ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎನಿಂದ 18 ಕಡೆ ದಾಳಿ | Nia Conducts Raids At 18 Locations In Suhas Shetty Case

ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎನಿಂದ 18 ಕಡೆ ದಾಳಿ | Nia Conducts Raids At 18 Locations In Suhas Shetty Case



ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎನಿಂದ 18 ಕಡೆ ದಾಳಿ | Nia Conducts Raids At 18 Locations In Suhas Shetty Case

ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹ* ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯ ಅಧಿಕಾರಿಗಳು ಶನಿವಾರ ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ 18 ಕಡೆ ದಾಳಿ ನಡೆಸಿದ್ದಾರೆ.

 ಬೆಂಗಳೂರು :  ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹ* ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯ ಅಧಿಕಾರಿಗಳು ಶನಿವಾರ ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ 18 ಕಡೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ, 11 ಮೊಬೈಲ್ ಫೋನ್‌ಗಳು, 13 ಸಿಮ್ ಕಾರ್ಡ್‌ಗಳು, 8 ಮೆಮೊರಿ ಕಾರ್ಡ್‌ಗಳು ಹಾಗೂ ಇನ್ನಿತರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ, ಮಂಗಳೂರು ನಗರ ಪೊಲೀಸರು ಆರಂಭದಲ್ಲಿ ನಡೆಸಿದ ತನಿಖಾ ವರದಿಯನ್ನು ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದಾರೆ.

ಸುಹಾಸ್‌ ಶೆಟ್ಟಿ ಹ* ಪ್ರಕರಣದಲ್ಲಿ ಬಂಧಿತರಾಗಿರುವ 12 ಆರೋಪಿಗಳ ಮನೆ ಸೇರಿದಂತೆ ಒಟ್ಟು 18 ಕಡೆಗಳಲ್ಲಿ ದಾಳಿ ನಡೆದಿದೆ. ಶನಿವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಮೂರು ಜಿಲ್ಲೆಗಳಲ್ಲಿ ಎನ್‌ಐಎ ತಂಡ ಏಕಕಾಲಕ್ಕೆ ಈ ದಾಳಿ ನಡೆಸಿದ್ದು, ಮನೆಯವರೊಂದಿಗೆ ಆರೋಪಿಗಳಿಗೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಠಾಣಾ ವ್ಯಾಪ್ತಿಯಲ್ಲಿ 10 ಕಡೆ ಹಾಗೂ ಸುರತ್ಕಲ್‌ನ 4 ಕಡೆ ದಾಳಿ ನಡೆಸಲಾಗಿದೆ. ಈ ಪ್ರಕರಣದಲ್ಲಿ ಬಂಧಿತ ಹೆಚ್ಚಿನ ಆರೋಪಿಗಳ ನಿವಾಸಗಳು ಬಜ್ಪೆ ಮತ್ತು ಸುರತ್ಕಲ್‌ ಪರಿಸರದಲ್ಲಿವೆ. ಘಟನೆ ನಡೆದ ಸಂದರ್ಭ ಮೊಬೈಲ್‌ನಲ್ಲಿ ಚಿತ್ರೀಕರಣ ನಡೆಸಿದ ಕಿನ್ನಿಪದವುನಲ್ಲಿರುವ ವಸತಿ ಸಮುಚ್ಛಯಕ್ಕೆ ಭೇಟಿ ನೀಡಿದ ಅಧಿಕಾರಿಗಳು, ಅಲ್ಲಿ ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಘಟನಾ ಸ್ಥಳದ ಪರಿಸರದಲ್ಲಿದ್ದ ಅಂಗಡಿ ಮಾಲೀಕರಿಂದಲೂ ವಿವರ ಪಡೆದಿದ್ದಾರೆ. ಇದೇ ವೇಳೆ, ಮಂಗಳೂರು ನಗರ ಪೊಲೀಸರು ಆರಂಭದಲ್ಲಿ ನಡೆಸಿದ ತನಿಖಾ ವರದಿಯನ್ನು ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದಾರೆ.

ಇದೇ ವೇಳೆ, ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ 2 ಕಡೆ ದಾಳಿ ನಡೆದಿದೆ. ಕೋಟೆಹೊಳೆ ಹಾಗೂ ರುದ್ರಪಾದಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳು ಪ್ರಕರಣದ ಇಬ್ಬರು ಆರೋಪಿಗಳ ಮನೆಗಳಿಗೆ ಭೇಟಿ ನೀಡಿದ್ದಾರೆ. ಇದೇ ವೇಳೆ, ಹಾಸನದಲ್ಲಿಯೂ 2 ಕಡೆ ದಾಳಿ ನಡೆದಿದ್ದಾಗಿ ವರದಿಯಾಗಿದೆ.

2025ರ ಮೇ 1ರಂದು ರಾತ್ರಿ ಸುಹಾಸ್ ಶೆಟ್ಟಿ ತಮ್ಮ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಬಜಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ದಾಳಿ ನಡೆಸಿ ನಡುರಸ್ತೆಯಲ್ಲೇ ಮಾರಕಾಯುಧಗಳಿಂದ ಕಡಿದು ಕೊ* ಮಾಡಲಾಗಿತ್ತು. ಈ ಪ್ರಕರಣದಲ್ಲಿ ಒಟ್ಟು 12 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಎರಡು ವರ್ಷಗಳ ಹಿಂದೆ ಸುರತ್ಕಲ್‌ನಲ್ಲಿ ನಡೆದಿದ್ದ ಪಾಝಿಲ್‌ ಕೊ* ಪ್ರಕರಣಕ್ಕೆ ಪ್ರತೀಕಾರವಾಗಿ ಆತನ ಸಹೋದರರ ಸಹಚರರೊಂದಿಗೆ ಸೇರಿಕೊಂಡು ಹ* ನಡೆಸಿರುವುದು ಪೊಲೀಸ್‌ ತನಿಖೆಯಿಂದ ತಿಳಿದು ಬಂದಿತ್ತು. ಹಿಂದೂ ಸಂಘಟನೆ ಹಾಗೂ ಬಿಜೆಪಿಯ ಒತ್ತಾಯದಿಂದ ಕೇಂದ್ರ ಗೃಹ ಸಚಿವಾಲಯ ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ ಜೂನ್ 7ರಂದು ಆದೇಶಿಸಿತ್ತು.



Source link

Leave a Reply

Your email address will not be published. Required fields are marked *