Headlines

Mandya Women’s College results ಮಂಡ್ಯ: ಪದವಿ ಪರೀಕ್ಷೆಗಳು ಮುಗಿದ ದಿನವೇ ರಿಸಲ್ಟ್‌ ನೀಡಿದ ಸರ್ಕಾರಿ ಕಾಲೇಜು! | Mandya Govt College Creates History Results Declared On The Day Exams Ended

ಮಂಡ್ಯದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) 2025-26ನೇ ಸಾಲಿನ ಪದವಿ ಪರೀಕ್ಷೆಗಳ ಫಲಿತಾಂಶವನ್ನು ಕೊನೆಯ ಪರೀಕ್ಷೆ ನಡೆದ ದಿನವೇ ಪ್ರಕಟಿಸಿ ಹೊಸ ಶೈಕ್ಷಣಿಕ ದಾಖಲೆ ನಿರ್ಮಿಸಿದೆ. ಪರೀಕ್ಷೆಗಳು ಮುಗಿದ ಕೆಲವೇ ಗಂಟೆಗಳಲ್ಲಿ ಮೌಲ್ಯಮಾಪನ ಪೂರ್ಣಗೊಳಿಸಿ ಫಲಿತಾಂಶ ನೀಡಿರುವುದು ರಾಜ್ಯದ ಗಮನ ಸೆಳೆದಿದೆ.

ಮಂಡ್ಯ (ಫೆ.3): ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು, 2025-26 ನೇ ಸಾಲಿನ ವಿವಿಧ ಪದವಿ ಪರೀಕ್ಷೆಗಳ ಮೌಲ್ಯಮಾಪನ ಕಾರ್ಯವನ್ನು ದಾಖಲೆ ಸಮಯದಲ್ಲಿ ಮುಗಿಸಿ ಕೊನೆಯ ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸುವ ಮೂಲಕ ರಾಜ್ಯದ ಗಮನ ಸೆಳೆದಿದೆ. 

ಸರ್ಕಾರಿ ಸಂಸ್ಥೆಯೊಂದು ಇಷ್ಟೊಂದು ವೇಗವಾಗಿ ಫಲಿತಾಂಶ ನೀಡಿರುವುದು ಕಾಲೇಜಿನ ಪರಿಶ್ರಮದ ಹೆಗ್ಗುರುತಾಗಿದೆ. ಕಾಲೇಜಿನ ಬಿಎ, ಬಿಕಾಂ, ಬಿಬಿಎ, ಬಿಎಸ್ಸಿ, ಬಿಸಿಎ, ಬಿಎಫ್ಎಸ್ಐ, ಇ-ಕಾಮರ್ಸ್ ಪದವಿ ಪರೀಕ್ಷೆಗಳು ಜ.2ರಿಂದ ಜ.31ರವರೆಗೆ ನಡೆದಿದ್ದವು. ಪರೀಕ್ಷೆಗಳು ಜ.31ರಂದು ಮುಕ್ತಾಯಗೊಂಡಿದ್ದು ಅದೇ ದಿನ ಸಂಜೆ 4ಕ್ಕೆ ಮೌಲ್ಯಮಾಪನ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಲಾಯಿತು. ವಿಶೇಷವೆಂದರೆ ಮೌಲ್ಯಮಾಪನ ಮುಗಿದ ಕೇವಲ ಒಂದು ಗಂಟೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಫಲಿತಾಂಶ ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಶಿಸ್ತುಬದ್ಧ ಕೆಲಸ ಹಾಗೂ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದಾಗಿ ಈ ಅಸಾಧಾರಣ ಸಾಧನೆ ಸಾಧ್ಯವಾಗಿದೆ. ಈ ಕಾರ್ಯವನ್ನು ಪರೀಕ್ಷಾ ನಿಯಂತ್ರಣಾಧಿಕಾರಿ ಡಾ.ರವಿಕಾಂತ್ ಲಂಬಾಣಿ ಮತ್ತು ತಂಡ ಪರೀಕ್ಷೆ ಆರಂಭದಿಂದ ಮುಕ್ತಾಯದವರೆಗೂ ಸತತ ಪರಿಶ್ರಮ, ತಾಳ್ಮೆ, ಜಾಣ್ಮೆ, ಅತ್ಯಂತ ಶಿಸ್ತಿನಿಂದ ಶ್ರಮಿಸಿದ ಫಲವಾಗಿ ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಲು ಸಹಕಾರಿಯಾಯಿತೆಂದು ಹೇಳಿದರು.

Source link

Leave a Reply

Your email address will not be published. Required fields are marked *