ರಶ್ಮಿಕಾ-ವಿಜಯ್‌ ಮದುವೆ ಪ್ರಸಾರಕ್ಕೆ ₹60 ಕೋಟಿ! ಇದೊಂದು ಕಾರಣಕ್ಕೆ ನೆಟ್‌ಫ್ಲಿಕ್ಸ್‌ ಆಫರ್ ತಿರಸ್ಕರಿಸಿದ ಜೋಡಿ! | Rashmika Mandanna And Vijay Deverakonda Wedding Ott Giant Offers Rs 60 Crore For Exclusive Rights

ರಶ್ಮಿಕಾ-ವಿಜಯ್‌ ಮದುವೆ ಪ್ರಸಾರಕ್ಕೆ ₹60 ಕೋಟಿ! ಇದೊಂದು ಕಾರಣಕ್ಕೆ ನೆಟ್‌ಫ್ಲಿಕ್ಸ್‌ ಆಫರ್ ತಿರಸ್ಕರಿಸಿದ ಜೋಡಿ! | Rashmika Mandanna And Vijay Deverakonda Wedding Ott Giant Offers Rs 60 Crore For Exclusive Rights


ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅವರ ಮದುವೆ ಪ್ರಸಾರ ಹಕ್ಕಿಗೆ ನೆಟ್‌ಫ್ಲಿಕ್ಸ್‌ 60 ಕೋಟಿ ರೂ. ಆಫರ್ ನೀಡಿತ್ತು ಎಂದು ವರದಿಯಾಗಿದೆ. ಆದರೆ, ಈ ಜೋಡಿಯು ಗೌಪ್ಯತೆಗೆ ಹೆಚ್ಚು ಮಹತ್ವ ನೀಡಿ, ಹಣಕ್ಕಿಂತ ನೆನಪುಗಳು ದೊಡ್ಡವು ಎಂದು ಈ ಬೃಹತ್ ಮೊತ್ತದ ಆಫರ್ ಅನ್ನು ತಿರಸ್ಕರಿಸಿದ್ದಾರೆ

ಹೈದರಾಬಾದ್‌ (ಫೆ.15): ನಟ ವಿಜಯ್‌ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಮದುವೆ ಸಮಾರಂಭವನ್ನು ಒಟಿಟಿಯಲ್ಲಿ ಪ್ರಸಾರ ಮಾಡುವುದಕ್ಕೆ ನೆಟ್‌ಫ್ಲಿಕ್ಸ್‌ 60 ಕೋಟಿ ರು. ಆಫರ್ ನೀಡಿದೆ. ಆದರೆ ಈ ಜೋಡಿ ಗೌಪ್ಯತೆ ಕಾರಣಕ್ಕೆ ಅದನ್ನು ತಿರಸ್ಕರಿಸಿದೆ ಎಂದು ವರದಿಗಳು ಹೇಳಿವೆ.

ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಮದುವೆ ಎಲ್ಲಿ?

ತಾರಾ ಜೋಡಿಯು ತಮ್ಮ ಮದುವೆ ಕಾರ್ಯಕ್ರಮ ವೈಯಕ್ತಿಕ ಹಾಗೂ ಬೆಲೆ ಕಟ್ಟುವುದಕ್ಕೆ ಸಾಧ್ಯವಾಗದೇ ಇರುವಂಥದ್ದು. ಆ ನೆನಪುಗಳು ಹಣಕ್ಕಿಂತ ದೊಡ್ಡವು ಎನ್ನುವ ಅಭಿಪ್ರಾಯ ಹೊಂದಿದ್ದಾರೆ. ಇದೇ ಕಾರಣಕ್ಕೆ ಅವರು ನೆಟ್‌ಫ್ಲಿಕ್ಸ್‌ ಆಫರ್‌ ತಿರಸ್ಕರಿಸಿದ್ದಾರೆ ಎನ್ನಲಾಗಿದೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್‌ ದೇವರಕೊಂಡ ಈ ತಿಂಗಳಲ್ಲಿ ರಾಜಸ್ಥಾನದ ಉದಯಪುರದಲ್ಲಿ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಹಲವು ದಿನಗಳಿಂದಲೂ ಹರಿದಾಡಿತ್ತು. ಆದರೆ ಈ ಬಗ್ಗೆ ಇಬ್ಬರೂ ಸ್ಪಷ್ಟಪಡಿಸಿಲ್ಲ.

ಅಭಿಮಾನಿಗಳಿಗೆ ಅಚ್ಚರಿ

ಬಾಲಿವುಡ್‌ ಜೋಡಿ ತಮ್ಮ ಮದುವೆ ಕಾರ್ಯಕ್ರಮಗಳ ಪ್ರಸಾರ ಹಕ್ಕನ್ನು ದೊಡ್ಡ ಮೊತ್ತಕ್ಕೆ ಮಾರಾಟ ಮಾಡುವ ನಡುವೆ ಈ ತಾರಾ ಜೋಡಿಯ ನಿರ್ಧಾರ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.

YouTube video player



Source link

Leave a Reply

Your email address will not be published. Required fields are marked *