
ಬಂಗಾಳ ರಾಜಕಾರಣದ ಚಾಣಕ್ಯ ಎಂದೇ ಖ್ಯಾತರಾಗಿದ್ದ ಹಿರಿಯ ರಾಜಕಾರಣಿ ಮತ್ತು ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ (71) ಹೃದಯಾಘಾತದಿಂದ ನಿಧನರಾಗಿದ್ದಾರೆ. ಟಿಎಂಸಿಯ ಸ್ಥಾಪಕ ಸದಸ್ಯರಾಗಿದ್ದ ಅವರು, ನಂತರ ಬಿಜೆಪಿಗೆ ಸೇರಿ, ಮತ್ತೆ ಟಿಎಂಸಿಗೆ ಮರಳುವ ಮೂಲಕ ತಮ್ಮ ರಾಜಕೀಯ ಜೀವನದಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ಬಂಗಾಳ ರಾಜಕಾರಣದ ಚಾಣಕ್ಯ ನಿಧನ:
ಕೋಲ್ಕತ್ತಾ :ಬಂಗಾಳ ರಾಜಕಾರಣದ ಚಾಣಕ್ಯ ಎಂದೇ ಖ್ಯಾತಿ ಗಳಿಸಿದ್ದ ಹಿರಿಯ ರಾಜಕಾರಣಿ ಮುಕುಲ್ ರಾಯ್ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಟಿಎಂಸಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದ ಅವರು ಯಪಿಎ ಸರ್ಕಾರದ ಅವಧಿಯಲ್ಲಿ ರೈಲ್ವೆ ಸಚಿವರಾಗಿಯೂ ಕೆಲಸ ಮಾಡಿದ್ದರು. ಆದರೆ ಅವರು ಈಗ ಹಠಾತ್ ಆಗಿ ಸಾವನ್ನಪ್ಪಿದ್ದಾರೆ. ಮುಕುಲ್ ರಾಯ್ ಅವರು ಸೋಮವಾರ ಬೆಳಗಿನ ಜಾವ 1.30 ಕ್ಕೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
71 ನೇ ವಯಸ್ಸಿನಲ್ಲಿ ಅವರು ಹೃದಯಾಘಾತದಿಂದ ನಿಧನರಾಗಿದ್ದು, ಅವರ ಸಾವಿನ ಸುದ್ದಿಯನ್ನು ಅವರ ಮಗ ಸುಭ್ರಂಶು ರಾಯ್ ದೃಢಪಡಿಸಿದ್ದಾರೆ. ಬಂಗಾಳ ರಾಜಕೀಯದ ಚಾಣಕ್ಯ ಎಂದೇ ಸಾಮಾನ್ಯವಾಗಿ ಕರೆಯಲ್ಪಡುತ್ತಿದ್ದ ಅವರು ಕೃಷ್ಣನಗರ ಉತ್ತರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ತಮ್ಮ ಬಹಳ ಸುದೀರ್ಘ ರಾಜಕಾರನದಲ್ಲಿ ಅವರು ದೇಶದ 32ನೇ ರೈಲ್ವೆ ಸಚಿವರಾಗಿಯೂ ಕೆಲಸ ಮಾಡಿದ್ದರು. ಪಶ್ಚಿಮ ಬಂಗಾಳದಿಂದ ಎರಡು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.
ಇದನ್ನೂ ಓದಿ: ಡ್ರಗ್ ದೊರೆ ಹತ್ಯೆ: ಮೆಕ್ಸಿಕೋದಲ್ಲಿ ಹೊತ್ತಿದ ಸೇಡಿನ ಜ್ವಾಲೆ
1998 ರಲ್ಲಿ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ರಚನೆಯಾದಾಗ ರಾಯ್ ಅದರ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದರು. ಪಕ್ಷದ ನಾಯಕತ್ವದೊಂದಿಗಿನ ಭಿನ್ನಾಭಿಪ್ರಾಯಗಳ ನಂತರ, ಅವರು 2017 ರಲ್ಲಿ ಭಾರತೀಯ ಜನತಾ ಪಕ್ಷವನ್ನು ಸೇರಿದರು. 2021 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ರಾಯ್ ಬಿಜೆಪಿ ಟಿಕೆಟ್‌ನಲ್ಲಿ ಕೃಷ್ಣನಗರ ಉತ್ತರದಲ್ಲಿ ಸ್ಪರ್ಧಿಸಿ ಗೆದ್ದಿದ್ದರು. ಆದರೆ ಚುನಾವಣೆಯ ನಂತರ ತೃಣಮೂಲ ಕಾಂಗ್ರೆಸ್‌ಗೆ ಮರಳಿದರು. ತಮ್ಮ ರಾಜಕೀಯ ಜೀವನದಲ್ಲಿ ತೃಣಮೂಲ ಕಾಂಗ್ರೆಸ್ ಕೇಂದ್ರದಲ್ಲಿ ಆಡಳಿತ ಒಕ್ಕೂಟದ ಭಾಗವಾಗಿದ್ದಾಗ 2011 ರಲ್ಲಿ ಯುಪಿಎ -2 ಸರ್ಕಾರದಲ್ಲಿ ರೈಲ್ವೆ ಸಚಿವರಾಗಿಯೂ ಸೇವೆ ಸಲ್ಲಿಸಿದರು.
ಇದನ್ನೂ ಓದಿ: ಕೊನೆಗೂ ತಮ್ಮ ಮದುವೆಯನ್ನು ಸೋಶಿಯಲ್ ಮೀಡಿಯಾದಲ್ಲಿ ಘೋಷಿಸಿದ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ