Headlines

ಮುಡಾ ಹಗರಣ: ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್‌ಗೆ ‘ಡಿಫಾಲ್ಟ್’ ಜಾಮೀನು ಮಂಜೂರು; ಲೋಕಾಯುಕ್ತಕ್ಕೆ ಹಿನ್ನಡೆ! | Muda Scam Former Commissioner Gt Dinesh Kumar Gets Default Bail Lokayukta Fails To File Chargesheet Sat

ಮುಡಾ ಹಗರಣ: ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್‌ಗೆ ‘ಡಿಫಾಲ್ಟ್’ ಜಾಮೀನು ಮಂಜೂರು; ಲೋಕಾಯುಕ್ತಕ್ಕೆ ಹಿನ್ನಡೆ! | Muda Scam Former Commissioner Gt Dinesh Kumar Gets Default Bail Lokayukta Fails To File Chargesheet Sat



ಮುಡಾ ಹಗರಣ: ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್‌ಗೆ ‘ಡಿಫಾಲ್ಟ್’ ಜಾಮೀನು ಮಂಜೂರು; ಲೋಕಾಯುಕ್ತಕ್ಕೆ ಹಿನ್ನಡೆ! | Muda Scam Former Commissioner Gt Dinesh Kumar Gets Default Bail Lokayukta Fails To File Chargesheet Sat

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬಹುಕೋಟಿ ಅಕ್ರಮ ನಿವೇಶನ ಹಂಚಿಕೆ ಪ್ರಕರಣದ ಆರೋಪಿ, ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್‌ಗೆ ಜಾಮೀನು ಲಭಿಸಿದೆ. ಲೋಕಾಯುಕ್ತ ಪೊಲೀಸರು ನಿಗದಿತ 90 ದಿನಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸದ ಕಾರಣ, ನ್ಯಾಯಾಲಯವು ಅವರಿಗೆ ‘ಡಿಫಾಲ್ಟ್ ಜಾಮೀನು’ ಮಂಜೂರು ಮಾಡಿದೆ.

ಬೆಂಗಳೂರು (ಮಾ.16): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿಗಳ ಅಕ್ರಮ ನಿವೇಶನ ಹಂಚಿಕೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಮುಡಾ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರ ವಿಳಂಬ ಧೋರಣೆಯಿಂದಾಗಿ ದಿನೇಶ್ ಕುಮಾರ್ ಅವರಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಲೋಕಾಯುಕ್ತಕ್ಕೆ ತಟ್ಟಿದ ಚಾರ್ಜ್‌ಶೀಟ್ ವಿಳಂಬದ ಬಿಸಿ:

ಯಾವುದೇ ಕ್ರಿಮಿನಲ್ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿದ ನಂತರ ನಿಗದಿತ ಕಾಲಮಿತಿಯೊಳಗೆ ತನಿಖಾ ಸಂಸ್ಥೆಯು ದೋಷಾರೋಪ ಪಟ್ಟಿ (Charge Sheet) ಸಲ್ಲಿಸಬೇಕಾಗುತ್ತದೆ. ಮುಡಾ ಪ್ರಕರಣದಲ್ಲಿ ದಿನೇಶ್ ಕುಮಾರ್ ಅವರನ್ನು ಅರೆಸ್ಟ್ ಮಾಡಿ 90 ದಿನಗಳು ಕಳೆದಿದ್ದರೂ, ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸುವಲ್ಲಿ ವಿಫಲರಾಗಿದ್ದಾರೆ. ಕಾನೂನಿನ ಪ್ರಕಾರ 90 ದಿನಗಳಲ್ಲಿ ಚಾರ್ಜ್‌ಶೀಟ್ ಸಲ್ಲಿಸದಿದ್ದರೆ ಆರೋಪಿಗೆ ‘ಡಿಫಾಲ್ಟ್ ಜಾಮೀನು’ (Default Bail) ಪಡೆಯುವ ಹಕ್ಕಿರುತ್ತದೆ. ಇದನ್ನೇ ಆಧಾರವಾಗಿಟ್ಟುಕೊಂಡು ದಿನೇಶ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ನೀಡಿದೆ.

ನ್ಯಾಯಾಲಯ ವಿಧಿಸಿದ ಷರತ್ತುಗಳು:

  • ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.
  • ಜಾಮೀನು ನೀಡುವಾಗ ನ್ಯಾಯಾಲಯವು ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಿದೆ:
  • ಆರೋಪಿಯು ಒಂದು ಲಕ್ಷ ರೂಪಾಯಿ ಮೊತ್ತದ ಬಾಂಡ್ ಮತ್ತು ಅಷ್ಟೇ ಮೊತ್ತದ ಶ್ಯೂರಿಟಿಯನ್ನು ನೀಡಬೇಕು.
  • ನ್ಯಾಯಾಲಯದ ಅನುಮತಿಯಿಲ್ಲದೆ ವಿದೇಶ ಪ್ರವಾಸ ಮಾಡುವಂತಿಲ್ಲ.
  • ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಮತ್ತು ಸಾಕ್ಷ್ಯಗಳನ್ನು ನಾಶಪಡಿಸಲು ಪ್ರಯತ್ನಿಸಬಾರದು.

ಏನಿದು ಮುಡಾ ಅಕ್ರಮ ಪ್ರಕರಣ?

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಪ್ರಭಾವಿಗಳಿಗೆ ಮತ್ತು ಮಧ್ಯವರ್ತಿಗಳಿಗೆ ನೂರಾರು ಕೋಟಿ ಮೌಲ್ಯದ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಜಿ.ಟಿ. ದಿನೇಶ್ ಕುಮಾರ್ ಅವರು ಮುಡಾ ಆಯುಕ್ತರಾಗಿದ್ದ ಅವಧಿಯಲ್ಲಿ ಈ ಅಕ್ರಮಗಳು ನಡೆದಿವೆ ಎನ್ನಲಾಗಿತ್ತು. ಈ ಹಗರಣ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನ ಮೂಡಿಸಿತ್ತು ಮತ್ತು ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ವೀರುದ್ಧವಾಗಿ ವಾಗ್ದಾಳಿ ನಡೆಸಿದ್ದವು.

ತನಿಖಾ ಸಂಸ್ಥೆಯ ಕಾರ್ಯಕ್ಷಮತೆ ಬಗ್ಗೆ ಪ್ರಶ್ನೆ:

ಪ್ರಕರಣದ ಗಂಭೀರತೆಯನ್ನು ಅರಿತಿದ್ದರೂ ಲೋಕಾಯುಕ್ತ ಪೊಲೀಸರು 90 ದಿನಗಳ ಕಾಲಮಿತಿಯೊಳಗೆ ತನಿಖೆ ಪೂರ್ಣಗೊಳಿಸಿ ಚಾರ್ಜ್‌ಶೀಟ್ ಸಲ್ಲಿಸದಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಪ್ರಭಾವಿ ಅಧಿಕಾರಿಯೊಬ್ಬರು ತಾಂತ್ರಿಕ ಕಾರಣಗಳಿಂದಾಗಿ ಜೈಲಿನಿಂದ ಹೊರಬರುತ್ತಿರುವುದು ಲೋಕಾಯುಕ್ತಕ್ಕೆ ಹಿನ್ನಡೆ ಎಂದೇ ಭಾವಿಸಲಾಗಿದೆ. ಸದ್ಯ ಜಾಮೀನು ಪಡೆದಿರುವ ದಿನೇಶ್ ಕುಮಾರ್ ಅವರು ಶೀಘ್ರದಲ್ಲೇ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.



Source link

Leave a Reply

Your email address will not be published. Required fields are marked *