  ಉಚಿತವಾಗಿ ಪ್ರಯಾಣಿಸಬಹುದು.

ತುಮಕೂರು/ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಮಹತ್ವದ ತೀರ್ಮಾನ ಕೈಗೊಂಡಿವೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿರುವ ಪಿಯುಸಿ ಪರೀಕ್ಷಾ ಅವಧಿಯಲ್ಲಿ, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಗಮದ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗುತ್ತಿದೆ.

ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತ ಬಸ್ ಸೇವೆ

ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪಿಯುಸಿ ಪರೀಕ್ಷಾ ಪ್ರವೇಶ ಪತ್ರ (Hall Ticket) ತೋರಿಸಿದಲ್ಲಿ, ನಿಗದಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಮತ್ತು ವಾಪಸ್ ಬರಲು ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಈ ಸೌಲಭ್ಯದಿಂದ ಗ್ರಾಮೀಣ ಹಾಗೂ ನಗರ ಪ್ರದೇಶಗಳ ವಿದ್ಯಾರ್ಥಿಗಳಿಗೆ ಕೂಡ ಅನ್ವಯವಾಗಲಿದೆ.

ಸಿಬ್ಬಂದಿಗಳಿಗೆ ವಿಶೇಷ ಸೂಚನೆ

ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳ ಬೇಡಿಕೆಯ ಮೇರೆಗೆ ಪರೀಕ್ಷಾ ಕೇಂದ್ರಗಳ ಸಮೀಪ ಕೋರಿಕೆ ನಿಲುಗಡೆ (Request Stop) ನೀಡುವಂತೆ ಬಸ್ ಸಿಬ್ಬಂದಿಗಳಿಗೆ ನಿರ್ದೇಶನ ನೀಡಲಾಗಿದೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ KSRTC ಸ್ಪಷ್ಟ ಸೂಚನೆ ನೀಡಿದೆ. ಇದರಿಂದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಲು ಅನುಕೂಲವಾಗಲಿದೆ.

ಬಿಎಂಟಿಸಿಯಿಂದಲೂ ಉಚಿತ ಸೇವೆ

ನಗರ ಪ್ರದೇಶಗಳ ವಿದ್ಯಾರ್ಥಿಗಳಿಗಾಗಿ BMTC ಸಹ ಇದೇ ಅವಧಿಯಲ್ಲಿ ಉಚಿತ ಬಸ್ ಸೇವೆ ಒದಗಿಸುತ್ತಿದೆ. 2025–26ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷಾ ದಿನಗಳಲ್ಲಿ ಪ್ರವೇಶ ಪತ್ರ ತೋರಿಸಿ ಬಿಎಂಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷಾ ಒತ್ತಡದ ನಡುವೆ ಸಾರಿಗೆ ಸಮಸ್ಯೆ ಎದುರಿಸದಂತೆ ಮಾಡಲು ತೆಗೆದುಕೊಳ್ಳಲಾದ ಈ ಕ್ರಮವನ್ನು ವಿದ್ಯಾರ್ಥಿಗಳು ಮತ್ತು ಪೋಷಕರು ಸ್ವಾಗತಿಸಿದ್ದಾರೆ.

ಈ ಕುರಿತು ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಒಟ್ಟಾರೆ, ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತ ಬಸ್ ಸೇವೆ ಪಡೆಯಬಹುದು. ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಂತೆ ಸಾರಿಗೆ ನಿಗಮಗಳು ಕೋರಿವೆ.



Source link

Leave a Reply

Your email address will not be published. Required fields are marked *