Headlines

ಇಂದಿನಿಂದ ಟಿ20 ವಿಶ್ವಕಪ್: ಭಾರತದ ಪಂದ್ಯ ಯಾವಾಗ? ಎಷ್ಟು ಗಂಟೆಗೆ ಆರಂಭ? ಯಾವ ಚಾನೆಲ್‌ನಲ್ಲಿ ನೇರ ಪ್ರಸಾರ? | India Vs Usa T20 World Cup 2026 Match Time Venue Toss Time And Live Streaming Details Kvn

ಇಂದಿನಿಂದ ಟಿ20 ವಿಶ್ವಕಪ್: ಭಾರತದ ಪಂದ್ಯ ಯಾವಾಗ? ಎಷ್ಟು ಗಂಟೆಗೆ ಆರಂಭ? ಯಾವ ಚಾನೆಲ್‌ನಲ್ಲಿ ನೇರ ಪ್ರಸಾರ? | India Vs Usa T20 World Cup 2026 Match Time Venue Toss Time And Live Streaming Details Kvn


2026ರ ಟಿ20 ವಿಶ್ವಕಪ್‌ನಲ್ಲಿ ಹಾಲಿ ಚಾಂಪಿಯನ್ ಭಾರತವು ತನ್ನ ಮೊದಲ ಪಂದ್ಯವನ್ನು ಯುಎಸ್‌ಎ ವಿರುದ್ಧ ಮುಂಬೈನ ವಾಂಖೇಡೆ ಮೈದಾನದಲ್ಲಿ ಆಡಲಿದೆ. ಪ್ರಮುಖ ಆಟಗಾರರಾದ ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಿತ್ ರಾಣಾ ಅಲಭ್ಯರಾಗಿರುವ ಕಾರಣ, ಮೊಹಮ್ಮದ್ ಸಿರಾಜ್ ತಂಡಕ್ಕೆ ಮರಳಿದ್ದಾರೆ.

ಮುಂಬೈ: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಟೀಂ ಇಂಡಿಯಾ ಇಂದು ತನ್ನ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಕ್ರಿಕೆಟ್ ಶಿಶು ಯುಎಸ್‌ಎ ತಂಡವನ್ನು ಎದುರಿಸಲಿದೆ. ಭಾರತ ತಂಡವು ಗ್ರೂಪ್‌ ‘ಎ’ನಲ್ಲಿ ಸ್ಥಾನ ಪಡೆದಿದ್ದು, ಯುಎಸ್‌ಎ ಎದುರು ಮುಂಬೈನ ವಾಂಖೇಡೆ ಮೈದಾನದಲ್ಲಿ ತನ್ನ ಪಾಲಿನ ಮೊದಲ ಪಂದ್ಯವನ್ನು ಇಂದು ಆಡಲಿದೆ.

ಭಾರತ ಹಾಗೂ ಯುಎಸ್‌ಎ ತಂಡಗಳು ಈ ಮೊದಲು 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲೂ ಮುಖಾಮುಖಿಯಾಗಿದ್ದವು. ಆಗಲೂ ಭಾರತ ತಂಡವು ಸುಲಭ ಗೆಲುವು ದಾಖಲಿಸಿತ್ತು. ಇಂದು ನಡೆಯಲಿರುವ ಪಂದ್ಯದಲ್ಲೂ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಗೆಲ್ಲುವ ಫೇವರೇಟ್ ಎನಿಸಿಕೊಂಡಿದೆ. ಮೊದಲ ಪಂದ್ಯ ಆರಂಭಕ್ಕೂ ಮೊದಲೇ ಬೌಲಿಂಗ್ ಆಲ್ರೌಂಡರ್ ಹರ್ಷಿತ್ ರಾಣಾ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇನ್ನು ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ತೀವ್ರ ಜ್ವರದಿಂದ ಬಳಲುತ್ತಿದ್ದು ಮೊದಲ ಪಂದ್ಯಕ್ಕೆ ಅಲಭ್ಯರಾಗುವುದು ಬಹುತೇಕ ಖಚಿತ ಎನಿಸಿಕೊಂಡಿದೆ. ಇನ್ನು ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಕೂಡಾ ಸ್ನಾಯು ಸೆಳೆತದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಹರ್ಷಿತ್ ರಾಣಾ ಭಾರತ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಅನುಭವಿ ಮೊಹಮ್ಮದ್ ಸಿರಾಜ್ ಭಾರತ ತಂಡ ಕೂಡಿಕೊಂಡಿದ್ದು, ಇಂದಿನ ಪಂದ್ಯಕ್ಕೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ. ಅಂದಹಾಗೆ ಮೊಹಮ್ಮದ್ ಸಿರಾಜ್ 2024ರ ಜುಲೈನಲ್ಲಿ ಭಾರತ ಪರ ಕೊನೆಯ ಬಾರಿಗೆ ಟಿ20 ಪಂದ್ಯವನ್ನಾಡಿದ್ದರು.

ಭಾರತ ಹಾಗೂ ಯುಎಸ್‌ಎ ನಡುವಿನ ಪಂದ್ಯವು ಎಲ್ಲಿ? ಎಷ್ಟು ಗಂಟೆಯಿಂದ ಆರಂಭ?

ಭಾರತ ಹಾಗೂ ಯುನೇಟೆಡ್ ಸ್ಟೇಟ್ಸ್ ಆಫ್ ಅಮೆರಿಕ ತಂಡಗಳ ನಡುವಿನ ಪಂದ್ಯವು ಫೆಬ್ರವರಿ 07ರ ಶನಿವಾರವಾದ ಇಂದು ಸಂಜೆ ಭಾರತೀಯ ಕಾಲಮಾನ 7 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯಕ್ಕೆ ಐತಿಹಾಸಿಕ ಮುಂಬೈನ ವಾಂಖೇಡೆ ಮೈದಾನ ಆತಿಥ್ಯ ವಹಿಸಿದೆ. ಇನ್ನು ಭಾರತ ಹಾಗೂ ಯುಎಸ್‌ಎ ನಡುವಿನ ಪಂದ್ಯದ ಟಾಸ್ ಭಾರತೀಯ ಕಾಲಮಾನ ಸಂಜೆ 6.30ಕ್ಕೆ ನಡೆಯಲಿದೆ.

ಈ ಮ್ಯಾಚ್ ಉಚಿತವಾಗಿ ಎಲ್ಲಿ ವೀಕ್ಷಿಸಬಹುದು?

ಭಾರತ ಹಾಗೂ ಯುಎಸ್‌ಎ ನಡುವಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಸಬ್‌ಸ್ಕ್ರಿಷನ್‌ ಮಾಡಿ ವೀಕ್ಷಿಸಬಹುದಾಗಿದೆ. ಇದಷ್ಟೇ ಅಲ್ಲದೇ ಜಿಯೋ ಹಾಟ್‌ಸ್ಟಾರ್‌ ಓಟಿಟಿ ಫ್ಲಾಟ್‌ಫಾರಂನಲ್ಲಿಯೂ ಟಿ20 ವಿಶ್ವಕಪ್ ಪಂದ್ಯಗಳನ್ನು ವೀಕ್ಷಿಸಬಹುದು.

ಸಂಭವನೀಯ ಆಟಗಾರರ ಪಟ್ಟಿ

ಭಾರತ: ಅಭಿಷೇಕ್‌ ಶರ್ಮಾ, ಇಶಾನ್ ಕಿಶನ್‌, ತಿಲಕ್‌ ವರ್ಮಾ, ಸೂರ್ಯಕುಮಾರ್ ಯಾದವ್(ನಾಯಕ), ಹಾರ್ದಿಕ್‌ ಪಾಂಡ್ಯ, ರಿಂಕು ಸಿಂಗ್, ಶಿವಂ ದುಬೆ, ಅಕ್ಷರ್‌ ಪಟೇಲ್, ಅರ್ಶ್‌ದೀಪ್‌ ಸಿಂಗ್, ಮೊಹಮ್ಮದ್ ಸಿರಾಜ್, ವರುಣ್‌ ಚಕ್ರವರ್ತಿ.

ಅಮೆರಿಕ: ಸಾಯಿತೇಜ, ಆ್ಯಂಡ್ರೆಯೆಸ್‌, ಜಹಂಗೀರ್‌, ಮೊನಾಂಕ್‌(ನಾಯಕ್‌), ಮಿಲಿಂದ್‌, ಹರ್ಮೀತ್‌, ಶುಭಂ, ಮೊಹ್ಸಿನ್‌, ಶ್ಯಾಡ್ಲೆ, ಸೌರಭ್‌, ಅಲಿ ಖಾನ್‌.

YouTube video player



Source link

Leave a Reply

Your email address will not be published. Required fields are marked *