Headlines

Greater Bengaluru 5 ಹೊಸ ನಗರ ಪಾಲಿಕೆಗಳಿಗೆ ₹300 ಕೋಟಿ ಅನುದಾನ, 500 ವಾರ್ಡ್‌ಗಳ ರಚನೆ! | Greater Bengaluru 5 New Municipal Corporations 500 Wards And Rs 300 Cr Grant Sat

Greater Bengaluru 5 ಹೊಸ ನಗರ ಪಾಲಿಕೆಗಳಿಗೆ ₹300 ಕೋಟಿ ಅನುದಾನ, 500 ವಾರ್ಡ್‌ಗಳ ರಚನೆ! | Greater Bengaluru 5 New Municipal Corporations 500 Wards And Rs 300 Cr Grant Sat



Greater Bengaluru 5 ಹೊಸ ನಗರ ಪಾಲಿಕೆಗಳಿಗೆ ₹300 ಕೋಟಿ ಅನುದಾನ, 500 ವಾರ್ಡ್‌ಗಳ ರಚನೆ! | Greater Bengaluru 5 New Municipal Corporations 500 Wards And Rs 300 Cr Grant Sat

ಗ್ರೇಟರ್ ಬೆಂಗಳೂರಿನ 5 ಹೊಸ ನಗರ ಪಾಲಿಕೆಗಳಿಗೆ ₹300 ಕೋಟಿ ಅನುದಾನ ಕೊಲಾಗುತ್ತದೆ. ಬಿಬಿಎಂಪಿಯಲ್ಲಿದ್ದ 198 ವಾರ್ಡ್‌ಗಳನ್ನು 500ಕ್ಕೆ ಹೆಚ್ಚಿಸಲಾಗುತ್ತದೆ. ಎಲ್ಲ 5 ನಗರ ಪಾಲಿಕೆಗಳಿಗೆ ಚುನಾವಣೆ ನಡೆಯುವವರೆಗೆ ಗ್ರೇಟರ್ ಬೆಂಗಳೂರಿಗೆ ಮಹೇಶ್ವರ ರಾವ್ ಮುಖ್ಯ ಆಯುಕ್ತರು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಬೆಂಗಳೂರು (ಸೆ.03): ಗ್ರೇಟರ್ ಬೆಂಗಳೂರಿನ 5 ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್ 1 ರಂದು ನೆರವೇರಿಸಲಾಗುವುದು. ಎಲ್ಲಾ ಪಾಲಿಕೆಗಳ ಗಡಿ ಭಾಗಗಳಲ್ಲಿ ಗಡಿ ಗೋಪುರಗಳನ್ನು ನಿರ್ಮಾಣ ಮಾಡಲಾಗುವುದ. ಎಲ್ಲ ನಗರ ಪಾಲಿಕೆಗಳಿಗೆ 300 ಕೋಟಿ ರೂ. ಅನುದಾನ ಮೀಸಲಿಡಲಾಗುವುದು. ಬಿಬಿಎಂಪಿಯಲ್ಲಿದ್ದ 198 ವಾರ್ಡ್‌ಗಳನ್ನು ಇದೀಗ ಐದು ನಗರ ಪಾಲಿಕೆಗೆ ಹೊಂದಿಕೆಯಾಗುವಂತೆ 500 ವಾರ್ಡ್‌ಗಳಾಗಿ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಚೇರಿಯ ನಾಮಫಲಕ ಅನಾವರಣಗೊಳಿಸಿದ ನಂತರ ಶಿವಕುಮಾರ್ ಅವರು ಬುಧವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪ್ರತಿ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುಧಾರಣೆ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ 500 ಮಂದಿ ಎಂಜಿನಿಯರ್ ಗಳಿಗೆ ಅನುಮೋದನೆ ನೀಡಲಾಗಿದೆ. ಈ ಹಿಂದೆ 198 ವಾರ್ಡ್ ಗಳಿದ್ದವು. ಈಗ 500 ವಾರ್ಡ್ ಗಳ ರಚನೆಯ ಅನುಮತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪಾಲಿಕೆಗಳ ಆಡಳಿತಾತ್ಮಕ ವೆಚ್ಚ, ಸಂಬಳ ಹಾಗೂ ನಿವೃತ್ತಿ ವೇತನಕ್ಕೆ ಎಂದು ಬಿಬಿಎಂಪಿಯಿಂದ ಸುಮಾರು 300 ಕೋಟಿ ರೂ. ಹಣ ಬಿಡುಗಡೆಗೆ ಮಾಡಲಾಗುವುದು’ ಎಂದರು.

ನಾಗರಿಕರು, ವಾಸ್ತುಶಿಲ್ಪಿಗಳು ಪಾಲಿಕೆ ಕಚೇರಿಗಳ ವಿನ್ಯಾಸ ಹೇಗಿರಬೇಕು ಎಂದು ಸಲಹೆ ನೀಡಬಹುದು. ಜೊತೆಗೆ ವಿನ್ಯಾಸಗಳನ್ನು ಸಹ ನೀಡಬಹುದು. ಇದರಲ್ಲಿ ಅತ್ಯುತ್ತಮ ಮೂರು ಅಥವಾ ಐದು ವಿನ್ಯಾಸಗಳನ್ನು ಆಯ್ಕೆ ಮಾಡಲಾಗುವುದು. ಇದಕ್ಕೆ 5 ಲಕ್ಷ ರೂ. ಬಹುಮಾನ ನೀಡಲಾಗುವುದು.

ಪ್ರತಿ ನಗರ ಪಾಲಿಕೆಗಳಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳು (IAS Officer’s), ಒಬ್ಬರು ಕೆಎಎಸ್ (KAS Officer), ಇಬ್ಬರು ಮುಖ್ಯ ಎಂಜಿನಿಯರ್ ಗಳು (Chief Engineer’s) ಹಾಗೂ ಅಗತ್ಯ ಕಚೇರಿ ಸಿಬ್ಬಂದಿ ಕೆಲಸ ಮಾಡಲಿದ್ದಾರೆ. ಬೆಂಗಳೂರು ನಗರಕ್ಕೆ ಉತ್ತಮವಾದ ಆಡಳಿತ ಹಾಗೂ ಜನರ ಬಾಗಿಲಿಗೆ ಸರ್ಕಾರವನ್ನು ತೆಗೆದುಕೊಂಡು ಹೋಗಬೇಕು ಎಂದು ನಿರ್ಣಯಗಳನ್ನು ತೆಗೆದುಕೊಂಡು ಪಾಲಿಕೆಗಳು ಕೆಲಸ ಮಾಡಲಿವೆ. ಪಾಲಿಕೆಗಳ ವ್ಯಾಪ್ತಿಗೆ ಬರುವ ರಸ್ತೆ, ಚರಂಡಿ ಸೇರಿದಂತೆ ಇತರೇ ಸಂಗತಿಗಳನ್ನು ಗುರುತಿಸುವ ಕೆಲಸವಾಗಲಿದೆ’ ಎಂದು ಹೇಳಿದರು.

Scroll to load tweet…

ಹೊಸ ಪ್ರದೇಶಗಳನ್ನು ಐದು ಪಾಲಿಕೆಗಳ ವ್ಯಾಪ್ತಿಗೆ ಸೇರಿಸಿಕೊಳ್ಳುವ ಬಗ್ಗೆ ಕೇಳಿದಾಗ, ‘ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಸ್ಥಳೀಯ ಸಂಸ್ಥೆಗಳನ್ನು ಜಿಬಿಎ ವ್ಯಾಪ್ತಿಗೆ ಈಗಲೇ ಸೇರಿಸಿದರೆ ಪ್ರಸ್ತುತ ಪ್ರತಿನಿಧಿಗಳಾಗಿರುವವನ್ನೂ ಪಾಲಿಕೆ ಸದಸ್ಯರು ಎಂದು ಪರಿಗಣಿಸಬೇಕಾಗುತ್ತದೆ. ಮೊದಲು ಈಗ ರಚನೆಯಾಗಿರುವ ಪಾಲಿಕೆಗಳಿಗೆ ಚುನಾವಣೆ ನಡೆದ ನಂತರ ಇತರೇ ಪ್ರದೇಶಗಳ ವಿಲೀನದ ಬಗ್ಗೆ ಭವಿಷ್ಯದಲ್ಲಿ ಯೋಚಿಸಲಾಗವುದು’ ಎಂದರು.

ನೂತನ ಆಯುಕ್ತರುಗಳ ಜವಾಬ್ದಾರಿಗಳ ಬಗ್ಗೆ ಕೇಳಿದಾಗ, ‘ನೂತನ ಆಯುಕ್ತರುಗಳು ಜನರ ನಡುವೆಯಿದ್ದು ಕೆಲಸ ಮಾಡಬೇಕು. ಜಿಬಿಎ ಆಯುಕ್ತರು ಫುಟ್ ಪಾತ್, ನೀರು, ರಸ್ತೆ ಸೇರಿದಂತೆ ಇತರೇ ಕೆಲಸಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ದಿನಕ್ಕೆ 17- 18 ಗಂಟೆ ಕೆಲಸ ಮಾಡಬೇಕಾಗುತ್ತದೆ. ಆದ ಕಾರಣಕ್ಕೆ ಹಿರಿಯ ಅಧಿಕಾರಿಗಳ ಜೊತೆ ಯುವ ಅಧಿಕಾರಿಗಳನ್ನೂ ನಿಯೋಜನೆ ಮಾಡಲಾಗಿದೆ. ‘ಮಹೇಶ್ವರ್ ರಾವ್ ಅವರು ಜಿಬಿಎಗೆ ಮುಖ್ಯ ಆಯುಕ್ತರಾಗಿ ಹಾಗೂ ಆಡಳಿತಾಧಿಕಾರಿಯಾಗಿ ಚುನಾವಣೆ ನಡೆಯುವವರೆಗೂ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಪ್ರಾಧಿಕಾರದ ಸಮಿತಿಗೆ 75 ಸದಸ್ಯರನ್ನು ನೇಮಕ ಮಾಡಲಾಗಿದೆ’ ಎಂದು ತಿಳಿಸಿದರು.



Source link

Leave a Reply

Your email address will not be published. Required fields are marked *