Headlines

ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ; ಇಂದು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ನಜೀರ್‌ ಅಹಮದ್‌ ರಾಜೀನಾಮೆ? | Nazeer Ahmed To Resign Cm Political Secretary Post Davanagere Rebellion Row San

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಬಂಡಾಯಕ್ಕೆ ಚಿತಾವಣೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಹೈಕಮಾಂಡ್ ಸೂಚನೆ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು (ಏ.13): ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ, ಪರಿಷತ್ ಸದಸ್ಯ ನಜೀರ್‌ ಅಹ್ಮದ್‌ ಅವರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ವಿರುದ್ಧ ಮುಸ್ಲಿಮರ ಬಂಡಾಯಕ್ಕೆ ಪರೋಕ್ಷ ಚಿತಾವಣೆ ಮಾಡಿದ ಆರೋಪ ನಜೀರ್ ಅಹ್ಮದ್ ವಿರುದ್ಧ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರ ತಲೆದಂಡಕ್ಕೆ ಹೈಕಮಾಂಡ್‌ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದರು ಎನ್ನಲಾಗಿದೆ.

ಭಾನುವಾರ ನಜೀರ್‌ ಅಹ್ಮದ್‌ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಸಿದ್ದರಾಮಯ್ಯ ಚಿಕ್ಕಮಗಳೂರು ಪ್ರವಾಸದಲ್ಲಿ ಇದ್ದ ಕಾರಣ ಭೇಟಿ ಮಾಡಿಲ್ಲ. ಸೋಮವಾರ ಮುಖ್ಯಮಂತ್ರಿಗಳು ವಾಪಸ್‌ ಭೇಟಿ ಮಾಡುವ ಸಾಧ್ಯತೆಯಿದ್ದು, ಈ ವೇಳೆ ರಾಜೀನಾಮೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Source link

Leave a Reply

Your email address will not be published. Required fields are marked *