Tejasvi Surya metro protest case ಅನುಮತಿ ಇಲ್ಲದೆ ಪ್ರತಿಭಟನೆ: ಸಂಸದ ತೇಜಸ್ವಿ ಸೂರ್ಯ ಸೇರಿ 9 ಮಂದಿಗೆ ನೋಟಿಸ್‌! | Protest Without Permission Notice Issued To Mp Tejasvi Surya And 8 Others

Tejasvi Surya metro protest case ಅನುಮತಿ ಇಲ್ಲದೆ ಪ್ರತಿಭಟನೆ: ಸಂಸದ ತೇಜಸ್ವಿ ಸೂರ್ಯ ಸೇರಿ 9 ಮಂದಿಗೆ ನೋಟಿಸ್‌! | Protest Without Permission Notice Issued To Mp Tejasvi Surya And 8 Others


Namma Metro fare hike protest ಜಯನಗರದ ಆರ್‌.ವಿ.ಮೆಟ್ರೋ ನಿಲ್ದಾಣದ ಬಳಿ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಸಂಸದ ತೇಜಸ್ವಿ ಸೂರ್ಯ, ಶಾಸಕ ಸಿ.ಕೆ.ರಾಮಮೂರ್ತಿ ಸೇರಿದಂತೆ 9 ಮಂದಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. 

ಬೆಂಗಳೂರು (ಫೆ.19) ಅನುಮತಿ ಪಡೆಯದೆ ಜಯನಗರದ ಆರ್‌.ವಿ.ಮೆಟ್ರೋ ರೈಲು ನಿಲ್ದಾಣದ ಬಳಿ ಪ್ರತಿಭಟನೆ ಮಾಡಿದ ಆರೋಪದ ಪ್ರಕರಣ ಸಂಬಂಧ ಸಂಸದ ತೇಜಸ್ವಿ ಸೂರ್ಯ, ಶಾಸಕ ಸಿ.ಕೆ.ರಾಮಮೂರ್ತಿ ಸೇರಿ 9 ಮಂದಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೋಟಿಸ್‌ ಜಾರಿಗೊಳಿಸಿದೆ.

ಜಯನಗರ ಠಾಣೆ ಇನ್ಸ್‌ಪೆಕ್ಟರ್‌ ಆರ್‌.ದೀಪಕ್‌ ಸಲ್ಲಿಸಿದ ಖಾಸಗಿ ದೂರು(ಪಿಸಿಆರ್‌) ಕುರಿತು ಬುಧವಾರ ವಿಚಾರಣೆ ನಡೆಸಿದ ನ್ಯಾಯಾಲಯವು, ಆರೋಪಿಗಳಿಗೆ ನೋಟಿಸ್‌ ಜಾರಿಗೊಳಿಸಿತು. ಬಳಿಕ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಮುಂದಿನ ವಿಚಾರಣೆಯನ್ನು ಮಾ.6ಕ್ಕೆ ಮುಂದೂಡಿತು.

ಇದನ್ನೂ ಓದಿ:Namma Metro fare hike: ‘ಸುಳ್ಳು ಹೇಳೋಕೆ ನಾಚಿಕೆ ಆಗೋಲ್ವಾ? ಏನು ತಿಂತೀರಿ?’ ರಾಜ್ಯ ಸರ್ಕಾರದ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಕಿಡಿ

ಮೆಟ್ರೋ ರೈಲು ಪ್ರಯಾಣ ದರ ಏರಿಕೆ ವಿರೋಧಿಸಿ ಫೆ.9ರಂದು ಸಂಸದ ತೇಜಸ್ವಿಸೂರ್ಯ, ಶಾಸಕ ಸಿ.ಕೆ.ರಾಮಮೂರ್ತಿ ಸೇರಿದಂತೆ ಕೆಲವರು ಜಯನಗರದ ಆರ್‌.ವಿ. ಮೆಟ್ರೋ ರೈಲು ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ್ದರು. ಅನುಮತಿ ಪಡೆಯದೇ ಪ್ರತಿಭಟನೆ ಮಾಡಲಾಗಿದೆ ಎಂದು ಆರೋಪಿಸಿ ಜಯನಗರ ಠಾಣೆ ಇನ್ಸ್‌ಪೆಕ್ಟರ್ ಆರ್‌.ದೀಪಕ್‌ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು.

ಇದನ್ನೂ ಓದಿ: HD kumaraswamy: ಬೇರೆ ರಾಜ್ಯಗಳಲ್ಲಿ ಯಾಕೆ ಮೆಟ್ರೋ ದರ ಹೆಚ್ಚಳವಾಗಿಲ್ಲ? ಕೇಂದ್ರದ ಮೇಲೆ ಗೂಬೆ ಕೂರಿಸೋದು ಕಾಂಗ್ರೆಸ್ ಚಾಳಿ

YouTube video player



Source link

Leave a Reply

Your email address will not be published. Required fields are marked *